ಕೊರೋನಾ ಹೆಚ್ಚಾಗುತ್ತಿದೆ. ಯಾವುದೇ ಕ್ರಮಕ್ಕೂ ಬಗ್ಗದೇ ಮುನ್ನುಗ್ಗುತ್ತಿದೆ. ಸಾವು-ನೋವುಗಳು ಮಿತಿ ಮೀರಿವೆ. ಇದರ ಬೆನ್ನಲ್ಲೇ ಆತಂಕವೂ ಹೆಚ್ಚಾಗಿದೆ. ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬೆಂಗಳೂರು (ಏ.24): ಕೊರೋನಾ ಮಹಾಮಾರಿ ಸೋಂಕು ದಿನದಿಂದ ದಿನಕ್ಕೆ ಅಟ್ಟಹಾಸ ಮೆರೆಯುತ್ತಿದೆ. ಸಾವಿನ ಸಂಖ್ಯೆಯೂ ಹೆಚ್ಚಾಗುತ್ತಿದೆ ಇನ್ನೊಂದೆಡೆ ಕೊರೋನಾ ಆತಂಕವೂ ಜನರನ್ನು ಕೊಲ್ಲುತ್ತಿದ್ದು, ಬೆಂಗಳೂರಿನಲ್ಲಿ ಕೋವಿಡ್ ರೋಗಿಯೋರ್ವರು ಅತ್ಮಹತ್ಯೆಗೆ ಶರಣಾಗಿದ್ದಾರೆ.
ಬೆಂಗಳೂರಿನ ವಿಜಯನಗರದ ಆಸ್ಪತ್ರೆಯಲ್ಲಿ ಕೋವಿಡ್ ಪಾಸಿಟಿವ್ ಹಿನ್ನೆಲೆ ಚಿಕಿತ್ಸೆ ಪಡೆಯುತ್ತಿದ್ದ ಅಂಜನಾ ನಗರದ ರಾಮಣ್ಣ (61) ಎಂಬ ವ್ಯಕ್ತಿ ಶುಕ್ರವಾರ ರಾತ್ರಿ 1.30ರ ಸುಮಾರಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
undefined
ಕೋವಿಡೇತರ ರೋಗಿಗಳಿಗೆ ಚಿಕಿತ್ಸೆ ನಿರಾಕರಿಸಿದರೆ ಕಾನೂನು ಕ್ರಮ
ಆಸ್ಪತ್ರೆಯ ವಾರ್ಡಿನ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾರೆ. ವಿಜಯನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಮೃತ ದೇಹವನ್ನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.
ಕೋವಿಡ್ ಸೋಂಕಿತ ವ್ಯಕ್ತಿ ಆತ್ಮಹತ್ಯೆಗೆ ಇನ್ನೂ ಕಾರಣ ತಿಳಿದುಬಂದಿಲ್ಲ.
ಈ ಬಗ್ಗೆ ವಿಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.