17 ಸಾವಿರ ಪೌರ ಕಾರ್ಮಿಕರಿಗೆ ಆ್ಯಂಟಿಜೆನ್‌ ಟೆಸ್ಟ್

By Kannadaprabha NewsFirst Published Jul 22, 2020, 7:40 AM IST
Highlights

17 ಸಾವಿರ ಪೌರಕಾರ್ಮಿಕರಿಗೆ ರ‍್ಯಾಪಿಡ್‌ ಆ್ಯಂಟಿಜನ್‌ ಕೊರೋನಾ ಸೋಂಕು ಪರೀಕ್ಷೆ ನಡೆಸಲಾಗುತ್ತಿದೆ ಎಂದು ಬಿಬಿಎಂಪಿ ಆಯುಕ್ತ ಎನ್‌. ಮಂಜುನಾಥ್‌ ಪ್ರಸಾದ್‌ ತಿಳಿಸಿದ್ದಾರೆ.

ಬೆಂಗಳೂರು(ಜು.22): ಬಿಬಿಎಂಪಿಯ ನಾಲ್ವರು ಪೌರಕಾರ್ಮಿಕರು ಕೊರೋನಾ ಸೋಂಕಿಗೆ ಬಲಿಯಾಗಿದ್ದು, ಹದಿನೈದು ಮಂದಿಗೆ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಬಿಬಿಎಂಪಿಯ ಎಲ್ಲ 17 ಸಾವಿರ ಪೌರಕಾರ್ಮಿಕರಿಗೆ ರ‍್ಯಾಪಿಡ್‌ ಆ್ಯಂಟಿಜನ್‌ ಕೊರೋನಾ ಸೋಂಕು ಪರೀಕ್ಷೆ ನಡೆಸಲಾಗುತ್ತಿದೆ ಎಂದು ಬಿಬಿಎಂಪಿ ಆಯುಕ್ತ ಎನ್‌. ಮಂಜುನಾಥ್‌ ಪ್ರಸಾದ್‌ ತಿಳಿಸಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಹಲವು ಪೌರಕಾರ್ಮಿಕರು ಸೋಂಕಿಗೆ ಒಳಗಾಗಿದ್ದಾರೆ. ಹಾಗಾಗಿ, ಬಿಬಿಎಂಪಿಯ ಎಲ್ಲ ಪೌರಕಾರ್ಮಿಕರಿಗೆ ರಾರ‍ಯಪಿಡ್‌ ಆ್ಯಂಟಿ ಜನ್‌ ಕೊರೋನಾ ಸೋಂಕು ಪರೀಕ್ಷೆಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

15 ದಿನದ ಹಿಂದಕ್ಕೆ ಸರಿದ ಕೊರೋನಾ ಸಾವಿನ ಸಂಖ್ಯೆ: ಸೋಂಕಿತರ ಸಂಖ್ಯೆ ಹೆಚ್ಚು

ಯಲಹಂಕ ವಲಯದಲ್ಲಿ ರಾರ‍ಯಪಿಡ್‌ ಆ್ಯಂಟಿಜನ್‌ ಪರೀಕ್ಷೆಗೆ ಚಾಲನೆ ನೀಡಲಾಗಿದ್ದು, ಐದು ಮಂದಿ ಸೋಂಕು ದೃಢಪಟ್ಟಿದೆ. ಇನ್ನು ಉಳಿದ ವಲಯಗಳಲ್ಲಿ ತ್ವರಿತವಾಗಿ ಸೋಂಕು ಪರೀಕ್ಷೆ ಆರಂಭಿಸುವುದಾಗಿ ಬಿಬಿಎಂಪಿ ಘನತ್ಯಾಜ್ಯ ವಿಭಾಗದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಪೌರಕಾರ್ಮಿಕರಿಗೆ ವಿಶೇಷ ಭತ್ಯೆ ತ್ವರಿತವಾಗಿ ಬಿಡುಗಡೆ ಮಾಡಲಾಗುವುದು ಎಂದು ಬಿಬಿಎಂಪಿ ಆಯುಕ್ತರು ತಿಳಿಸಿದ್ದಾರೆ.

click me!