ದಲಿತರ ಬೇಡಿಕೆ ಮುಖ್ಯಮಂತ್ರಿ ಗಮನಕ್ಕೆ: ಯು.ಟಿ.ಖಾದರ್‌

By Kannadaprabha News  |  First Published Jul 31, 2023, 10:13 AM IST

ಡಿಸಿ ಮನ್ನಾ ಭೂಮಿ ಹಂಚಿಕೆ ಸೇರಿದಂತೆ ದಲಿತ ಸಂಘಟನೆಗಳ ಬೇಡಿಕೆಗಳನ್ನು ಮುಖ್ಯಮಂತ್ರಿ ಹಾಗೂ ಸಂಬಂಧಪಟ್ಟಸಚಿವರ ಗಮನಕ್ಕೆ ತಂದು ಈಡೇರಿಸಲು ಪ್ರಯತ್ನಿಸುವುದಾಗಿ ವಿಧಾನಸಭಾ ಸ್ಪೀಕರ್‌ ಯು.ಟಿ. ಖಾದರ್‌ ಆಶ್ವಾಸನೆ ನೀಡಿದ್ದಾರೆ.


ಮಂಗಳೂರು (ಜು.31) :  ಡಿಸಿ ಮನ್ನಾ ಭೂಮಿ ಹಂಚಿಕೆ ಸೇರಿದಂತೆ ದಲಿತ ಸಂಘಟನೆಗಳ ಬೇಡಿಕೆಗಳನ್ನು ಮುಖ್ಯಮಂತ್ರಿ ಹಾಗೂ ಸಂಬಂಧಪಟ್ಟಸಚಿವರ ಗಮನಕ್ಕೆ ತಂದು ಈಡೇರಿಸಲು ಪ್ರಯತ್ನಿಸುವುದಾಗಿ ವಿಧಾನಸಭಾ ಸ್ಪೀಕರ್‌ ಯು.ಟಿ. ಖಾದರ್‌ ಆಶ್ವಾಸನೆ ನೀಡಿದ್ದಾರೆ.

ನಗರದ ಡಾ.ಬಿ.ಆರ್‌.ಅಂಬೇಡ್ಕರ್‌ ಭವನದಲ್ಲಿ ಭಾನುವಾರ ದ.ಕ. ಮತ್ತು ಉಡುಪಿ ಜಿಲ್ಲೆಯ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡಗಳ ಮಹಾಸಂಗಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

Tap to resize

Latest Videos

undefined

ದಲಿತ ಸಂಘಟನೆಗಳು ತಮ್ಮೆಲ್ಲ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಸೌಹಾರ್ದತೆಯಿಂದ ಒಂದಾಗಿ ಮಹಾಸಂಗಮ ಕಾರ್ಯಕ್ರಮ ಆಯೋಜಿಸಿರುವುದು ಸಂತಸದ ಸಂಗತಿ ಎಂದರು.

ವ್ಯಸನಮುಕ್ತರು ಸತ್ಪ್ರಜೆಗಳಾಗಿ ಬದುಕಬೇಕು: ಯು.ಟಿ.ಖಾದರ್‌

ಕಾರ್ಯಕ್ರಮ ಉದ್ಘಾಟಿಸಿದ ಮಾಜಿ ಸಚಿವ ರಮಾನಾಥ ರೈ ಮಾತನಾಡಿ, ಡಿಸಿ ಮನ್ನಾ ಜಾಗದ ಬಗ್ಗೆ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಉಲ್ಲೇಖಿಸಿದ್ದು, ಈ ಸಮಸ್ಯೆ ಇತ್ಯರ್ಥಪಡಿಸಲು ಸರ್ಕಾರ ಕ್ರಮ ವಹಿಸುವ ವಿಶ್ವಾಸವಿದೆ. ಮಾತ್ರವಲ್ಲದೆ ದಲಿತರ ಹಲವು ಬೇಡಿಕೆಗಳಿಗೆ ಸರ್ಕಾರದಲ್ಲಿ ಹೆಚ್ಚಿನ ಮಹತ್ವ ಸಿಗಲಿದೆ ಎಂದು ತಿಳಿಸಿದರು.

ದ.ಕ.ಜಿಲ್ಲಾ ದಲಿತ ಸಂಘಟನೆಗಳ ಸಮನ್ವಯ ಸಮಿತಿ ಸಂಚಾಲಕ ಪ್ರಧಾನ ಕಾರ್ಯದರ್ಶಿ ಅಶೋಕ್‌ ಕೊಂಚಾಡಿ ಮಾತನಾಡಿ, 5300 ಎಕರೆ ಭೂಮಿಯನ್ನು ಮಾತ್ರವೇ ದಲಿತರಿಗೆ ಹಂಚಲಾಗಿದ್ದು, ಉಳಿದ ಭೂಮಿ ಹಲವು ಶಿಕ್ಷಣ ಸಂಸ್ಥೆಗಳು, ಪ್ರಭಾವಿ ವ್ಯಕ್ತಿಗಳಿಂದ ಅತಿಕ್ರಮಣವಾಗಿವೆ. ಉಳಿಕೆ ಜಮೀನನ್ನು ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ ನೀಡಬೇಕು ಎಂದು ಆಗ್ರಹಿಸಿದರು.

 

ಬಜೆಟ್‌ ಅಧಿವೇಶನದಲ್ಲಿ 14 ಮಸೂದೆ ಪಾಸ್‌: ಸ್ಪೀಕರ್‌ ಯುಟಿ ಖಾದರ್

ಸ್ಪೀಕರ್‌ ಯು.ಟಿ.ಖಾದರ್‌, ಮಾಜಿ ಸಚಿವ ರಮನಾಥ ರೈ, ಮಂಗಳೂರು ವಿವಿಯ ನಿವೃತ್ತ ಪ್ರಾಧ್ಯಾಪಕ ಪ್ರೊ. ಅಭಯ ಕುಮಾರ್‌, ದಲಿತ ಮುಖಂಡ ಚಂದ್ರ ಕುಮಾರ್‌ ಅವರನ್ನು ಸನ್ಮಾನಿಸಲಾಯಿತು. ಮಾಜಿ ಸಚಿವ ಅಭಯಚಂದ್ರ ಜೈನ್‌, ವಿಧಾನ ಪರಿಷತ್‌ನ ಮಾಜಿ ಸದಸ್ಯ ಐವನ್‌ ಡಿಸೋಜ, ಕಾಂಗ್ರೆಸ್‌ ಮುಖಂಡ ಮಿಥುನ್‌ ರೈ, ದ.ಕ. ಜಿಲ್ಲಾ ದಲಿತ ಸಂಘಟನೆಗಳ ಸಮನ್ವಯ ಸಮಿತಿಯ ಉಪ ಪ್ರಧಾನ ಸಂಚಾಲಕ ರಮೇಶ್‌ ಕೋಟ್ಯಾನ್‌, ತುಳು ಪರಿಷತ್‌ ಅಧ್ಯಕ್ಷ ತಾರನಾಥ್‌ ಗಟ್ಟಿ, ಉಡುಪಿಯ ದಲಿತ ಸಂಘಟನೆಗಳ ಐಕ್ಯತಾ ಸಮಿತಿಯ ಪ್ರಧಾನ ಸಂಚಾಲಕ ಮಂಜುನಾಥ ಗಿಳಿಯೂರು, ದ.ಕ. ಜಿಲ್ಲಾ ದಲಿತ ಸಂಘಟನೆಗಳ ಸಮನ್ವಯ ಸಮಿತಿಯ ಮಹಿಳಾ ಸಂಚಾಲಕಿ ಸರೋಜಿನಿ ಬಂಟ್ವಾಳ, ಶೇಖರ್‌ ಕುಕ್ಕೋಡಿ, ಸುಭಾಷ್‌, ಸುಂದರ ಮೇರ ಮತ್ತಿತರರಿದ್ದರು.

click me!