ಕೇಂದ್ರ-ರಾಜ್ಯ ಸರ್ಕಾರ ವಿರುದ್ಧ ಸಿಪಿಐ ಪ್ರತಿಭಟನೆ

By divya perla  |  First Published Jul 16, 2019, 9:49 AM IST

ಬರ ನಿರ್ವಹಣೆಯಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳು ಸಂಪೂರ್ಣ ವಿಫಲವಾಗಿರುವುದನ್ನು ಖಂಡಿಸಿ ಸಿಪಿಐ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಯಿತು. ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ಎಸಿ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.


ದಾವಣಗೆರೆ(ಜು.16): ಬರ ನಿರ್ವಹಣೆಯಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳು ಸಂಪೂರ್ಣ ವಿಫಲವಾಗಿರುವುದನ್ನು ಖಂಡಿಸಿ ಸಿಪಿಐ ಜಿಲ್ಲಾ ಘಟಕದಿಂದ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು. ಅಶೋಕ ರಸ್ತೆಯ ಸಿಪಿಐ ಜಿಲ್ಲಾ ಕಚೇರಿ, ಗಾಂಧಿ ವೃತ್ತ ಹಳೆ ಪಿ.ಬಿ.ರಸ್ತೆ ಮಾರ್ಗವಾಗಿ ಉಪ ವಿಭಾಗಾಧಿಕಾರಿ ಕಚೇರಿವರೆಗೆ ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಸಾಗಿದ ಪ್ರತಿಭಟನಾಕಾರರು ಎಸಿ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಸಿಪಿಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್‌.ಕೆ.ರಾಮಚಂದ್ರಪ್ಪ ಮಾತನಾಡಿ, ರಾಜ್ಯದಲ್ಲಿ ತೀವ್ರ ಬರ ಆವರಿಸಿದ್ದು, ಮಳೆಗಾಲದಲ್ಲೂ ಮಳೆಯಾಗದ ಪರಿಸ್ಥಿತಿ ಇದೆ. ಇಂಥ ಸಂದಿಗ್ಧಸ್ಥಿತಿಯಲ್ಲಿ ಬರ ನಿರ್ವಹಣೆಗೆ ಮುಂದಾಗಬೇಕಾದ ಕೇಂದ್ರ, ರಾಜ್ಯ ಸರ್ಕಾರಗಳು ಅಸಡ್ಡೆ ತೋರುತ್ತಿವೆ. ಇತ್ತ ರಾಜ್ಯ ಸರ್ಕಾರ ರೈತರು, ಜನರ ಹಿತಕ್ಕೆ ಸ್ಪಂದಿಸುವ ಬದಲಿಗೆ ಅಧಿಕಾರ ಉಳಿಸಿಕೊಳ್ಳಲು ಹೆಣಗಾಡುತ್ತಿದೆ ಎಂದರು.

Tap to resize

Latest Videos

ಜವಾಬ್ಧಾರಿಯಿಂದ ನುಣುಚಿಕೊಳ್ಳುತ್ತಿದೆ ಸರ್ಕಾರ:

ಮಳೆಯನ್ನೇ ಅವಲಂಬಿಸಿದ ರಾಜ್ಯದ ಕೃಷಿ ಮತ್ತು ತೋಟಗಾರಿಕೆ ಚಟುವಟಿಕೆಗಳು ಸ್ಥಗಿತಗೊಂಡಿವೆ. ಈ ಪರಿಸ್ಥಿತಿಯಲ್ಲಿ ಸಮರೋಪಾದಿಯಲ್ಲಿ ಬರ ಪರಿಹಾರ ಕಾರ್ಯ ಕೈಗೊಳ್ಳಬೇಕಾದ ಕೇಂದ್ರ, ರಾಜ್ಯ ಸರ್ಕಾರಗಳು ತಮ್ಮ ಜವಾಬ್ಧಾರಿಯಿಂದ ನುಣುಚಿಕೊಳ್ಳುತ್ತಿವೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರವಿಲ್ಲವೆಂದು ಕೇಂದ್ರ ಇತ್ತ ಗಮನ ಹರಿಸುತ್ತಿಲ್ಲ. ಅತೃಪ್ತ ಶಾಸಕರ ರಾಜೀನಾಮೆ ಹಿನ್ನೆಲೆಯಲ್ಲಿ ಖುರ್ಚಿ, ಅಧಿಕಾರ ಉಳಿಸಿಕೊಳ್ಳಲು ಕಾಂಗ್ರೆಸ್‌-ಜೆಡಿಎಸ್‌ ಇನ್ನಿಲ್ಲದ ಪ್ರಯತ್ನ ನಡೆಸಿದೆ ಎಂದು ಟೀಕಿಸಿದರು.

ಸಂವಿಧಾನ ವಿರೋಧಿ ಶಾಸಕರೇ ಛೀ.. ಥೂ..

ಜಿಲ್ಲಾ ಖಜಾಂಚಿ ಆನಂದರಾಜ, ಆವರಗೆರೆ ಎಚ್‌.ಜಿ.ಉಮೇಶ, ಆವರಗೆರೆ ಚಂದ್ರು, ಆವರಗೆರೆ ವಾಸು, ಟಿ.ಎಸ್‌.ನಾಗರಾಜ, ರಂಗನಾಥ, ಎಂ.ಬಿ.ಶಾರದಮ್ಮ, ಎಚ್‌.ಪಿ.ಉಮಾಪತಿ, ಸಿ.ರಮೇಶ, ಎನ್‌.ಟಿ.ಬಸವರಾಜ, ಬಿ.ರೇವಣಸಿದ್ದಪ್ಪ, ಏಳುಕೋಟಿ, ರಂಗನಾಥ, ಸರೋಜಾ, ವಿ.ಲಕ್ಷ್ಮಣ, ಚಮನ್‌ ಸಾಬ್‌, ಬಸವರಾಜಪ್ಪ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

click me!