ಚಿಕಿತ್ಸೆಗಾಗಿ ಕೊರೋನಾ ಸೋಂಕಿತ ತಾಯಿ -ಮಗು ಅಲೆದಾಟ

Kannadaprabha News   | Asianet News
Published : Jul 10, 2020, 10:38 AM IST
ಚಿಕಿತ್ಸೆಗಾಗಿ ಕೊರೋನಾ ಸೋಂಕಿತ ತಾಯಿ  -ಮಗು ಅಲೆದಾಟ

ಸಾರಾಂಶ

ಕೃಷ್ಣಪ್ಪ ಲೇಔಟ್‌ನ 30 ವರ್ಷದ ಮಹಿಳೆ ಹಾಗೂ ಅವರ ಏಳು ತಿಂಗಳ ಮಗುವಿಗೆ ಸೋಂಕು ದೃಢಪಟ್ಟಿದ್ದು, ಗುರುವಾರ ಟಿಟಿ ವಾಹನದಲ್ಲಿ ಚಿಕಿತ್ಸೆಗಾಗಿ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಿದ್ದಾರೆ.

ಬೆಂಗಳೂರು(ಜು.10): ಕೃಷ್ಣಪ್ಪ ಲೇಔಟ್‌ನ 30 ವರ್ಷದ ಮಹಿಳೆ ಹಾಗೂ ಅವರ ಏಳು ತಿಂಗಳ ಮಗುವಿಗೆ ಸೋಂಕು ದೃಢಪಟ್ಟಿದ್ದು, ಗುರುವಾರ ಟಿಟಿ ವಾಹನದಲ್ಲಿ ಚಿಕಿತ್ಸೆಗಾಗಿ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಿದ್ದಾರೆ.

ಈಗಾಗಲೇ ಸೋಂಕಿತ ಮಹಿಳೆಯ 36 ವರ್ಷದ ಪತಿ ಜಿಕೆವಿಕೆ ಆರೈಕೆ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೋಮ್‌ ಕ್ವಾರಂಟೈನ್‌ನಲ್ಲಿದ್ದ ಪತ್ನಿಗೂ ಕೋವಿಡ್‌ ಸೋಂಕು ತಗುಲಿದೆ.

ಬೆಂಗ್ಳೂರಲ್ಲಿ ದಾಖಲೆಯ 1,373 ಮಂದಿಗೆ ಸೋಂಕು, 606 ಜನ ಡಿಸ್ಚಾರ್ಜ್

ಪಾಲಿಕೆ ಅಧಿಕಾರಿಗಳು ಬುಧವಾರ ತಡರಾತ್ರಿ ಕರೆ ಮಾಡಿ ಸೋಂಕು ಇರುವುದು ದೃಢಪಡಿಸಿ, ಗುರುವಾರ ಟಿಟಿ ವಾಹನ ಕಳುಹಿಸಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಮಗುವಿನೊಂದಿಗೆ ಬಿಜಿಎಸ್‌ ಆಸ್ಪತ್ರೆಗೆ ತೆರಳಿ ಮೂರ್ನಾಲ್ಕು ಗಂಟೆಗಳ ಕಾಲ ಕಾದರೂ ಆಸ್ಪತ್ರೆ ಸಿಬ್ಬಂದಿ ಮಗುವನ್ನು ದಾಖಲಿಸಿಕೊಳ್ಳಲು ನಿರಾಕರಿಸಿದ್ದಾರೆ. ಕೊನೆಗೆ ಸೋಂಕಿತ ಮಹಿಳೆಯು ಸ್ಥಳೀಯ ಜನಪ್ರತಿನಿಧಿಗಳ ಸಹಾಯದಿಂದ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಮಗುವನ್ನು ಸಂಜೆ 6 ಗಂಟೆಗೆ ದಾಖಲಿಸಿದ್ದಾರೆ.

ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿಗೂ ಸೋಂಕು

ಶಾಂತಿನಗರದಲ್ಲಿರುವ ಕೆಎಸ್‌ಆರ್‌ಟಿಸಿಯ ಕೇಂದ್ರ ಕಚೇರಿಯ ವಾಣಿಜ್ಯ ವಿಭಾಗದ ಅಧಿಕಾರಿ ಹಾಗೂ ಸಿಬ್ಬಂದಿ ಸೇರಿ ಇಬ್ಬರಿಗೆ ಸೋಂಕು ದೃಢಪಟ್ಟಿದೆ. ಸೋಂಕಿತರನ್ನೂ ಕೋವಿಡ್‌ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇವರ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಗುರುತಿಸಿ ಕ್ವಾರಂಟೈನ್‌ಗೆ ಒಳಪಡಿಸುವ ಕಾರ್ಯ ಮುಂದುವರಿದಿದೆ.

8 ಪೊಲೀಸರ ಹತ್ಯೆಗೈದಿದ್ದ ವಿಕಾಸ್ ದುಬೆ ಎನ್‌ಕೌಂಟರ್‌ಗೆ ಬಲಿ!

ಸೋಂಕಿನ ಹಿನ್ನೆಲೆಯಲ್ಲಿ ಶುಕ್ರವಾರ ನಿಗಮದ ಕೇಂದ್ರ ಕಚೇರಿಯನ್ನು ಸೋಂಕು ನಿವಾರಕ ಸಂಪಡಿಸಲು ನಿರ್ಧರಿಸಲಾಗಿದೆ. ನಿಗಮದ ಕೇಂದ್ರ ಕಚೇರಿಯಲ್ಲಿ ನೂರಕ್ಕಿಂತ ಹೆಚ್ಚು ಮಂದಿ ನೌಕರರು ಕಾರ್ಯ ನಿರ್ವಹಿಸುತ್ತಾರೆ. ನಿಗಮದ ವಿವಿಧ ವಿಭಾಗಗಳ ಮುಖ್ಯಸ್ಥರು ಹಾಗೂ ಅಧಿಕಾರಿಗಳು ಈ ಕಚೇರಿಯಲ್ಲೇ ಕಾರ್ಯ ನಿರ್ವಹಿಸುತ್ತಾರೆ. ಇದೀಗ ತಮ್ಮ ಇಬ್ಬರು ಸಹೋದ್ಯೋಗಿಗಳಿಗೆ ಸೋಂಕು ದೃಢಪಟ್ಟಿರುವುದರಿಂದ ಆತಂಕ ಹೆಚ್ಚಾಗಿದೆ.

PREV
click me!

Recommended Stories

ಡಿವೈಡರ್‌ನಿಂದ ಹಾರಿ KSRTC ಬಸ್‌ಗೆ ಡಿಕ್ಕಿಯಾದ ಕಾರ್, ಮೂರು ಸಾವು ಚೆಲ್ಲಾಪಿಲ್ಲಿಯಾದ ಮೃತದೇಹಗಳು
ಸರ್ಕಾರಿ ಶಾಲೆ ಟಾಯ್ಲೆಟ್‌ ಸ್ವಚ್ಛತೆಗೆ ಉದ್ಯಮಿ ನೆರವು