ಬೆಂಗಳೂರು: ದಾಸರಹಳ್ಳಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್‌ ನಿಧನ

Published : May 16, 2023, 09:02 AM ISTUpdated : May 16, 2023, 09:08 AM IST
ಬೆಂಗಳೂರು: ದಾಸರಹಳ್ಳಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್‌ ನಿಧನ

ಸಾರಾಂಶ

ಡಿ.ಕೆ.ಮಹೇಶ್‌ ಅವರ ಸಾವು ನಮಗೆಲ್ಲ ತುಂಬಲಾರದ ದುಃಖವಾಗಿದೆ. ಬಿಜೆಪಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಪ್ರಾಮಾಣಿಕವಾಗಿ ನನ್ನ ಗೆಲುವಿಗೆ ಶ್ರಮಿಸಿದರು. ಪಕ್ಷದಲ್ಲಿ ಕ್ರಿಯಾಶೀಲರಾಗಿದ್ದರು, ಇಂದು ಅವರಿಲ್ಲ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಹಾಗೆಯೇ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ ಎಂದು ಪ್ರಾರ್ಥಿಸುವೆ: ಎಸ್‌.ಮುನಿರಾಜು 

ಪೀಣ್ಯ ದಾಸರಹಳ್ಳಿ(ಮೇ.16): ದಾಸರಹಳ್ಳಿ ಕ್ಷೇತ್ರದ ಬಿಜೆಪಿ ಪ್ರಧಾನ ಕಾರ್ಯದರ್ಶಿ, ರಾಜಗೋಪಾಲನಗರ ಐ.ಪಿ.ನಗರದ ನಿವಾಸಿ ಡಿ.ಕೆ.ಮಹೇಶ್‌(46) ಅವರು ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ. ಅವರಿಗೆ ಪತ್ನಿ ಮತ್ತು ಇಬ್ಬರು ಪುತ್ರರಿದ್ದಾರೆ. ಅವರ ಅಂತ್ಯಕ್ರಿಯೆಯನ್ನು ಮಂಡ್ಯ ಜಿಲ್ಲೆಯ ನಾಗಮಂಗಲದ ದಂಡಿಗನಹಳ್ಳಿ ಗ್ರಾಮದಲ್ಲಿ ಅಂತಿಮ ವಿಧಿ ವಿಧಾನಗಳೊಂದಿಗೆ ಕಾರ್ಯ ನಡೆಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದರು.

ರಾಜಗೋಪಾಲನಗರದ ಐಪಿ ನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಸಾವಿರಾರು ಜನರು ಅಂತಿಮ ದರ್ಶನ ಪಡೆದರು. ವಾರದ ಹಿಂದೆ ಪಾಶ್ರ್ವವಾಯು ಆಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಬೆಳಗಾವಿ: ಕಾಂಗ್ರೆಸ್ ಹಿರಿಯ ‌ನಾಯಕ ಡಿ.ಬಿ.ಇನಾಮದಾರ್ ಇನ್ನಿಲ್ಲ

‘ಡಿ.ಕೆ.ಮಹೇಶ್‌ ಅವರ ಸಾವು ನಮಗೆಲ್ಲ ತುಂಬಲಾರದ ದುಃಖವಾಗಿದೆ. ಬಿಜೆಪಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಪ್ರಾಮಾಣಿಕವಾಗಿ ನನ್ನ ಗೆಲುವಿಗೆ ಶ್ರಮಿಸಿದರು. ಪಕ್ಷದಲ್ಲಿ ಕ್ರಿಯಾಶೀಲರಾಗಿದ್ದರು, ಇಂದು ಅವರಿಲ್ಲ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಹಾಗೆಯೇ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ ಎಂದು ಪ್ರಾರ್ಥಿಸುವೆ’ ಎಂದು ದಾಸರಹಳ್ಳಿ ಚುನಾಯಿತ ಪ್ರತಿನಿಧಿ ಎಸ್‌.ಮುನಿರಾಜು ಹೇಳಿದರು. ಅಂತಿಮ ದರ್ಶನ ಪಡೆದು ಕಂಬನಿ ಮಿಡಿದರು. ಕ್ಷೇತ್ರದ ಬಿಜೆಪಿ ಕಾರ್ಯಕರ್ತರು, ಪಾಲಿಕೆ ಮಾಜಿ ಸದಸ್ಯರು, ಸಾರ್ವಜನಿಕರು ಅಂತಿಮ ದರ್ಶನ ಪಡೆದರು.

PREV
Read more Articles on
click me!

Recommended Stories

ರಿಷಬ್‌ ಶೆಟ್ಟಿ, ವಿಜಯ್ ಕಿರಗಂದೂರು ವ್ಯಾಪಾರಿಗಳು, ದೈವಾರಾಧನೆಯನ್ನ ವ್ಯಾಪಾರಕ್ಕೆ ಹಾಕಿದ್ದಾರೆ: ದೈವಾರಾಧಕ ಬೇಸರ
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ