Crime Prevention: ಸೈಕಲ್ ಏರಿ ಅಪರಾಧಗಳ ಬಗ್ಗೆ ಅರಿವು ಮೂಡಿಸಿದ ಮೈಸೂರು ಪೊಲೀಸ್ ಕಮೀಷನರ್!

Published : Dec 25, 2021, 02:05 PM ISTUpdated : Dec 25, 2021, 02:07 PM IST
Crime Prevention: ಸೈಕಲ್ ಏರಿ ಅಪರಾಧಗಳ ಬಗ್ಗೆ ಅರಿವು ಮೂಡಿಸಿದ ಮೈಸೂರು ಪೊಲೀಸ್ ಕಮೀಷನರ್!

ಸಾರಾಂಶ

*ಸೈಕಲ್ ಏರಿ ಅಪರಾಧಗಳ ಅರಿವು ಮೂಡಿಸಿದ ಪೊಲೀಸ್ ಕಮೀಷನರ್. *ಮೈಸೂರು ನಗರ ಪೊಲೀಸರಿಂದ ಅಪರಾಧ ತಡೆ ಮಾಸಾಚರಣೆ. *ಅಪರಾಧಗಳ ಕುರಿತು  ಅರಿವು ನೀಡುವ ಸಲುವಾಗಿ ಕಾರ್ಯಕ್ರಮ.

ಮೈಸೂರು(ಡಿ. 25): ಮೈಸೂರು ನಗರ ಪೊಲೀಸರಿಂದ ಅಪರಾಧ ತಡೆ ಮಾಸಾಚರಣೆ 2021ರ (Crime Prevention month) ಬೆನ್ನಲ್ಲೇ  ಅಪರಾಧಗಳ ಕುರಿತು  ಜಾಗೃತಿ ಮೂಡಿಸುವ ಸಲುವಾಗಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅಪರಾಧಗಳ ಕುರಿತು ಅರಿವು ಮೂಡಿಸುವ ಗೋಡೆ ಕಲಾಕೃತಿಗಳ ಅನಾವರಣ ಮತ್ತು ಸೈಕಲ್ ಜಾಥಾ ಕಾರ್ಯಕ್ರಮವನ್ನು ಮೈಸೂರು ನಗರ ಪೊಲೀಸ್ ಆಯುಕ್ತರಾದ   ಡಾ. ಚಂದ್ರಗುಪ್ತ ಐ.ಪಿ.ಎಸ್.  ಉದ್ಘಾಟಿಸಿದರು.

ಮೈಸೂರು ನಗರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಭಿತ್ತಿಚಿತ್ರ ಇರುವ ಟ್ರಿನ್ ಟ್ರಿನ್ ಸೈಕಲ್ ಗಳ ಮೂಲಕ ಜಾಥಾ (Cycle Rally) ನಡೆಸಲಾಯಿತು. ಖುದ್ದು ಸೈಕಲ್ ತುಳಿದು ಪೊಲೀಸ್ ಕಮಿಷನರ್ ಡಾ.ಚಂದ್ರಗುಪ್ತ (Dr̤ Chadragupta IPSD) ಜನರಲ್ಲಿ ಅರಿವು ಮೂಡಿಸಿದರು. ಇದೇ ವೇಳೆ ಅಪರಾಧಗಳ ಅರಿವು ಮತ್ತು ಕಾನೂನುಗಳ ಬಗ್ಗೆ ಬೆಳಕು ಚೆಲ್ಲುವ ಗೋಡೆಚಿತ್ರಗಳ ಅನಾವರಣ ಮಾಡಲಾಯಿತು. 50 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಹಾಗೂ ಸ್ವಯಂ ಸೇವಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. 

 

 

ಕನ್ನಡದಲ್ಲೂ ಕಾನೂನು ಪರೀಕ್ಷೆಗೆ ಅವಕಾಶ!

ಮೈಸೂರು ವಿವಿಯು (Mysuru VV) ಕಾನೂನು ವಿಷಯಗಳ ಪರೀಕ್ಷೆಯನ್ನು (Law Exams) ಕನ್ನಡದಲ್ಲಿ ಬರೆಯಲು ಅವಕಾಶ ನೀಡಿದೆ.  ಮಾನಸ ಗಂಗೋತ್ರಿಯ ವಿಜ್ಞಾನ ಭವನದಲ್ಲಿ ಮೈಸೂರು ವಿವಿ ಶೈಕ್ಷಣಿಕ ಮಂಡಳಿಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪರ, ವಿರೋಧ ಚರ್ಚೆ ನಡೆಯಿತು. ಮೊದಲಿಗೆ ಕನ್ನಡದಲ್ಲಿ (Kannada) ಪರೀಕ್ಷೆ ಬರೆಯಲು ಅವಕಾಶ ನೀಡುವುದಿಲ್ಲ, ಒಂದು ವೇಳೆ ಪರೀಕ್ಷೆಗೆ ಅವಕಾಶ ನೀಡಿದರೆ ಬೋಧನೆಯನ್ನೂ ಕನ್ನಡದಲ್ಲಿಯೇ ಮಾಡುವಂತೆ ಒತ್ತಾಯ ಕೇಳಿ ಬರುತ್ತದೆ. 

ಇದರಿಂದ ವಿದೇಶಿ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತದೆ. ಅಲ್ಲದೆ ಕನ್ನಡದಲ್ಲಿ ಪುಸ್ತಕಗಳ ಕೊರತೆ ಇದೆ. ಇದ್ದರೂ ಐದಾರು ಪುಸ್ತಕ ಮಾತ್ರ ಇದೆ. ಅವುಗಳೂ ಕೂಡ ಸರಿಯಾಗಿ ಅನುವಾದವಾಗಿಲ್ಲ. ಇಂತಹ ಪುಸ್ತಕಗಳ ಅಧ್ಯಯನದಿಂದ ವಿದ್ಯಾರ್ಥಿಗಳ (Students) ಬೌದ್ಧಿಕ ಮಟ್ಟ ಕೆಳಕ್ಕೆ ಇಳಿಯಲಿದೆ. ಕೋರ್ಟ್‌ನ ತೀರ್ಪುಗಳು ಇಂಗ್ಲಿಷ್‌ನಲ್ಲಿಯೇ ಇರುತ್ತವೆ. ಅವುಗಳನ್ನು ಕನ್ನಡಕ್ಕೆ ತರ್ಜುಮೆ ಮಾಡುವುದು ಕಷ್ಟದ ಕೆಲಸ. ಆದ್ದರಿಂದ ಇಂಗ್ಲಿಷ್‌ನಲ್ಲೇ (English) ಬೋಧನೆ, ಪರೀಕ್ಷೆ ನಡೆಸಲಾಗುತ್ತಿದೆ ಎಂದು ಕಾನೂನು ನಿಕಾಯದ ಡೀನ್‌ ಪ್ರೊ. ರಮೇಶ್‌ (Ramesh) ಹೇಳಿದರು.

ಇಂಗ್ಲಿಷ್‌ಗಿಂತ ಕನ್ನಡದಲ್ಲಿ ಬೋಧಿಸಿದರೆ ಹೆಚ್ಚು ಸೂಕ್ತ!

ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಯಿತು. ಒಂದೆರಡು ಸಂಖ್ಯೆಯಲ್ಲಿರುವ ವಿದೇಶಿ ವಿದ್ಯಾರ್ಥಿಗಳಿಗಾಗಿ ಸ್ಥಳೀಯ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತದೆ. ಸ್ಥಳೀಯ ವಿದ್ಯಾರ್ಥಿಗಳು (Students) ಬಹುಪಾಲು ಹಳ್ಳಿಗಾಡಿನಿಂದ ಬಂದಿರುತ್ತಾರೆ. ಅವರಿಗೆ ಇಂಗ್ಲಿಷ್‌ಗಿಂತ ಕನ್ನಡದಲ್ಲಿ (Kannada) ಬೋಧಿಸಿದರೆ ಹೆಚ್ಚು ಸೂಕ್ತ ಎನಿಸುತ್ತದೆ ಎಂದು ಕೆಲವರು ಆಕ್ಷೇಪ ವ್ಯಕ್ತಪಡಿಸಿದರು.

ಕಾನೂನು ನಿಕಾಯ ಸಭೆಯಲ್ಲಿ ಕೈಗೊಂಡಿರುವ ಶಿಫಾರಸುಗಳ ಅನುಮೋದನೆಗಾಗಿ ಕಾನೂನು ನಿಕಾಯದ ಡೀನ್‌ ಪ್ರೊ. ರಮೇಶ್‌ ಈ ವಿಷಯ ಮಂಡಿಸಿದರು. ಆಗ ವಿದ್ಯಾರ್ಥಿಗಳ ಪ್ರತಿನಿಧಿಯಾಗಿ ನಾಮ ನಿರ್ದೇಶನಗೊಂಡಿರುವ ರಾಜಶೇಖರ್‌ ಅವರು, ಬಿಎ ಎಲ್‌ಎಲ್‌ಎಂ (BALLM) ಮತ್ತು ಎಲ್‌ಎಲ್‌ಎಂ (LLM) ಬೋಧನೆ ಮತ್ತು ಪ್ರಶ್ನೆಪತ್ರಿಕೆ ಇಂಗ್ಲಿಷ್‌ನಲ್ಲಿ ಮಾತ್ರ ಇದೆ. ಇದರಿಂದ ಕನ್ನಡದ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದ್ದು, ಕನ್ನಡ ಭಾಷೆಯಲ್ಲೂ ಪ್ರಶ್ನೆಪತ್ರಿಕೆ ನೀಡಬೇಕು ಎಂದು ಆಗ್ರಹಿಸಿದರು. ಪೂರ್ತಿ ಸ್ಟೋರಿ ಇಲ್ಲಿ ಓದಿ

ಇದನ್ನೂ ಓದಿ:

1) Covid Vaccination : ಮೈಸೂರು ನಗರದಲ್ಲಿ ಶೇ.100 ಮೊದಲ ಡೋಸ್‌ ಲಸಿಕೆ

2) Tiger Caches in kodagu : ಒಂದೇ ದಿನ 9 ಮೇಕೆ ಕೊಂದಿದ್ದ ಹುಲಿ ಹಿಡಿದುಮೈಸೂರಿಗೆ ರವಾನೆ

 

PREV
Read more Articles on
click me!

Recommended Stories

Bengaluru: ಕ್ಯಾಬ್ ಚಾಲಕನ ಮೇಲೆ ಯುವತಿ ರೇಪ್ ಆರೋಪ, ತನಿಖೆ ವೇಳೆ ಬಿಗ್ ಟ್ವಿಸ್ಟ್!
ನಮ್ಮನ್ನು ಗುಲಾಮರನ್ನಾಗಿಸಿ ಹಿಂದೂ ಧರ್ಮ ಸೃಷ್ಟಿಸಿದ್ದು ಬ್ರಾಹ್ಮಣರು: ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ