ಮೊಬೈಲ್‌ ಆ್ಯಪ್‌ ಮೂಲಕ ಕ್ರಿಕೆಟ್‌ ಬೆಟ್ಟಿಂಗ್‌ : ಬಂಧನ

Published : Jun 09, 2019, 08:17 AM IST
ಮೊಬೈಲ್‌ ಆ್ಯಪ್‌ ಮೂಲಕ ಕ್ರಿಕೆಟ್‌ ಬೆಟ್ಟಿಂಗ್‌ : ಬಂಧನ

ಸಾರಾಂಶ

ಮೊಬೈಲ್‌ ಆ್ಯಪ್‌ ಮೂಲಕ ಕ್ರಿಕೆಟ್‌ ಬೆಟ್ಟಿಂಗ್‌ ನಡೆಸುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಬೆಂಗಳೂರು :  ಮೊಬೈಲ್‌ ಆ್ಯಪ್‌ ಮೂಲಕ ಕ್ರಿಕೆಟ್‌ ಬೆಟ್ಟಿಂಗ್‌ ನಡೆಸುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಗಾಣಿಗರಪಾಳ್ಯ ನಿವಾಸಿ ಸೂರಜ್‌ ಲೋಬೋ(43) ಬಂಧಿತ. ಆರೋಪಿಯಿಂದ .1.60 ಲಕ್ಷ ಜಪ್ತಿ ಮಾಡಲಾಗಿದೆ ಎಂದು ಸಿಸಿಬಿ ಪೊಲೀಸರು ಹೇಳಿದರು.

ಆರೋಪಿ ಜೂ.7ರಂದು ನಡೆದ ಶ್ರೀಲಂಕಾ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಪಂದ್ಯಕ್ಕೆ ಸಂಬಂಧಿಸಿದಂತೆ ಮೊಬೈಲ್‌ ಆ್ಯಪ್‌ ಮೂಲಕ ಕೆಲ ಗ್ರಾಹಕರಿಂದ ಹಣ ಕಟ್ಟಿಸಿಕೊಂಡು ಬೆಟ್ಟಿಂಗ್‌ ಆಡಿಸುತ್ತಿದ್ದ. 

ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ತಲ್ಲಘಟ್ಟಪುರದ ಗಾಣಿಗಾರಪಾಳ್ಯದ ಮನೆ ಮೇಲೆ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಈ ಸಂಬಂಧ ತಲಘಟ್ಟಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ದೂರು ದಾಖಲಾಗಿದೆ.

PREV
click me!

Recommended Stories

ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
ಲಕ್ಕುಂಡಿಯಲ್ಲಿ ಚಿನ್ನದ ನಿಧಿ ಪತ್ತೆ ಎಫೆಕ್ಟ್: ಭೂಮಿಗೂ ಬಂತು ಬಂಗಾರದ ಬೆಲೆ, ರಿಯಲ್ ಎಸ್ಟೇಟ್‌ನಲ್ಲೂ ಹೊಸ ಇತಿಹಾಸ!