ಆಸ್ಪತ್ರೆ ಹೊರಗಿನ ಮರಕ್ಕೆ ನೇಣು ಹಾಕಿಕೊಂಡು ಸೋಂಕಿತ ಆತ್ಮಹತ್ಯೆ

Kannadaprabha News   | Asianet News
Published : Apr 27, 2021, 08:14 AM ISTUpdated : Apr 27, 2021, 08:27 AM IST
ಆಸ್ಪತ್ರೆ ಹೊರಗಿನ ಮರಕ್ಕೆ ನೇಣು ಹಾಕಿಕೊಂಡು ಸೋಂಕಿತ ಆತ್ಮಹತ್ಯೆ

ಸಾರಾಂಶ

ಕೊರೋನಾ ಮಹಾಮಾರಿ ಅಟ್ಟಹಾಸ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಸೋಂಕಿತರ ಸಾವಿನ ಪ್ರಮಾಣವೂ ಹೆಚ್ಚಿದೆ. ಮಂಡ್ಯದಲ್ಲಿ ಸೋಂಕಿತ ವ್ಯಕ್ತಿಯೋರ್ವ ಆಸ್ಪತ್ರೆ ಎದುರಲ್ಲೇ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. 

ಶ್ರೀರಂಗಪಟ್ಟಣ (ಏ.27): ಕೊರೋನಾ ಸೋಂಕಿತ ವ್ಯಕ್ತಿಯೊಬ್ಬರು ಆಸ್ಪತ್ರೆಯ ಆವರಣದಲ್ಲೇ ನೇಣಿಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸೋಮವಾರ ನಡೆದಿದೆ.

 ಶ್ರೀರಂಗಪಟ್ಟಣ ತಾಲೂಕಿನ ಅರಕೆರೆ ಗ್ರಾಮದ ಪೇಟೆ ಬೀದಿ ನಿವಾಸಿ ಜಯಕುಮಾರ್‌(48) ಆತ್ಮಹತ್ಯೆಗೆ ಶರಣಾದವರು. ಅವರಿಗೆ ಏ.21ರಂದು ಕೋವಿಡ್‌ ದೃಢಪಟ್ಟಿದ್ದ ಹಿನ್ನೆಲೆಯಲ್ಲಿ ಗಣಂಗೂರು ಕೋವಿಡ್‌ ಚಿಕಿತ್ಸಾ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಕೊರೋನಾ ಸೋಂಕಿನಿಂದ ಪೊಲೀಸ್ ಅಧಿಕಾರಿ ಸಾವು

 ಮತ್ತೆ ಜ್ವರ ತೀವ್ರಗೊಂಡು ಉಸಿರಾಟದ ಸಮಸ್ಯೆ ಹೆಚ್ಚಾದ ಕಾರಣ ಏ.25ರ ಭಾನುವಾರ ಬೆಳಗ್ಗೆ ಪಟ್ಟಣದ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಕರೆ ತರಲಾಗಿತ್ತು. ಸೋಮವಾರ ಮುಂಜಾನೆ 4ರ ವೇಳೆ ಆಸ್ಪತ್ರೆ ಆವರಣದ ಮರವೊಂದಕ್ಕೆ ಜಯಕುಮಾರ್‌ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಶ್ರೀರಂಗಪಟ್ಟಣ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದೆ.

ಕೋವಿಡ್ ಸೋಂಕಿತರ ಗಮನಕ್ಕೆ
 

PREV
click me!

Recommended Stories

ಪ್ರಿ ವೆಡ್ಡಿಂಗ್ ಫೋಟೋ ಶೂಟ್ ಮುಗಿಸಿ ಬೈಕ್‌ನಲ್ಲಿ ತೆರಳುತ್ತಿದ್ದ ಜೋಡಿಗೆ ಲಾರಿ ಡಿಕ್ಕಿ, ಸ್ಥಳದಲ್ಲೇ ಸಾವು
ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ