* ಬೆಂಗಳೂರು ನಗರದಲ್ಲಿ 20 ದಿನವಾದ್ರೂ ಇನ್ನೂ 32000 ಮಕ್ಕಳಿಗೆ ಮಾತ್ರ ಕೋವಿಡ್ ಲಸಿಕೆ
* ತಂಡಗಳ ರಚಿಸಿ ಶಾಲೆಗಳಲ್ಲಿ ಲಸಿಕೆ ನೀಡಲು ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ
* ಏ.10ರೊಳಗಾಗಿ ಬಹುತೇಕ ಮಕ್ಕಳಿಗೆ ಲಸಿಕೆ ನೀಡಬೇಕು
ಬೆಂಗಳೂರು(ಏ.05): ಬಿಬಿಎಂಪಿ(BBMP) ವ್ಯಾಪ್ತಿಯಲ್ಲಿ 12ರಿಂದ 14 ವರ್ಷದೊಳಗಿನ ಮಕ್ಕಳಿಗೆ ಕೊರೋನಾ ಲಸಿಕೆ ನೀಡುವ ಕಾರ್ಯ ನಿರೀಕ್ಷಿತ ಮಟ್ಟದಲ್ಲಿ ಪ್ರಗತಿ ಆಗದ ಹಿನ್ನೆಲೆಯಲ್ಲಿ, ಶಾಲೆಗಳಿಗೆ ಬೇಸಿಗೆ ರಜೆ ನೀಡುವುದರೊಳಗೆ ಹೆಚ್ಚಿನ ಸಂಖ್ಯೆ ಮಕ್ಕಳಿಗೆ ಲಸಿಕೆ ನೀಡಲು ಅಗತ್ಯ ಕ್ರಮಕೈಗೊಳ್ಳುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಮಾ.16ರಿಂದ ರಾಜ್ಯಾದ್ಯಂತ(Karnataka) ಮಕ್ಕಳಿಗೆ(Children) ಲಸಿಕೆ(Vaccine) ನೀಡಿಕೆ ಆರಂಭವಾಗಿದ್ದು, ಬಿಬಿಎಂಪಿ ವ್ಯಾಪ್ತಿಯ 2.81 ಲಕ್ಷ ಮಕ್ಕಳಿಗೆ ಲಸಿಕೆ ನೀಡಿಕೆ ಗುರಿ ಹೊಂದಿದೆ. ಆದರೆ, 20 ದಿನಗಳಲ್ಲಿ 32,270(ಶೇ.11.46) ಮಕ್ಕಳು ಮಾತ್ರ ಲಸಿಕೆ ಪಡೆದಿದ್ದಾರೆ. ಹೀಗಾಗಿ, ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತರು, ಪಾಲಿಕೆ ಸಾರ್ವಜನಿಕ ಆರೋಗ್ಯ ಇಲಾಖೆ(Department of Health) ಅಧಿಕಾರಿಗಳ ಸಭೆ ನಡೆಸಿ ತ್ವರಿತವಾಗಿ ಮಕ್ಕಳಿಗೆ ಲಸಿಕೆ ನೀಡುವುದಕ್ಕೆ ಬೇಕಾದ ಕ್ರಮಕೈಗೊಳ್ಳುವಂತೆ ನಿರ್ದೇಶಿಸಿದ್ದಾರೆ.
undefined
ಕೋವ್ಯಾಕ್ಸಿನ್ ಪೂರೈಕೆಗೆ WHO ತಡೆ, ಭಾರತ್ ಬಯೋಟೆಕ್ ಕೊಟ್ಟ ಸ್ಪಷ್ಟನೆ ಹೀಗಿದೆ!
ತಂಡಗಳ ರಚಿಸಿ:
ಮುಖ್ಯವಾಗಿ ಶಾಲೆಗಳಲ್ಲಿ(Schools) ಲಸಿಕೆ ಅಭಿಯಾನ ನಡೆಸುವುದಕ್ಕೆ ಸರ್ಕಾರ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಹೆಚ್ಚಿನ ತಂಡಗಳನ್ನು ರಚನೆ ಮಾಡಿಕೊಂಡು ಮಕ್ಕಳಿಗೆ ಲಸಿಕೆ ನೀಡಬೇಕು. ಏ.10ರೊಳಗಾಗಿ ಬಹುತೇಕ ಮಕ್ಕಳಿಗೆ ಲಸಿಕೆ ನೀಡಬೇಕು ಎಂದು ತಿಳಿಸಲಾಗಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ಬಿಬಿಎಂಪಿ ಸಾರ್ವಜನಿಕರ ಆರೋಗ್ಯ ವಿಭಾಗದ ಮುಖ್ಯ ಆರೋಗ್ಯಾಧಿಕಾರಿ ಡಾ. ಬಾಲಸುಂದರ್, ಮಕ್ಕಳಿಗೆ ಲಸಿಕೆ ನೀಡುವ ಕಾರ್ಯಕ್ಕೆ ಚುರುಕು ನೀಡಲಾಗಿದೆ. ಪ್ರತಿದಿನ 30ರಿಂದ 40 ಶಾಲೆಗಳಲ್ಲಿ ಲಸಿಕೆ ನೀಡಲಾಗುತ್ತಿತ್ತು. ಅದನ್ನು 50ರಿಂದ 60 ಶಾಲೆಗಳಿಗೆ ಏರಿಕೆ ಮಾಡಲಾಗಿದೆ. ಏ.10ರಿಂದ ಬೇಸಿಗೆ ರಜೆ ನೀಡುವ ಹಿನ್ನೆಲೆಯಲ್ಲಿ, ಮೊದಲು ಸರ್ಕಾರಿ ಶಾಲೆಗಳಲ್ಲಿ ಲಸಿಕೆ ಹಾಕುವಂತೆ ಸೂಚಿಸಲಾಗಿದೆ. ಖಾಸಗಿ ಶಾಲೆಗಳಲ್ಲಿ ಬೇಸಿಗೆ ಶಿಬಿರ ಹಾಗೂ ವಿಶೇಷ ತರಗತಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಏ.10ರ ನಂತರವೂ ನೀಡಬಹುದು ಎಂದು ತಿಳಿಸಿದರು.
ಮಕ್ಕಳಿಗೆ ಲಸಿಕೆ ಹಾಕಿಸಲು ಪೋಷಕರ ಹಿಂದೇಟು: ಇದು ವ್ಯಾಕ್ಸಿನ್ ಭಯವಲ್ಲ, ಉದಾಸೀನ!
ಬೆಂಗಳೂರು: ರಾಜ್ಯದಲ್ಲಿ 12ರಿಂದ 14 ವರ್ಷದ ಮಕ್ಕಳಿಗೆ ಕೋವಿಡ್-19ರಿಂದ ರಕ್ಷಣೆ ನೀಡಲು ಆರಂಭಿಸಿರುವ ಲಸಿಕಾ ಅಭಿಯಾನಕ್ಕೆ ಇನ್ನೂ ನಿರೀಕ್ಷಿತ ವೇಗ ದೊರೆತಿಲ್ಲ. ಮಾ.16ರಿಂದ ಅಭಿಯಾನ ಆರಂಭಗೊಂಡಿದ್ದರೂ ರಾಜ್ಯದಲ್ಲಿನ 20 ಲಕ್ಷ ಮಕ್ಕಳ ಪೈಕಿ ಈವರೆಗೆ 1.14 ಲಕ್ಷ ಮಕ್ಕಳು ಮಾತ್ರ ಲಸಿಕೆ ಪಡೆದಿದ್ದಾರೆ. ಸದ್ಯ ಶೇ.5 ರಷ್ಟುಮಾತ್ರ ಸಾಧನೆಯಾಗಿದೆ.
Covid Crisis: ವಿದೇಶಕ್ಕೆ ಹೋಗುವವರಿಗೆ ಶೀಘ್ರ ಬೂಸ್ಟರ್ ಡೋಸ್?
ಸದ್ಯ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಮಾತ್ರ ಲಸಿಕೆ ನೀಡುತ್ತಿರುವುದು, ಪರೀಕ್ಷೆ ನಡೆಯುತ್ತಿರುವುದು, ಚಿಕ್ಕಮಕ್ಕಳಿಗೆ ಲಸಿಕೆ ಕೊಡಿಸಲು ಪೋಷಕರು ಹಿಂಜರಿಯುತ್ತಿರುವ ಪರಿಣಾಮ ಲಸಿಕೆ ನೀಡಿಕೆ ಪ್ರಮಾಣ ಕಡಿಮೆಯಾಗಿದೆ. ಜೊತೆಗೆ ಸದ್ಯ ಕೊರೋನಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿರುವುದು ಸಹ ಲಸಿಕೆ ಕೊಡಿಸಲು ಉದಾಸೀನ ಮಾಡುತ್ತಿದ್ದಾರೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿಯೂ ಲಸಿಕೆ ಪಡೆದ ಮಕ್ಕಳ ಸಂಖ್ಯೆ ತೀರಾ ಕಡಿಮೆಯಾಗಿದೆ. ಹಾವೇರಿಯಲ್ಲಿ ಕೇವಲ 23, ಬೀದರ್‌ನಲ್ಲಿ 24, ಶಿವಮೊಗ್ಗ 40, ಬಾಗಲಕೋಟೆ 58, ಮಂಡ್ಯ 63 ಮತ್ತು ದಾವಣಗೆರೆಯಲ್ಲಿ 88 ಮಂದಿ ಮಕ್ಕಳು ಮಾತ್ರ ಲಸಿಕೆ ಪಡೆದುಕೊಂಡಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 2.81 ಲಕ್ಷ ಮಕ್ಕಳಿದ್ದರೂ ಲಸಿಕೆ ಪಡೆದಿರುವುದು 7,741 ಮಂದಿ ಮಾತ್ರ. ಚಿತ್ರದುರ್ಗದಲ್ಲಿ 16,578 ಮಕ್ಕಳು ಲಸಿಕೆ ಪಡೆದುಕೊಂಡಿದ್ದಾರೆ. ಉಳಿದಂತೆ ಕೋಲಾರದಲ್ಲಿ 13,499, ಬಳ್ಳಾರಿ 10,629, ಚಾಮರಾಜ ನಗರ 10,072, ತುಮಕೂರು 9,442 ಮಕ್ಕಳು ಲಸಿಕೆ ಪಡೆದಿದ್ದಾರೆ. ಈವರೆಗೆ ಲಸಿಕೆ ಪಡೆದ ರಾಜ್ಯದ ಮಕ್ಕಳಲ್ಲಿ ಈ ಐದು ಜಿಲ್ಲೆಗಳ ಪಾಲು ಹೆಚ್ಚು ಕಡಿಮೆ ಅರ್ಧದಷ್ಟಿದೆ.