ಆಂಬುಲೆನ್ಸ್‌ನಲ್ಲೇ ಮಗುವಿಗೆ ಜನ್ಮ ನೀಡಿದ ಕೊರೋನಾ ಸೋಂಕಿತೆ : ಇಬ್ಬರೂ ಸುರಕ್ಷಿತ

Suvarna News   | Asianet News
Published : May 10, 2021, 02:24 PM IST
ಆಂಬುಲೆನ್ಸ್‌ನಲ್ಲೇ  ಮಗುವಿಗೆ ಜನ್ಮ ನೀಡಿದ ಕೊರೋನಾ ಸೋಂಕಿತೆ  : ಇಬ್ಬರೂ ಸುರಕ್ಷಿತ

ಸಾರಾಂಶ

ಮಾರ್ಗಮಧ್ಯೆಯೇ ಆಂಬುಲೆನ್ಸ್ ನಲ್ಲಿ ಮಗುವಿಗೆ ಜನ್ಮ ನೀಡಿದ ಕೊರೋನಾ ಸೋಂಕಿತೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕಿನಲ್ಲಿ ಘಟನೆ  ಸದ್ಯ ತಾಯಿ-ಮಗುವನ್ನು ವಿವಿ ಪುರಂ ಆಸ್ಪತ್ರೆಗೆ ದಾಖಲು

ಮೈಸೂರು (ಮೇ.10): ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿವೆ. ಕೋವಿಡ್ ಸೋಂಕಿತೆಯೋರ್ವರು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆಯೇ ಆಂಬುಲೆನ್ಸ್ ನಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ. 

ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕಿನ ಚಿಕ್ಕಳ್ಳಿ ಬಳಿ ತಲಕಾಡು ಗ್ರಾಮದ ಸವಿತಾ (26) ಆಂಬುಲೆನ್ಸ್‌ನಲ್ಲೇ ಮಗುವಿಗೆ ಜನ್ಮ ನೀಡಿದ್ದಾರೆ. 

ಮೈಸೂರು : ಬೇರೆ ಜಿಲ್ಲೆಯಿಂದ ಬರುವವರೆಗೆ ಪ್ರವೇಶ ನಿಷೇಧ ...

ಕೊರೊನಾ ಪಾಸಿಟಿವ್ ಹಿನ್ನೆಲೆ ಗರ್ಭಿಣಿಯನ್ನು ಆಂಬುಲೆನ್ಸ್ ನಲ್ಲಿ ಕರೆದೊಯ್ಯಲು ಸಿಬ್ಬಂದಿ ಹಿಂದೇಟು ಹಾಕಿದ್ದು,  ಬಳಿಕ ಅಧಿಕಾರಿಗಳ ಆದೇಶದ ಮೇರೆಗೆ  ಮೈಸೂರಿನ ಆಸ್ಪತ್ರೆಗೆ ಕರೆದೋಯ್ಯುತ್ತಿದ್ದರು. ಈ ವೇಳೆ ಆಂಬುಲೆನ್ಸ್‌ನಲ್ಲಿಯೇ ಮಹಿಳೆ ಮಗುವಿಗೆ ಜನ್ಮ ನೀಡಿದ್ದಾರೆ. 

8 ದಿನದ ಮಗುವಿಗೆ ಕೊರೋನಾ ಪಾಸಿಟಿವ್: 15 ದಿನದಲ್ಲೇ ಗುಣಮುಖ ..

 ಸದ್ಯ ತಾಯಿ-ಮಗುವನ್ನು ವಿವಿ ಪುರಂ ಆಸ್ಪತ್ರೆಗೆ ದಾಖಲಿಸಿದ್ದು, ಸುರಕ್ಷಿತವಾಗಿದ್ದಾರೆ.  ಆಸ್ಪತ್ರೆ ಸಿಬ್ಬಂದಿ ತಾಯಿ-ಮಗುವಿಗೆ ಶುಶ್ರೂಷೆ ನೀಡಿದ್ದಾರೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

PREV
click me!

Recommended Stories

ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ
ವಿಶ್ವದ ಟಾಪ್ 10 ಬೊಟಾನಿಕಲ್ ಗಾರ್ಡನ್ ಲಿಸ್ಟ್‌ನಲ್ಲಿ ನಂ.1 ನಮ್ಮ ಲಾಲ್‌ಬಾಗ್