ಕಾರು ಅಪಘಾತ| ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಮಾಜಿ ಉಪ ಸಭಾವತಿ ಡಿ.ಎಚ್.ಶಂಕರಮೂರ್ತಿ ಅವರ ಪುತ್ರ ಕರ್ನಾಟಕ ರಾಜ್ಯ ಆರ್ಯವೈಶ್ಯ ನಿಗಮದ ಅಧ್ಯಕ್ಷ ಡಿ.ಎಸ್. ಅರುಣ್| ತುಮಕೂರು ಜಿಲ್ಲೆಯ ಶಿರಾ ಬಳಿ ನಡೆದ ಅಪಘಾತ|
ಶಿವಮೊಗ್ಗ(ಜು.23): ಮಾಜಿ ಉಪ ಸಭಾವತಿ ಡಿ.ಎಚ್.ಶಂಕರಮೂರ್ತಿ ಅವರ ಪುತ್ರ ಕರ್ನಾಟಕ ರಾಜ್ಯ ಆರ್ಯವೈಶ್ಯ ನಿಗಮದ ಅಧ್ಯಕ್ಷ ಡಿ.ಎಸ್. ಅರುಣ್ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾದ ಘಟನೆ ತುಮಕೂರು ಜಿಲ್ಲೆಯ ಶಿರಾ ನಗರದ ಬಳಿ ಇಂದು(ಗುರುವಾರ) ಬೆಳಿಗ್ಗೆ ನಡೆದಿದೆ. ಆದರೆ, ಡಿ.ಎಸ್. ಅರುಣ್ ಅವರು ಅಪಘಾತದಲ್ಲಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಡಿ.ಎಸ್.ಅರುಣ್ ಅವರು ಸಂಚರಿಸುತ್ತಿದ್ದ ಕಾರು ಶಿರಾ ಬಳಿ ಇಂದು ಬೆಳಿಗ್ಗೆ ಅಪಘಾತವಾಗಿದ್ದು, ಅದೃಷ್ಟವಶಾತ್ ಡಿ.ಎಸ್.ಅರುಣ್ ಸೇರಿದಂತೆ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ನೀವೂ ಸತ್ತು ಬೇರೆಯವರನ್ನು ಯಾಕೆ ಸಾಯಿಸುತ್ತೀರಿ? ಈಶ್ವರಪ್ಪ ಸಿಡಿಮಿಡಿ
ದ್ವಿಚಕ್ರ ವಾಹನವೊಂದು ಅಡ್ಡ ಬಂದ ಪರಿಣಾಮ ಅದನ್ನು ತಪ್ಪಿಸಲು ಹೋಗಿ ರೋಡ್ ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಕಾರಿನಲ್ಲಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ವಾಸುದೇವ್, ಡಿ.ಎಂ.ಶಂಕರಪ್ಪ ಮೊದಲಾದವರು ಇದ್ದರು ಎಂದು ತಿಳಿದುಬಂದಿದೆ.