ತುಮಕೂರು (ಜೂ.04): ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಇಳಿಕೆಯಾಗಿದ್ದು ಕಳೆದ ಒಂದು ವಾರದಲ್ಲಿ 50 ರೆಡ್ ಝೋನ್ ಸಂಖ್ಯೆ ಕಡಿಮೆಯಾಗಿದೆ.
ಮೇ.25ರಂದು 27ಕ್ಕೆ ಇಳಿದಿದೆ. ಅದರಂತೆಯೇ ಹಾಟ್‌ಸ್ಪಾಟ್‌ಗಳ ಸಂಖ್ಯೆಯೂ ಸಹ 240ರಿಂದ 123ಕ್ಕೆ ಇಳಿದಿದೆ ಎಂದು ಜಿಲ್ಲಾಧಿಕಾರಿ ವೈ ಎಸ್ ಪಾಟೀಲ ತಿಳಿಸಿದ್ದಾರೆ.
ಅದೇ ರೀತಿ ಶೇ.48ರಷ್ಟಿದ್ದ ಕೋವಿಡ್ 19 ಪಾಸಿಟಿವಿಟಿ ಪ್ರಮಾಣ ಶೇ.17ಕ್ಕೆ ಇಳಿದಿದ್ದು 2500ರಿಂದ 3000ದವರೆಗೆ ದೃಢವಾಗುತ್ತಿದ್ದ ಸೋಂಕಿನ ಪ್ರಕರಣಗಳ ಸಂಖ್ಯೆಯೂ 750 ರಿಂದ 850ಕ್ಕೆ ಇಲಿದಿದೆ.
ಪಾಸಿಟಿವಿಟಿ ಪ್ರಮಾಣ ಮತ್ತಷ್ಟು ಇಳಿಕೆಯಾಗಲಿದೆ. ಗ್ರಾಮೀಣ ಪ್ರದೇಶದಲ್ಲಿಯೂ ಸೋಂಕಿನ ಪ್ರಮಾಣ ತಗ್ಗಿದೆ. ಜೂ.2ರ ವೇಳೆ 1242 ಹಳ್ಳಿಗಳಲ್ಲಿ ಒಂದೂ ಪ್ರಕರಣಗಳಿಲ್ಲ. 503 ಗ್ರಾಮಗಳಲ್ಲಿ ಒಂದೇ ಸೋಂಕಿನ ಪ್ರಕರಣ ದಾಖಲಾಗಿದೆ.
ಕೊರೋನಾ ಹೆಚ್ಚಳ ಬಗ್ಗೆ ಸಚಿವ ಆತಂಕ: ಖುದ್ದು ತುಮಕೂರಿಗೆ ಸಿಎಂ ಭೇಟಿ
ಕೋವಿಡ್ ಪರೀಕ್ಷೆ ಹೆಚ್ಚಳ : ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರ ನಿರ್ದೇಶನಗಳಂತೆ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಮಾಡಬೇಕು. ಸೋಂಕು ದೃಢಪಟ್ಟವರಿಗೆ ತಕ್ಷಣವೇ ಕೋವಿಡ್ ಔಷಧ ಕಿಟ್ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಮುಂದಿನ ವಾರ ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣ ಕಡಿಮೆ ಮಾಡಲು ಜಿಲ್ಲಾಡಳಿತದಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.