ಮೈಸೂರು ದಸರಾದಲ್ಲಿ ಸಿದ್ಧಗಂಗಾ ಶ್ರೀ ಸ್ತಬ್ಧಚಿತ್ರ

Published : Sep 01, 2019, 11:24 AM ISTUpdated : Sep 01, 2019, 12:41 PM IST
ಮೈಸೂರು ದಸರಾದಲ್ಲಿ ಸಿದ್ಧಗಂಗಾ ಶ್ರೀ ಸ್ತಬ್ಧಚಿತ್ರ

ಸಾರಾಂಶ

ಮೈಸೂರು ದಸಾರದಲ್ಲಿ ಅತ್ಯಾಕರ್ಷಕ ಭಾಗವಾದ ಸ್ತಬ್ಧಚಿತ್ರ ಮೆರವಣಿಗೆಯಲ್ಲಿ ಸಿದ್ಧಗಂಗಾ ಮಠದ ಶ್ರೀ ಡಾ. ಶಿವಕುಮಾರ ಸ್ವಾಮೀಜಿ ಅವರ ಕುರಿತ ಟ್ಯಾಬ್ಲೋ ಸೇರಿಸುವ ಬಗ್ಗೆ ಮಾತುಕತೆ ನಡೆದಿದೆ. ಸ್ವಚ್ಛ ಭಾರತ ಸೇರಿದಂತೆ ವಿವಿಧ ಜನಪ್ರಿಯ ಕಾರ್ಯಕ್ರಮಗಳು, ಚಂದ್ರಯಾನ ಸೇರಿದಂತೆ ವಿವಿಧ ಸ್ತಬ್ಧಚಿತ್ರಗಳನ್ನು ನಿರ್ಮಿಸಲು ಯೋಜಿಸಲಾಗಿದೆ.

ಮೈಸೂರು(ಸೆ.01): ದಸರಾ ಸ್ತಬ್ಧಚಿತ್ರ ಸಂಬಂಧ ಎಲ್ಲ ಜಿಪಂ ಸಿಇಒಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಭೆ ನಡೆಸಿದ್ದು, ಹಳೆಯದನ್ನೇ ಮರುಕಳಿಸದೇ ಹೊಸ ಸ್ತಬ್ಧಚಿತ್ರಗಳಿಗೆ ಆದ್ಯತೆ ನೀಡಲು ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ತಿಳಿಸಿದರು.

ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ ಮಾತನಾಡಿ, ಸಿದ್ಧಗಂಗಾ ಮಠದ ಶ್ರೀ ಡಾ. ಶಿವಕುಮಾರ ಸ್ವಾಮೀಜಿ ಕುರಿತು ಸ್ತಬ್ಧಚಿತ್ರ ನಿರ್ಮಿಸಲು ತುಮಕೂರು ಜಿಪಂ ಸದಸ್ಯರು ಹಾಗೂ ಸಿಇಒ ಮನವಿ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಸ್ವಚ್ಛ ಭಾರತ ಸೇರಿದಂತೆ ವಿವಿಧ ಜನಪ್ರಿಯ ಕಾರ್ಯಕ್ರಮಗಳು, ಚಂದ್ರಯಾನ ಸೇರಿದಂತೆ ವಿವಿಧ ಸ್ತಬ್ಧಚಿತ್ರಗಳನ್ನು ನಿರ್ಮಿಸಲು ಯೋಜಿಸಲಾಗಿದೆ ಎಂದು ಅವರು ವಿವರಿಸಿದರು.

ದಸರಾ ವೆಬ್‌ಸೈಟ್‌ ಕನ್ನಡ, ಇಂಗ್ಲಿಷ್‌ ಸೇರಿ 10 ಭಾಷೆಗಳಲ್ಲಿ ಲಭ್ಯ

ಸಂಸದ ಪ್ರತಾಪ್‌ ಸಿಂಹ, ಶಾಸಕ ಎಸ್‌.ಎ. ರಾಮದಾಸ್‌, ಎಲ್‌. ನಾಗೇಂದ್ರ, ಮೇಯರ್‌ ಪುಷ್ಪಲತಾ ಜಗನ್ನಾಥ್‌, ಉಪಮೇಯರ್‌ ಶಫಿ ಅಹಮದ್‌, ಬಿಜೆಪಿ ನಗರಾಧ್ಯಕ್ಷ ಡಾ.ಬಿ.ಎಚ್‌. ಮಂಜುನಾಥ್‌, ರಾಜ್ಯ ಕಾರ್ಯದರ್ಶಿ ಎಂ. ರಾಜೇಂದ್ರ, ಎಚ್‌.ವಿ. ರಾಜೀವ್‌, ಮಾಜಿ ಮೇಯರ್‌ ಸಂದೇಶ್‌ ಸ್ವಾಮಿ, ಜಿಲ್ಲಾಧಿಕಾರಿ ಅಭಿರಾಮ್‌ ಜಿ. ಶಂಕರ್‌, ನಗರ ಪೊಲೀಸ್‌ ಆಯುಕ್ತ ಕೆ.ಟಿ. ಬಾಲಕೃಷ್ಣ, ಜಿಪಂ ಸಿಇಒ ಕೆ. ಜ್ಯೋತಿ, ನಗರ ಪಾಲಿಕೆ ಆಯುಕ್ತ ಗುರುದತ್‌ ಹೆಗಡೆ, ಎಂಡಿಎ ಆಯುಕ್ತ ಕಾಂತರಾಜು, ಹೆಚ್ಚುವರಿ ಜಿಲ್ಲಾಧಿಕಾರಿ ಪೂರ್ಣಿಮಾ ಮೊದಲಾದವರು ಇದ್ದರು.

PREV
click me!

Recommended Stories

Bengaluru: ಕ್ಯಾಬ್ ಚಾಲಕನ ಮೇಲೆ ಯುವತಿ ರೇಪ್ ಆರೋಪ, ತನಿಖೆ ವೇಳೆ ಬಿಗ್ ಟ್ವಿಸ್ಟ್!
ನಮ್ಮನ್ನು ಗುಲಾಮರನ್ನಾಗಿಸಿ ಹಿಂದೂ ಧರ್ಮ ಸೃಷ್ಟಿಸಿದ್ದು ಬ್ರಾಹ್ಮಣರು: ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿ