ಡಿ.ಕೆ. ಶಿವಕುಮಾರ ಕೆಪಿಸಿಸಿ ಅಧ್ಯಕ್ಷರಾಗಿ ಜೂ. 7ರಂದು ಅಧಿಕಾರ ಸ್ವೀಕಾರ| ಗ್ರಾಪಂ ವ್ಯಾಪ್ತಿಯಲ್ಲಿ ಆನ್‌ಲೈನ್ ಮೂಲಕ ವಿಡಿಯೋವನ್ನು ವೀಕ್ಷಿಸಲು ಕಾರ್ಯಕರ್ತರಿಗೆ ವ್ಯವಸ್ಥೆ| ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಶಿವರಾಜ ತಂಗಡಗಿ ಅವರ ಕೈ ಬಲಪಡಿಸಬೇಕು|
ಕನಕಗಿರಿ(ಜೂ.01): ಮಾಜಿ ಸಚಿವ ಡಿ.ಕೆ. ಶಿವಕುಮಾರ ಕೆಪಿಸಿಸಿ ಅಧ್ಯಕ್ಷರಾಗಿ ಜೂ. 7ರಂದು ಅಧಿಕಾರ ಸ್ವೀಕರಿಸುತ್ತಿರುವುದರಿಂದ ಕ್ಷೇತ್ರದ ಆಯಾ ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಆನ್‌ಲೈನ್ ಮೂಲಕ ವಿಡಿಯೋವನ್ನು ವೀಕ್ಷಿಸಲು ಕಾರ್ಯಕರ್ತರಿಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ವ್ಯವಸ್ಥೆ ಮಾಡಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರೆಡ್ಡಿಶ್ರೀನಿವಾಸ ಹೇಳಿದರು.
ಅವರು ಪಟ್ಟಣದ ಮಾಜಿ ಸಚಿವ ಶಿವರಾಜ ತಂಗಡಗಿ ಗೃಹ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ವೀಕ್ಷಕರ ಸಭೆಯಲ್ಲಿ ಮಾತನಾಡಿ, ಕ್ಷೇತ್ರದ ಪ್ರತಿ ಗ್ರಾ.ಪಂ. ವ್ಯಾಪ್ತಿಯ ಪಕ್ಷದ ಕಾರ್ಯಕರ್ತರಿಗೆ ಆನ್‌ಲೈನ್ ಹಾಗೂ ಟಿವಿಗಳ ಮೂಲಕ ಡಿಕೆಶಿ ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುವ ನೇರ ಪ್ರಸಾರದ ಕಾರ್ಯಕ್ರಮವನ್ನು ವೀಕ್ಷಿಸುವ ವ್ಯವಸ್ಥೆ ಮಾಡಲಾಗುತ್ತಿದ್ದು, ಕಾರ್ಯಕರ್ತರು ತಪ್ಪದೇ ಈ ಸಮಾರಂಭವನ್ನು ವೀಕ್ಷಿಸಬೇಕು ಎಂದು ಮನವಿ ಮಾಡಿದರು. ಅಲ್ಲದೇ ಮುಂಬರುವ ಗ್ರಾ.ಪಂ, ತಾ.ಪಂ ಹಾಗೂ ಜಿ.ಪಂ ಚುನಾವಣೆಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಶಿವರಾಜ ತಂಗಡಗಿ ಅವರ ಕೈ ಬಲಪಡಿಸಬೇಕು ಎಂದು ತಿಳಿಸಿದರು.
ಲಾಕ್‌ಡೌನ್: ಆಂಧ್ರದಲ್ಲಿ ಸಿಲುಕಿದವರು TVS ಬೈಕ್ ಮೂಲಕ ಕೊಪ್ಪಳಕ್ಕೆ..!
ಪಕ್ಷದ ಹಿರಿಯ ಮುಖಂಡರಾದ ಎಸ್.ಐ. ಪಾಟೀಲ್, ಗಂಗಾಧರಸ್ವಾಮಿ, ತಾ.ಪಂ. ಅಧ್ಯಕ್ಷ ಮಲಕನಗೌಡ ಬೆನಕನಾಳ, ಪ.ಪಂ. ಸದಸ್ಯರಾದ ಹುಲುಗಪ್ಪ ವಾಲೇಕಾರ್, ಪಾಷಸಾಬ ಮುಲ್ಲಾರ, ಮುಖಂಡ ಮಮ್ಮದರಫಿ ಸೇರಿದಂತೆ ಇತರರು ಇದ್ದರು.