ಶಿವಮೊಗ್ಗ : ಕೊರೋನಾ ಸೋಂಕಿತ ವ್ಯಕ್ತಿ ಆತ್ಮಹತ್ಯೆಗೆ ಶರಣು

Published : May 23, 2021, 10:30 AM IST
ಶಿವಮೊಗ್ಗ : ಕೊರೋನಾ ಸೋಂಕಿತ ವ್ಯಕ್ತಿ ಆತ್ಮಹತ್ಯೆಗೆ ಶರಣು

ಸಾರಾಂಶ

ನದಿಗೆ ಹಾರಿ ಕೊರೋನಾ ಸೋಂಕಿತ ವ್ಯಕ್ತಿ ಆತ್ಮಹತ್ಯೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಲ್ಲಿ ಘಟನೆ ಸೋಂಕು ಹಿನ್ನೆಲೆ ಭೀತಿಯಿಂದ ಆತ್ಮಹತ್ಯೆಗೆ ಶರಣು

ಶಿವಮೊಗ್ಗ (ಮೇ.23):  ಶಿವಮೊಗ್ಗ ಜಿಲ್ಲೆಯಲ್ಲಿ  ದಿನದಿನವೂ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚುತ್ತಿದ್ದು, ಇಲ್ಲಿನ  ಸೋಂಕಿತ ವ್ಯಕ್ತಿಯೋರ್ವ ಕೆನಾಲ್ಗೆ‌ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಶಿವಮೊಗ್ಗ  ಜಿಲ್ಲೆ ಸಾಗರ ತಾಲೂಕಿನ ಕಾರ್ಗಲ್ ಬಳಿಯಲ್ಲಿ ಕೋವಿಡ್ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವರು ಇಂದು ಇಲ್ಲಿನ ಕೆನಾಲ್ಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 

ಮೇ.22ರ ರಿಪೋರ್ಟ್: ರಾಜ್ಯದಲ್ಲಿ ಸೋಂಕಿತರಿಗಿಂತ ಗುಣಮುಖರಾದವರ ಸಂಖ್ಯೆ ದುಪ್ಪಟ್ಟು ...

ಕೆಪಿಸಿ ಮಾಜಿ ಉದ್ಯೋಗಿಯಾಗಿದ್ದ ಲಿಂಗೇಗೌಡ ( 68 ) ಸೋಂಕಿನ ಹಿನ್ನೆಲೆ ಭಯಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಈ ಸಂಬಂಧ ಇದೀಗ ಕಾರ್ಗಲ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಸೋಂಕು ಒಂದು ಕಡೆ ವ್ಯಕ್ತಿಗಳ ಪ್ರಾಣ ಕಳೆಯುತ್ತಿದ್ದರೆ, ಇನ್ನೊಂದೆಡೆ ಸೋಂಕಿನಿಂದ ಭಯಗೊಂಡು ಅನೇಕರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. 

ಸದ್ಯ ಶಿವಮೊಗ್ಗ ಜಿಲ್ಲೆಯಲ್ಲಿ ಇದುವರೆಗೆ 45282 ಕೋವಿಡ್ ಸೊಂಕು ಪತ್ತೆಯಾಗಿದೆ. 37 ಸಾವಿರ ಜನರು ಗುಣಮುಖರಾಗಿದ್ದಾರೆ

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

PREV
click me!

Recommended Stories

4,808 ಕೋಟಿ ವೆಚ್ಚದಲ್ಲಿ ರಸ್ತೆಗಳ ಅಭಿವೃದ್ಧಿ
ಮಧುಗಿರಿ: ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು