ಮಂಗಳೂರು ಬರ್ಕಜೆ ಡ್ಯಾಮ್ ದುರಂತ: ಮೂವರು ಯುವಕರು ನೀರುಪಾಲು

By Sathish Kumar KH  |  First Published Nov 27, 2024, 8:46 PM IST

ದಕ್ಷಿಣ ಕನ್ನಡ ಜಿಲ್ಲೆಯ ಬರ್ಕಜೆ ಡ್ಯಾಮ್‌ನಲ್ಲಿ ಈಜಲು ಹೋದ ಮೂವರು ಯುವಕರು ನೀರುಪಾಲಾಗಿದ್ದಾರೆ. ಮೂಡುಕೋಡಿ ಗ್ರಾಮದಲ್ಲಿ ನಡೆದ ಈ ಘಟನೆಯಲ್ಲಿ ಮೂವರು ಯುವಕರು ಮೃತಪಟ್ಟಿದ್ದಾರೆ.


ಮಂಗಳೂರು (ನ.27): ದಕ್ಷಿಣ ಕನ್ನಡ ಜಿಲ್ಲೆಯ ನೈಸರ್ಗಿಕ ಸೌಂದರ್ಯವನ್ನು ನೋಡಲು ನೆಂಟರ ಮನೆಗೆ ಬಂದಿದ್ದ ಮೂವರು ಯುವಕರು ಬರ್ಕಜೆ ಡ್ಯಾಮ್‌ನಲ್ಲಿ ಈಜಲು ಹೋಗಿ ನೀರಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಮೂಡುಕೋಡಿ ಗ್ರಾಮದ ಬರ್ಕಜೆ ಡ್ಯಾಂ ನಲ್ಲಿ ಘಟನೆ ನಡೆದಿದೆ. ಡ್ಯಾಮ್‌ನ ಹಿನ್ನೀರಿನಲ್ಲಿ ಸ್ನಾನ ಮಾಡಲು ಹೋದ ಮೂವರು ಯುವಕರು ನೀರುಪಾಲು ಆಗಿದ್ದಾರೆ. ಎಡಪದವಿನ ಲಾರೆನ್ಸ್(20), ಮಡಂತ್ಯಾರಿನ ಸೂರಜ್ (19), ವಗ್ಗದ ಜೈಸನ್(19) ನದಿಯಲ್ಲಿ ಮುಳುಗಿದ ಯುವಕರಾಗಿದ್ದಾರೆ. ಇವರು ಮೂಡುಕೋಡಿ ವಾಲ್ಟರ್ ಎಂಬವರ ಮನೆಗೆ ಬಂದಿದ್ದರು. ಮಧ್ಯಾಹ್ನದ ಊಟ ಮುಗಿಸಿ ನದಿಯಲ್ಲಿ ಸ್ನಾನ ಮಾಡಲು ಹೋಗಿದ್ದಾಗ ಈ ದುರ್ಘಟನೆ ಸಂಭವಿಸಿದೆ.

Tap to resize

Latest Videos

ಇನ್ನು ನದಿಗೆ ಈಜಲು ತೆರಳಿದ್ದವರು ಈ ವೇಳೆ ನೀರಿನ ರಭಸ ಹೆಚ್ಚಾಗಿ ನದಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಒಬ್ಬರು ಇನ್ನೊಬ್ಬರ ಕೈಯನ್ನು ಹಿಡಿದುಕೊಂಡು ರಕ್ಷಣೆಗೆ ಮುಂದಾಗಿ ಇದೀಗ ಮೂವರೂ ಒಟ್ಟಿಗೆ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಸ್ಥಳೀಯರು ಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಮಾಹಿತಿ ಬೆನ್ನಲ್ಲಿಯೇ ಸ್ಥಳಕ್ಕೆ ವೇಣೂರು ಪೊಲೀಸರು ಬಂದು ಸ್ಥಳ ಪರಿಶೀಲನೆ ನಡೆಸಿ ಅಗ್ನಿಶಾಮಕ ದಳ ಹಾಗೂ ಮುಳುಗು ತಜ್ಞರ ಸಹಾಯದ ಮೂಲಕ ಮೃತ ದೇಹಗಳನ್ನು ಹೊರಗೆ ತೆಗೆದಿದ್ದಾರೆ.

ಇದನ್ನೂ ಓದಿ: ಮಲೆನಾಡಿನ ಮಿಡಿ ಮಾವು ತಜ್ಞ ಬಿ.ವಿ. ಸುಬ್ಬರಾವ್ ಇನ್ನಿಲ್ಲ

ಮೂವರೂ ವಿದ್ಯಾರ್ಥಿಗಳು ಮಂಗಳೂರಿನ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ. ಇನ್ನು ವಾಲ್ಟರ್ ಎಂಬುವವರ ಮನೆಯಲ್ಲಿದ್ದ ಕಾರ್ಯಕ್ರಮವೊಂದಕ್ಕೆ ಬಂದಿದ್ದ ವಿದ್ಯಾರ್ಥಿಗಳು ಒಟ್ಟಿಗೆ ಈಜಾಡಲು ತೆರಳಿ ಇದೀಗ ದುರಂತ ಅಂತ್ಯ ಕಂಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ..

click me!