ಅ.16 ರಿಂದ 22 ರವರೆಗೆ ದಸರಾ ಚಲನಚಿತ್ರೋತ್ಸವ

By Kannadaprabha News  |  First Published Oct 9, 2023, 8:20 AM IST

ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಚಲನಚಿತ್ರೋತ್ಸವ ಉಪ ಸಮಿತಿ ವತಿಯಿಂದ ಅ.16 ರಿಂದ 22 ರವರೆಗೆ ನಗರದ ಮಾಲ್ ಆಫ್ ಮೈಸೂರಿನ ಐನಾಕ್ಸ್ ಹಾಗೂ ಡಿಆರ್ ಸಿ ಪರದೆಗಳಲ್ಲಿ ಚಲನಚಿತ್ರಗಳ ಪ್ರದರ್ಶನ ಹಮ್ಮಿಕೊಂಡಿದ್ದು, ಈ ಸಂಬಂಧ ಅ.9ರ ಬೆಳಗ್ಗೆ 10.30 ರಿಂದ ಸಂಜೆ 4.30 ರವರೆಗೆ ನಗರದ ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯಲ್ಲಿ ಸಿನಿಮಾ ಪ್ರಿಯರಿಗೆ ಚಲನಚಿತ್ರೋತ್ಸವ ಪ್ರದರ್ಶನದ ಪಾಸ್ ವಿತರಿಸಲಾಗುವುದು.


  ಮೈಸೂರು : ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಚಲನಚಿತ್ರೋತ್ಸವ ಉಪ ಸಮಿತಿ ವತಿಯಿಂದ ಅ.16 ರಿಂದ 22 ರವರೆಗೆ ನಗರದ ಮಾಲ್ ಆಫ್ ಮೈಸೂರಿನ ಐನಾಕ್ಸ್ ಹಾಗೂ ಡಿಆರ್ ಸಿ ಪರದೆಗಳಲ್ಲಿ ಚಲನಚಿತ್ರಗಳ ಪ್ರದರ್ಶನ ಹಮ್ಮಿಕೊಂಡಿದ್ದು, ಈ ಸಂಬಂಧ ಅ.9ರ ಬೆಳಗ್ಗೆ 10.30 ರಿಂದ ಸಂಜೆ 4.30 ರವರೆಗೆ ನಗರದ ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯಲ್ಲಿ ಸಿನಿಮಾ ಪ್ರಿಯರಿಗೆ ಚಲನಚಿತ್ರೋತ್ಸವ ಪ್ರದರ್ಶನದ ಪಾಸ್ ವಿತರಿಸಲಾಗುವುದು.

ವ ಪಾಸ್ ದರ ಸಾಮಾನ್ಯರಿಗೆ 500 ರೂ. ಗಳಾಗಿದ್ದು, ವಿದ್ಯಾರ್ಥಿಗಳಿಗೆ 300 ರೂ. ಆಗಿರುತ್ತವೆ. ಈ ಪಾಸ್ ಏಳು ದಿನಗಳವರೆಗೂ ಚಾಲ್ತಿಯಲ್ಲಿರುತ್ತದೆ. ಪಾಸ್ ಪಡೆದುಕೊಳ್ಳಲು ಆಧಾರ್ ಕಾರ್ಡ್ ಪ್ರತಿಯನ್ನು ತರತಕ್ಕದ್ದು. ಹೆಚ್ಚಿನ ಮಾಹಿತಿಗಾಗಿ ಶ್ರೇಯಸ್ ಮೊ. 74115 64510 ಸಂಪರ್ಕಿಸಬಹುದು ಎಂದು ಚಲನಚಿತ್ರೋತ್ಸವ ಉಪ ಸಮಿತಿಯ ವಿಶೇಷಾಧಿಕಾರಿ ಎಂ.ಕೆ. ಸವಿತಾ ತಿಳಿಸಿದ್ದಾರೆ.

Tap to resize

Latest Videos

ಮಹಿಷ ದಸರಾ

  ಮೈಸೂರು :  ನಗರದಲ್ಲಿ ಮಹಿಷ ದಸರಾ ಆಚರಣಾ ಸಮಿತಿ ವತಿಯಿಂದ ಅ. 13 ರಂದು ಮಹಿಷ ದಸರಾ ಮಹೋತ್ಸವ ಹಮ್ಮಿಕೊಳ್ಳಲಾಗುತ್ತಿದೆ.

ಅಂದು ಬೆಳಗ್ಗೆ 8 ಗಂಟೆಗೆ ಚಾಮುಂಡಿಬೆಟ್ಟದ ತಪ್ಪಲಿನ ತಾವರೆಕಟ್ಟೆ ಬಳಿ ಎಲ್ಲರೂ ಸೇರಿ, ಬಳಿಕ ಆದಿ ದ್ರಾವಿಡ ದೊರೆ ಮಹಿಷಾಸುರ ಮೂರ್ತಿಗೆ ಪುಷ್ಪನಮನ ಸಲ್ಲಿಸಿ, ನಂತರ ಪುರಭವನಕ್ಕೆ ಬೈಕ್ ರ್ಯಾ ಲಿ ಮೂಲಕ ಆಗಮಿಸಿ ಅಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದು ಉರಿಲಿಂಗಪೆದ್ದಿ ಮಠದ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ ಸುದ್ದಿಗೋಷ್ಠಿಯಲ್ಲಿ ಶನಿವಾರ ತಿಳಿಸಿದರು.

ಆದರ್ಶ ಪುರುಷರನ್ನು ಕೊಂದವರ ಹೆಸರಿನಲ್ಲಿ ನಮ್ಮಿಂದಲೇ ಹಬ್ಬ ಮಾಡಿಸುತ್ತಿರುವುದು ಬೇಸರದ ಸಂಗತಿ. ಮಹಿಷ ದಸರಾ ಒಂದು ಸಾಂಸ್ಕೃತಿಕ ಹಬ್ಬವಾಗಿದ್ದು, ಅದು ಮೂಲ ನಿವಾಸಿಗಳ ಅಸ್ಮಿತೆಯಾಗಿದೆ. ಇಂತಹ ಸಂದರ್ಭದಲ್ಲಿ ಓರ್ವ ಸಂಸದರಾಗಿ ಪ್ರತಾಪ್ಸಿಂಹ ಅವರು ಮಹಿಷ ದಸರಾ ಆಚರಣೆ ಸಂಬಂಧ ಸಂಘರ್ಷಕ್ಕೂ ಸಿದ್ಧ ಎನ್ನುವುದು ಸರಿಯಲ್ಲ. ಮಹಿಷ ದಸರಾ ಆಚರಣೆ ಮಾಡಬಾರದೆನ್ನುವ ಅಧಿಕಾರ ಇವರಿಗಿಲ್ಲ ಎಂದರು.

ಬಳಿಕ, ಹಿಂದೂ ಧರ್ಮ ತತ್ವ ಸರ್ವರೂ ಸುಖಿಯಾಗಿರಲಿ ಎಂದದಿದ್ದರೆ, ಇದಕ್ಕೆ ವಿರುದ್ಧವಾಗಿ ಸಂಸದ ಮನು ಸಂವಿಧಾನ ಬೇಕೆನ್ನುವಂತೆ ಮಾತನಾಡುತ್ತಿದ್ದಾರೆ. ಸಂಘರ್ಷಕ್ಕೆ ಇವರು ಪ್ರಚೋದನೆ ನೀಡುವುದು ಸರಿಯಲ್ಲ. ಬೇಕಿದ್ದರೆ ಎಸ್ಸಿ, ಎಸ್ಟಿ, ಅಲ್ಪಸಂಖ್ಯಾತರ ಮತ ತಮಗೆ ಬೇಡ ಎಂದು ಬಹಿರಂಗವಾಗಿ ತಿಳಿಸಲಿ ಎಂದು ತಾಕೀತು ಮಾಡಿದರು.

click me!