ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಮಿತಿ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೋಮವಾರ ಪ್ರತಿಭಟನೆ ನಡೆಸಿದರು. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಉಪ ವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ವರದಿ: ವರದರಾಜ್, ಏಷ್ಯಾನೆಟ್ ಸುವರ್ಣನ್ಯೂಸ್
ದಾವಣಗೆರೆ (ಜ.23): ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಜಿಲ್ಲಾ ಸಮಿತಿ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೋಮವಾರ ಪ್ರತಿಭಟನೆ ನಡೆಸಿದರು. ಜಿಲ್ಲಾ ಪ್ರಧಾನ ಸಂಚಾಲಕ ಬಿ. ದುಗ್ಗಪ್ಪ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ಡಾ. ಅಂಬೇಡ್ಕರ್ ಸರ್ಕಲ್ ನಿಂದ ಹೊರಟು ಉಪವಿಭಾಗಾಧಿಕಾರಿಗಳ ಕಛೇರಿಗೆ ವರೆಗೆ ಸಾಗಿ, ನ್ಯಾ. ಸದಾಶಿವ ಆಯೋಗ ವರದಿ ಜಾರಿಗೆ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಉಪ ವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ನ್ಯಾ. ಎ.ಜೆ. ಸದಾಶಿವ ಆಯೋಗ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿ, ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಬೇಕು, ದಾವಣಗೆರೆ ಯ ಪೌರ ಕಾರ್ಮಿಕರೇ ಹೆಚ್ಚಿರುವ ಗಾಂಧೀ ನಗರದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಆರಂಭಿಸಲಾಗುವುದು,ನೀರಿನ ಟ್ಯಾಂಕ್ ಕೆಳಗೆ ಗ್ರಂಥಾಲಯವನ್ನು ನಿರ್ಮಿಸಿ ಕೊಡಬೇಕು, ಕರೆಂಟ್ ಲೈನ್ ಕೆಳಗೆ ಬಫರ್ ಜೋನ್, ಸಿ.ಎ. ಸೈಟ್ ಮತ್ತು ಅಕ್ರಮವಾಗಿ ಮಂಜೂರು ಮಾಡಿರುವ ಬಗ್ಗೆ ತನಿಖೆಯಾಗಬೇಕು ಎಂದು ಆಗ್ರಹಿಸಲಾಯಿತು.
ಕೋಲಾರದಲ್ಲಿ ಸಿದ್ದರಾಮಯ್ಯ ಸೋಲಿಸಲು ರಣತಂತ್ರ: ದಲಿತ ಮತದಾರರ ಕರಪತ್ರ ಅಭಿಯಾನ
ಆವರಗೆರೆ ಎ.ಕೆ. ಕಾಲೋನಿ ನಿವಾಸಿಗಳಿಗೆ ಹಕ್ಕುಪತ್ರ ನೀಡಬೇಕು, ಅಲ್ಲಿನ ಅಂಬೇಡ್ಕರ್ ವೃತ್ತದಲ್ಲಿ ಅಂಬೇಡ್ಕರ್ ಪ್ರತಿಮೆ ಸ್ಥಾಪಿಸಬೇಕು, ಪಾಲಿಕೆ ವ್ಯಾಪ್ತಿಯ ಬಸಾಪುರದಲ್ಲಿರುವ ರುದ್ರಭೂಮಿಯನ್ನು ಅಭಿವೃದ್ಧಿ ಪಡಿಸಬೇಕು ಇತ್ಯಾದಿ ಹಕ್ಕೊತ್ತಾಯಗಳನ್ನು ಮನವಿ ಮೂಲಕ ಸಲ್ಲಿಸಲಾಯಿತು.
ಗ್ರಾಮವಾಸ್ತವ್ಯ ನಂತರ ದಲಿತರ ಮನೇಲಿ ಅಶೋಕ್ ಉಪಾಹಾರ
ಇದಲ್ಲದೆ ಚನ್ನಗಿರಿ, ನ್ಯಾಮತಿ, ಹೊನ್ನಾಳಿ, ದಾವಣಗೆರೆ ತಾಲ್ಲೂಕುಗಳಲ್ಲಿಯೂ ಇರುವ ಸಮಸ್ಯೆಗಳನ್ನು ಪರಿಹರಿಸಿಕೊಡುವಂತೆ ಮನವಿಯಲ್ಲಿ ಉಲ್ಲೇಖಿಸಿದ್ದು, ಉಪವಿಭಾಗಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಬಿ. ಹನುಮಂತಪ್ಪ, ಕೆಂಚಪ್ಪ ಈಚಘಟ್ಟ, ಕೊಡಗನೂರು, ಲಕ್ಷ್ಮಣ, ಮಂಜುನಾಥ್, ಗೂಳಿ ತಿಪ್ಪೇಶಿ ಬಸಾಪುರ, ಎನ್. ರೇವಣಸಿದ್ದಪ್ಪ ಆವರಗೆರೆ, ಹನುಮಂತಪ್ಪ ಬೀರೂರು, ಮಲ್ಲೇಶಪ್ಪ ತರಕಾರಿ ಉಪಸ್ಥಿತರಿದ್ದರು.