ರಾಜ್ಯದಲ್ಲಿ ಸೋಂಕು ಹೆಚ್ಚಳದ ಭೀತಿ : ಭೂಮಿತಾಯಿಗೆ ಪೂಜೆ

Kannadaprabha News   | Asianet News
Published : May 13, 2021, 07:38 AM IST
ರಾಜ್ಯದಲ್ಲಿ ಸೋಂಕು ಹೆಚ್ಚಳದ ಭೀತಿ :  ಭೂಮಿತಾಯಿಗೆ ಪೂಜೆ

ಸಾರಾಂಶ

ಬಳ್ಳಾರಿ ತಾಲೂಕಿನ ಕೊಳಗಲ್ಲು ಗ್ರಾಮದಲ್ಲಿ ಕೊರೋನಾ ಸೋಂಕು ಏರಿಕೆ ಗ್ರಾಮದಲ್ಲಿ ವಿಶೇಷ ಪೂಜೆ ಮಾಡಿ, ಭೂಮಿ ತಾಯಿಗೆ ಚರಗ   ಬೆಳಗಿನ ಜಾವ ಮಡಿಯುಟ್ಟು ಅಡುಗೆ ತಯಾರಿಸಿ ಪೂಜೆ

ಬಳ್ಳಾರಿ (ಮೇ.13): ತಾಲೂಕಿನ ಕೊಳಗಲ್ಲು ಗ್ರಾಮದಲ್ಲಿ ಕೊರೋನಾ ಸೋಂಕು ಹಾಗೂ ಸಾವಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ವಿಶೇಷ ಪೂಜೆ ಮಾಡಿ, ಭೂಮಿ ತಾಯಿಗೆ ಚರಗ ಚೆಲ್ಲಲಾಗಿದೆ.

 ಬೆಳಗಿನ ಜಾವ ಮಡಿಯುಟ್ಟು ಅಡುಗೆ ತಯಾರಿಸಿರುವ ಗ್ರಾಮಸ್ಥರು ಭೂಮಿ ತಾಯಿಗೆ ಪೂಜೆ ಸಲ್ಲಿಸಿ, ಊರಿನ ಸುತ್ತ ಅನ್ನಪ್ರಸಾದವನ್ನು (ಅನ್ನ) ಪ್ರೋಕ್ಷಣೆ ಮಾಡಲಾಗಿದೆ. ಗ್ರಾಮದಲ್ಲಿ ಈಗಾಗಲೇ 300ಕ್ಕೂ ಹೆಚ್ಚು ಸೋಂಕಿತರು ಇದ್ದು ಸಾವಿನ ಸಂಖ್ಯೆ ಸಹ ಏರಿಕೆಯಾದ ಹಿನ್ನೆಲೆಯಲ್ಲಿ ಗ್ರಾಮಸ್ಥರು ದೇವರ ಮೊರೆ ಹೋಗಿದ್ದಾರೆ. 

ಲಸಿಕಾ ಕೇಂದ್ರಗಳು ಕೊರೋನಾ ಹಾಟ್‌ಸ್ಪಾಟ್‌ ಆಗುತ್ತಿವೆಯೇ? ...

ಗ್ರಾಮದ ಮೇಲೆ ದೇವರ ಅವಕೃಪೆಯೇ ಇದಕ್ಕೆಲ್ಲ ಕಾರಣ ಎಂದರಿತು ವಿವಿಧ ಪೂಜಾ ವಿಧಿ ವಿಧಾನಗಳನ್ನು ಹಮ್ಮಿಕೊಂಡಿದ್ದರು ಎಂದು ತಿಳಿದು ಬಂದಿದೆ. ಗ್ರಾಮಸ್ಥರು ಪೂಜೆ ಸಲ್ಲಿಸುತ್ತಿರುವ ದೃಶ್ಯ ಮುಖ್ಯ ರಸ್ತೆಯಲ್ಲಿ ಅಳವಡಿಸಲಾಗಿರುವ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

PREV
click me!

Recommended Stories

4,808 ಕೋಟಿ ವೆಚ್ಚದಲ್ಲಿ ರಸ್ತೆಗಳ ಅಭಿವೃದ್ಧಿ
ಮಧುಗಿರಿ: ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು