ಚಾಮರಾಜನಗರ ದುರಂತ : ದಕ್ಷಿಣ ಕನ್ನಡದಲ್ಲೂ ಆಕ್ಸಿಜನ್ ಕೊರತೆಯ ಆತಂಕ

By Suvarna NewsFirst Published May 3, 2021, 4:25 PM IST
Highlights

ದಕ್ಷಿಣ ಕನ್ನಡ ಜಿಲ್ಲೆಗೆ ಹೊರ ಜಿಲ್ಲೆಗಳಿಂದಲೂ ರೋಗಿಗಳು ಚಿಕಿತ್ಸೆಗಾಗಿ ಆಗಮಿಸುತ್ತಿದ್ದು, ಆಕ್ಸಿಜನ್ ಕೊರತೆಯಾಗುವ ಸಾಧ್ಯತೆ ಇದೆ. ಈ ಬಗ್ಗೆ ಈಗಾಗಲೇ ಮನವಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ. 

ಮಂಗಳೂರು (ಮೇ.03): ಚಾಮರಾಜನಗರದಲ್ಲಿ ಆಕ್ಸಿಜನ್ ಕೊರತೆಯಿಂದ ಒಂದೇ ದಿನ 24 ಮಂದಿ ಮೃತಪಟ್ಟಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಆಕ್ಸಿಜನ್ ಸಮಸ್ಯೆ ತಲೆದೂರುವ ಆತಂಕ ಎದುರಾಗಿದೆ. 

ಮಂಗಳೂರಿನಲ್ಲಿಂದು ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಜಿಲ್ಲೆಯಲ್ಲಿ ಸದ್ಯ 24 ಗಂಟೆಗಳಿಗೆ ಆಗುವಷ್ಟು ಆಕ್ಸಿಜನ್ ಜಿಲ್ಲೆಯಲ್ಲಿ ಲಭ್ಯತೆ ಇದೆಯಷ್ಟೇ ಎಂದಿದ್ದಾರೆ. 

ಆಕ್ಸಿಜನ್ ಇಲ್ಲದೇ, ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 20 ಮಂದಿ ಸಾವು ...

ಬಳ್ಳಾರಿಯಿಂದ ಬರುತ್ತಿರುವ ಆಕ್ಸಿಜನ್ ಪ್ರಮಾಣ ಹೆಚ್ಚಿಸಲು ಸರ್ಕಾರವನ್ನು ಕೇಳಿದ್ದೇವೆ. ಇಲ್ಲಿನ ಜನಪ್ರತಿನಿಧಿಗಳು ಕೂಡ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.  ಸದ್ಯಕ್ಕಂತೂ ಜಿಲ್ಲೆಯಲ್ಲಿ ಆಕ್ಸಿಜನ್ ಸಮಸ್ಯೆಯಿಲ್ಲ. ಆದರೆ ಎದುರಾಗುವ ಬಗ್ಗೆ ಆತಂಕ ಇದೆ ಎಂದಿದ್ದಾರೆ. 

ಅವನ್ಯಾರೋ ಸಿಎಂ, ಅವನ್ಯಾರೋ ಆರೋಗ್ಯ ಸಚಿವ : ಏಕವಚನದಲ್ಲೇ ಶಾಸಕರ ಆಕ್ರೋಶ ...

ಪ್ರತಿನಿತ್ಯ ಪೂರೈಕೆಯಾಗುತ್ತಿರುವಂತೆ ಪೂರೈಕೆ ಆದರೆ ಯಾವುದೇ ಸಮಸ್ಯೆ ಬರುವುದಿಲ್ಲ.  ಮಂಗಳೂರಿಗೆ ಹೊರ ಜಿಲ್ಲೆಗಳಿಂದ ಕೂಡ ರೋಗಿಗಳು ಆಗಮಿಸುತ್ತಿರುವುದರಿಂದ ಆಕ್ಸಿಜನ್ ಬಳಕೆ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಕೊರತೆ ಎದುರಾಗಬಹುದಾದ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

click me!