ಉಡುಪಿ (ಮೇ.21): ಹಳ್ಳಿಗಳಲ್ಲಿ ಕೊರೋನಾ ಸೋಂಕು ಹೆಚ್ವುತ್ತಿದ್ದು, ಈ ಬಗ್ಗೆ ಹೆಚ್ಚು ಗಮನ ಕೊಡಿ ಎಂದು ಮುಖ್ಯಮಂತ್ರಿ ಮತ್ತು ಪ್ರಧಾನಿ ಅವರು ಜಿಲ್ಲಾಧಿಕಾರಿಗಳ ವಿಡಿಯೋ ಕಾನ್ಫರೆಸ್ಸ್‌ನಲ್ಲಿ ಸೂಚಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಹಳ್ಳಿಗಳಿಗೆ ಭೇಟಿ ನೀಡುತ್ತಿದ್ದಾರೆ, ಕೋವಿಡ್ ಪೀಡಿತ ಹಳ್ಳಿಗಳಿಗೆ ಭೇಟಿ ಕೊಟ್ಟು ಅಲ್ಲಿನ ವ್ಯವಸ್ಥೆಗಳ ಪರಿಶೀಲನೆ ಮಾಡುತ್ತಿದ್ದಾರೆ.
ಸ್ವತಃ ಕಾರ್ಯಾಚರಣೆಗಿಳಿದ ಉಡುಪಿ ಜಿಲ್ಲಾಧಿಕಾರಿ : ವಾಹನ ಜಪ್ತಿ
ಸುರಿಯುತ್ತಿರುವ ಜಡಿಮಳೆಯಲ್ಲಿಯೂ ಹೆಬ್ರಿ ತಾಲೂಕಿನ ಮುದ್ರಾಡಿ, ಕಾಪು ತಾಲೂಕು ಕಟಪಾಡಿ, ಪಡುಬಿದ್ರೆ ಮುಂತಾದ ಹಳ್ಳಿಗಳಿಗೆ ಅಧಿಕಾರಿಗಳೊಂದಿಗೆ ತೆರಳಿದ ಜಿಲ್ಲಾಧಿಕಾರಿ ಅನೇಕ ಮನೆಗಳಿಗೆ ಭೇಟಿ ನೀಡಿ ಕೊವೀಡ್ ಬಗ್ಗೆ ಜನಜಾಗೃತಿ ಮೂಡಿಸಿದರು.
ಜೊತೆಗೆ ಸೋಂಕಿತರ ಮನೆಗೆ ತೆರಳಿ ಧೈರ್ಯ ತುಂಬಿದರು. ಅಗತ್ಯವಿದ್ದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುವಂತೆ ಮನವರಿಕೆ ಮಾಡಿದರು. ಹಳ್ಳಿಗಳಿಂದ ತಾಲೂಕಿಗೆ ಚಿಕಿತ್ಸೆಗೆ ಬರುವವರಿಗೆ ವಾಹನ ವ್ಯವಸ್ಥೆಗೂ ಸೂಚನೆ ನೀಡಿದರು.