ಕೊರೋನಾ ಸೋಂಕಿತ ನರಿಕೊಂಬು ಮಹಿಳೆ ಗುಣಮುಖ

By Kannadaprabha NewsFirst Published May 14, 2020, 7:17 AM IST
Highlights

ಬುಧವಾರ ದ.ಕ. ಜಿಲ್ಲೆಯಲ್ಲಿ ಒಂದು ಪಾಸಿಟಿವ್‌ ಪ್ರಕರಣ ಪತ್ತೆಯಾದ ಬೆನ್ನಲ್ಲೇ ಕೊರೋನಾ ಸೋಂಕು ಹಾಟ್‌ಸ್ಪಾಟ್‌ ಆರೋಪ ಎದುರಿಸುತ್ತಿರುವ ಪಡೀಲ್‌ನ ಫಸ್ಟ್‌ ನ್ಯೂರೋ ಆಸ್ಪತ್ರೆಯ ಸಿಬ್ಬಂದಿ ವೆನ್ಲಾಕ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಮಂಗಳೂರ(ಮೇ 14): ಬುಧವಾರ ದ.ಕ. ಜಿಲ್ಲೆಯಲ್ಲಿ ಒಂದು ಪಾಸಿಟಿವ್‌ ಪ್ರಕರಣ ಪತ್ತೆಯಾದ ಬೆನ್ನಲ್ಲೇ ಕೊರೋನಾ ಸೋಂಕು ಹಾಟ್‌ಸ್ಪಾಟ್‌ ಆರೋಪ ಎದುರಿಸುತ್ತಿರುವ ಪಡೀಲ್‌ನ ಫಸ್ಟ್‌ ನ್ಯೂರೋ ಆಸ್ಪತ್ರೆಯ ಸಿಬ್ಬಂದಿ ವೆನ್ಲಾಕ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕೊರೋನಾ ಸೋಂಕಿತೆಯಾಗಿದ್ದ ಫಸ್ಟ್‌ ನ್ಯೂರೋ ಆಸ್ಪತ್ರೆ ಸಿಬ್ಬಂದಿ, ಬಂಟ್ವಾಳ ನರಿಕೊಂಬು ನಾಯಿಲ ನಿವಾಸಿ 47 ವರ್ಷದ ಮಹಿಳೆ ರೋಗಿ ಸಂಖ್ಯೆ 501 ಬುಧವಾರ ಗುಣಮುಖಗೊಂಡು ವೆನ್ಲಾಕ್‌ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ ಎಂದು ದ.ಕ. ಜಿಲ್ಲಾ​ಧಿಕಾರಿ ಸಿಂಧು ರೂಪೇಶ್‌ ತಿಳಿಸಿದ್ದಾರೆ.

'ಮಹಾಪ್ರಭುಗಳೇ ನೀವೇನು ಇಲ್ಲಿ' ವಿಶಿಷ್ಟ ಹಾಸ್ಯ ಕಲಾವಿದ ಮೈಕಲ್ ಮಧು ಇನ್ನಿಲ್ಲ

ಫಸ್ಟ್‌ ನ್ಯೂರೋ ಆಸ್ಪತ್ರೆಯಲ್ಲಿ ಆಯಾ ಆಗಿದ್ದ ಇವರಿಗೆ ಅದೇ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ರೋಗಿ ಸಂಖ್ಯೆ 432 ಬಂಟ್ವಾಳ ಕಸಬಾ ನಿವಾಸಿ ಮಹಿಳೆಯ ಸಂಪರ್ಕದಿಂದ ಕೊರೋನಾ ಸೋಂಕು ತಗಲಿತ್ತು. ಏ. 26ರಂದು ಇವರಿಗೆ ಸೋಂಕು ದೃಢಪಟ್ಟಿತ್ತು. ಆಸ್ಪತ್ರೆಯಲ್ಲಿ ಕ್ವಾರಂಟೈನ್‌ನಲ್ಲಿ ಇದ್ದ ಇವರನ್ನು ಚಿಕಿತ್ಸೆಗೆ ವೆನ್ಲಾಕ್‌ ಕೋವಿಡ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಜಿಲ್ಲೆಯ 34 ಕೊರೋನಾ ಪಾಸಿಟಿವ್‌ ಪ್ರಕರಣಗಳ ಪೈಕಿ 15 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಗೊಂಡಂತಾಗಿದೆ.

138 ವರದಿ ನಿರೀಕ್ಷೆ:

ಕೊರೋನಾ ಸಂಬಂ​ಧಿಸಿ ದ.ಕ. ಜಿಲ್ಲೆಯಲ್ಲಿ ಬುಧವಾರ 148 ಮಂದಿಯ ಪರೀಕ್ಷಾ ವರದಿ ಸ್ವೀಕರಿಸಲಾಗಿದ್ದು, ಒಂದು ಪಾಸಿಟಿವ್‌, 147 ನೆಗೆಟಿವ್‌ ಆಗಿದೆ. 138 ಮಂದಿಯ ವರದಿ ನಿರೀಕ್ಷಿಸಲಾಗಿದೆ. 14 ಮಂದಿಯನ್ನು ಅಬ್ಸರ್ವೇಶನ್‌ಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. 8 ಮಂದಿಯಲ್ಲಿ ಶ್ವಾಸಕೋಶ ಸೋಂಕು ಪತ್ತೆಯಾಗಿದೆ ಎಂದು ಜಿಲ್ಲಾ​ಧಿಕಾರಿ ತಿಳಿಸಿದ್ದಾರೆ.

ಕೊರೋನಾಕ್ಕೆ ಬೆಚ್ಚಿ ಬಿದ್ದ ಜನ ಈಗ ಡೆಂಘೀ ಜ್ವರಕ್ಕೆ ತತ್ತರ..!

ವೆನ್ಲಾಕ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೋನಾ ಸೋಂಕಿತ ಪಿ. 507 ಕುಲಶೇಖರದ 80 ವರ್ಷದ ಮಹಿಳೆ ಅ​ಧಿಕ ರಕ್ತದೊತ್ತಡ ಹಾಗೂ ಪಾಶ್ರ್ವವಾಯುವಿನಿಂದ ಬಳಲುತ್ತಿದ್ದು, ಇವರ ಆರೋಗ್ಯ ಸ್ಥಿತಿ ಸೂಕ್ಷ್ಮವಾಗಿದೆ ಎಂದು ಡಿಸಿ ತಿಳಿಸಿದ್ದಾರೆ.

click me!