ಬಿಡುಗಡೆ ದಿನವೇ ಸೋಂಕಿತೆ ಸಾವಿಗೆ ಶರಣು: ಆಸ್ಪತ್ರೆಯಲ್ಲೇ ಆತ್ಮಹತ್ಯೆ

Kannadaprabha News   | Asianet News
Published : Jul 18, 2020, 09:31 AM IST
ಬಿಡುಗಡೆ ದಿನವೇ ಸೋಂಕಿತೆ ಸಾವಿಗೆ ಶರಣು: ಆಸ್ಪತ್ರೆಯಲ್ಲೇ ಆತ್ಮಹತ್ಯೆ

ಸಾರಾಂಶ

ಆಸ್ಪತ್ರೆಯಲ್ಲಿ ಹತಾಶರಾಗಿ ಸೋಂಕಿತರ ಆತ್ಮಹತ್ಯೆ ಸರಣಿ ಮುಂದುವರೆದಿದ್ದು, ನಗರದಲ್ಲಿ ಮತ್ತೊಬ್ಬ ಸೋಂಕಿತ ಮಹಿಳೆ ಶುಕ್ರವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬೆಂಗಳೂರು(ಜು.18): ಆಸ್ಪತ್ರೆಯಲ್ಲಿ ಹತಾಶರಾಗಿ ಸೋಂಕಿತರ ಆತ್ಮಹತ್ಯೆ ಸರಣಿ ಮುಂದುವರೆದಿದ್ದು, ನಗರದಲ್ಲಿ ಮತ್ತೊಬ್ಬ ಸೋಂಕಿತ ಮಹಿಳೆ ಶುಕ್ರವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಜ್ಞಾನಭಾರತಿ ಸಮೀಪದ ಮರಿಯಪ್ಪನಪಾಳ್ಯದ ನಿವಾಸಿ 60 ವರ್ಷದ ಮಹಿಳೆ ಮೃತ ದುರ್ದೈವಿ. ಇದರೊಂದಿಗೆ ಆಸ್ಪತ್ರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಸೋಂಕಿತರ ಸಂಖ್ಯೆ ನಾಲ್ಕೇರಿದೆ.

ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿತರಿಗೆ ಯೋಗ..!

ಸೋಂಕು ದೃಢಪಟ್ಟಹಿನ್ನೆಲೆಯಲ್ಲಿ ಕೆಲ ದಿನಗಳಿಂದ ಮಲ್ಲೇಶ್ವರದ ಕೆ.ಸಿ.ಜನರಲ್‌ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಸೋಂಕಿನಿಂದ ಗುಣಮುಖರಾಗಿದ್ದ ಅವರು ಶುಕ್ರವಾರ ಬಿಡುಗಡೆ ಹೊಂದುವ ನಿರೀಕ್ಷತೆ ಇತ್ತು. ಆದರೆ ಮುಂಜಾನೆ 5 ಗಂಟೆ ಸುಮಾರಿಗೆ ಆಸ್ಪತ್ರೆ ಹೊರಾವರಣದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಗ ಚೇತರಿಕೆ ತಾಯಿ ಆತ್ಮಹತ್ಯೆ:

ಮರಿಯಪ್ಪನಪಾಳ್ಯದಲ್ಲಿ ತನ್ನ ಪುತ್ರನ ಜತೆ ಸಂತ್ರಸ್ತೆ ನೆಲೆಸಿದ್ದರು. ಜು.10ರಂದು ತಾಯಿ-ಮಗನಿಗೆ ಸೋಂಕು ದೃಢಪಟ್ಟಹಿನ್ನೆಲೆಯಲ್ಲಿ ಮಲ್ಲೇಶ್ವರ ಕೆ.ಸಿ.ಜನರಲ್‌ ಆಸ್ಪತ್ರೆಗೆ ಅವರನ್ನು ದಾಖಲಿಸಲಾಯಿತು. ವೈದ್ಯಕೀಯ ಚಿಕಿತ್ಸೆಗೆ ಸ್ಪಂದಿಸಿದ ಅವರ ಪುತ್ರ, ಎರಡು ದಿನಗಳ ಹಿಂದೆ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ತಾಯಿಯ ಆರೋಗ್ಯದಲ್ಲೂ ಆರೋಗ್ಯ ಸುಧಾರಣೆ ಕಂಡು ಬಂದಿತ್ತು. ಆದರೆ ಅವರು ಏಕಾಏಕಿ ದುಡುಕಿನ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಬಿಡುಗಡೆ ಆಗಬೇಕಿತ್ತು: ಅಧೀಕ್ಷಕ

ಆಸ್ಪತ್ರೆಯಲ್ಲಿ ಮೃತ ಮಹಿಳೆ ಸೋಂಕಿನಿಂದ ಗುಣಮುಖರಾಗಿದ್ದರು. ಶುಕ್ರವಾರ ಬಿಡುಗಡೆ ಮಾಡುವುದಾಗಿ ಅವರಿಗೆ ಗುರುವಾರ ಹೇಳಿದ್ದೆವು. ಮನೆಗೆ ಹೋಗುವ ಮೊದಲು ಮುಂಜಾನೆ 5 ಗಂಟೆಗೆ ಶೌಚಾಲಯಕ್ಕೆ ತೆರಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೆ.ಸಿ.ಜನರಲ್‌ ಆಸ್ಪತ್ರೆ ಅಧೀಕ್ಷಕ ವೆಂಕಟೇಶಯ್ಯ‘ಕನ್ನಡಪ್ರಭ’ಕ್ಕೆ ತಿಳಿಸಿದ್ದಾರೆ.

ರಾಜಕೀಯ ನಾಯಕರು, ಗಣ್ಯರು ತಂಗುವ ಕುಮಾರಕೃಪಾ ಸಿಬ್ಬಂದಿಗೆ ಸೋಂಕು

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಾಯಿಯನ್ನು ಪಿಪಿಇ ಕಿಟ್‌ ಧರಿಸಿ ಭೇಟಿಯಾಗಲು ಮೃತರ ಪುತ್ರನಿಗೆ ಅವಕಾಶ ನೀಡಲಾಗಿತ್ತು. ಆದರೆ ಅವರ ಆತ್ಮಹತ್ಯೆಗೆ ನಿಖರ ಕಾರಣ ಗೊತ್ತಾಗಿಲ್ಲ. ತಮ್ಮ ಕುಟುಂಬದ ಬಗ್ಗೆ ಯೋಚಿಸಿ ಅವರು ಆತ್ಮಹತ್ಯೆ ನಿರ್ಧಾರ ಮಾಡಿರಬಹುದು ಎಂದು ಅಧೀಕ್ಷಕರು ಶಂಕಿಸಿದ್ದಾರೆ.

PREV
click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
Bengaluru Weather: ರಾಜ್ಯಕ್ಕೆ ಈಶಾನ್ಯ ಮಾರುತ- ದಶಕದ ದಾಖಲೆಯ ಚಳಿಗೆ ಸಿದ್ಧರಾಗಿ; ಬೆಂಗಳೂರು ಸ್ಥಿತಿ ಏನು ನೋಡಿ!