ಸರ್ಕಾರಿ ಸೌಲಭ್ಯ ಮಾರಾಟ ಮಾಡಿದ್ರೆ ಕ್ರಿಮಿನಲ್ ಕೇಸ್: ಮಾಡಾಳು ವಿರೂಪಾಕ್ಷಪ್ಪ

By Kannadaprabha News  |  First Published Oct 23, 2022, 9:50 AM IST

ಸರ್ಕಾರಿ ಸೌಲಭ್ಯಗಳನ್ನು ಪಡೆದ ಫಲಾನುಭವಿಗಳು ಅವುಗಳನ್ನು ಬಳಸಿಕೊಳ್ಳದೆ ಬೇರೆಯವರಿಗೆ ಮಾರಾಟ ಮಾಡಿರುವುದು ತಿಳಿದು ಬಂದರೆ ಅಂತವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲು ಮಾಡಿ ಮುಂದೆ ಅವರಿಗೆ ಯಾವುದೇ ಸರ್ಕಾರಿ ಸೌಲಭ್ಯಗಳು ಸಿಗದಂತೆ ಮಾಡಲಾಗುವುದು ಎಂದು ಶಾಸಕ ಮಾಡಾಳು ವಿರೂಪಾಕ್ಷಪ್ಪ ಹೇಳಿದರು.


ಚನ್ನಗಿರಿ (ಅ.23) : ಸರ್ಕಾರಿ ಸೌಲಭ್ಯಗಳನ್ನು ಪಡೆದ ಫಲಾನುಭವಿಗಳು ಅವುಗಳನ್ನು ಬಳಸಿಕೊಳ್ಳದೆ ಬೇರೆಯವರಿಗೆ ಮಾರಾಟ ಮಾಡಿರುವುದು ತಿಳಿದು ಬಂದರೆ ಅಂತವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲು ಮಾಡಿ ಮುಂದೆ ಅವರಿಗೆ ಯಾವುದೇ ಸರ್ಕಾರಿ ಸೌಲಭ್ಯಗಳು ಸಿಗದಂತೆ ಮಾಡಲಾಗುವುದು ಎಂದು ಶಾಸಕ ಮಾಡಾಳು ವಿರೂಪಾಕ್ಷಪ್ಪ ಹೇಳಿದರು.

ಇನ್ಶೂರೆನ್ಸ್ ಮಾಫಿಯಾ ಗ್ಯಾಂಗ್ ಬೆನ್ನತ್ತಿದ ಪೊಲೀಸ್: ಇದು ಕವರ್ ಸ್ಟೋರಿ ಇಂಪ್ಯಾಕ್ಟ್

Latest Videos

undefined

ಅವರು ಶನಿವಾರ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಚನ್ನಗಿರಿ ವಿಧಾನಸಭಾ ಕ್ಷೇತ್ರದ 2018-19ನೇ ಸಾಲಿನ ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಕೊಳವೆ ಬಾವಿ ಸೌಲಭ್ಯ ಕಲ್ಪಿಸಿರುವ ಫಲಾನುಭವಿಗಳಿಗೆ ಪಂಪ್‌, ಮೋಟಾರು ಹಾಗೂ ಇತರೆ ಪೂರಕ ಸಾಮಾಗ್ರಿಗಳ ವಿತರಣೆ ಹಾಗೂ ಕಾರ್ಮಿಕರಿಗೆ ಉಚಿತ ಬಸ್‌ ಪಾಸ್‌ ಗಳ ವಿತರಣಾ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.

ಸರ್ಕಾರ ರೈತರ ಮತ್ತು ಕಾರ್ಮಿಕರ ಶ್ರೇಯೋಭಿವೃದ್ದಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು ಅವುಗಳನ್ನು ಪಡೆದ ಫಲಾನುಭವಿಗಳು ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಮುಂದಾಗಬೇಕಾಗಿದ್ದು ಸರ್ಕಾರಿ ಸೌಲಭ್ಯಗಳನ್ನು ದುರ್ಬಳಕೆ ಮಾಡಿಕೊಳ್ಳಬಾರದು ಎಂದರು.

ರೈತರು ಅಡಿಕೆ ಮತ್ತು ಬಾಳೆ ಬೆಳೆಯನ್ನು ಬೆಳೆಯಲು ಮುಂದೆ ಬಂದರೆ ಅವರಿಗೆ ಉದ್ಯೋಗ ಖಾತರಿ ಯೋಜನೆಯಲ್ಲಿ 75 ಸಾವಿರ ಹಣ ಕೊಡಿಸಲಿದ್ದು ಆಸಕ್ತ ರೈತರು ನನ್ನ ಬಳಿ ಮನವಿ ಸಲ್ಲಿಸಿದರೆ ಅವರಿಗೆ ತಕ್ಷಣವೇ ಮಂಜೂರು ಮಾಡಿಸಿಕೊಡಲಾಗುವುದು ಎಂದರು.

ತಾಲೂಕಿನಲ್ಲಿ 77 ಸಾವಿರ ಕುಟುಂಬಗಳಿಗೆ ಬಿಪಿಎಲ್‌ ಕಾರ್ಡ ನೀಡಲಾಗಿದ್ದು 58ಸಾವಿರ ಜನರಿಗೆ ಸಾಮಾಜಿಕ ಭದ್ರತಾ ಯೋಜನೆಯಲ್ಲಿ ಮಾಸಿಕ ವೇತನ ನೀಡಲಾಗುತ್ತಿದೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ 700 ಜನ ಕಾರ್ಮಿಕರಿಗೆ ಉಚಿತ ಬಸ್‌ಪಾಸ್‌ ಮತ್ತು 36 ಜನ ಫಲಾನುಭವಿಗಳಿಗೆ ಪಂಪ್‌-ಮೋಟಾರುಗಳನ್ನು ವಿತರಣೆ ಮಾಡಲಾಯಿತು.

ದಾವಣಗೆರೆ: ಹೊಲಿಗೆ ಕೆಲಸಗಾರರ ಕಲ್ಯಾಣ ಮಂಡಳಿ ಸ್ಥಾಪನೆಗೆ ಒತ್ತಾಯ, ಡಿಸಿಗೆ ಮನವಿ

ಈ ಸಂದÜರ್ಭದಲ್ಲಿ ಪರಿಶಿಷ್ಟಪಂಗಡಗಳ ಅಭಿವೃದ್ಧಿ ಅಧಿಕಾರಿ ರಾಜಶೇಖರ್‌, ಕೆಎಸ್‌ಆರ್‌ಟಿಸಿಯ ವಿಭಾಗೀಯ ನಿಯಂತ್ರಣಾಧಿಕಾರಿ ಸಿದ್ದೇಶ್‌, ತಹಸೀಲ್ದಾರ್‌ ಶಶಿಧರ್‌, ಲೋಕೋಪಯೋಗಿ ಇಲಾಖೆಯ ಅಭಿಯಂತರ ರವಿಕುಮಾರ್‌, ಸಂಗಮೇಶ್‌, ಎಎಸ್‌ಐ ನಾಗರಾಜ್‌, ತಾಲೂಕು ಎಸ್‌ಟಿ ಮೋರ್ಚಾ ಅಧ್ಯಕ್ಷ ಕುಮಾರ್‌, ಎಪಿಎಂಸಿ ಮಾಜಿ ಅಧ್ಯಕ್ಷ ದಿಗ್ಗೇನಹಳ್ಳಿ ನಾಗರಾಜ್‌, ಪುರಸಭೆಯ ಸದಸ್ಯ ಸೈಯ್ಯದ್‌ ಗೌಸ್‌ ಪೀರ್‌ ಹಾಜರಿದ್ದರು.

click me!