ಕೊರೋನಾಗೆ ತಾಯಿ ಬಲಿ: ಅಮ್ಮನ ಸಾವಿನ ಸುದ್ದಿ ಕೇಳಿ ಮಗಳೂ ಸಾವು

By Kannadaprabha News  |  First Published Apr 30, 2021, 3:37 PM IST

ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದ 45 ವರ್ಷದ ಮಹಿಳೆ| ತಾಯಿಯ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಹೃದಯಾಘಾತದಿಂದ ಮಗಳು ಸಾವು| ತುಮಕೂರು ನಗರದಲ್ಲಿ ನಡೆದ ಘಟನೆ| 


ತುಮಕೂರು(ಏ.30):  ಕೋವಿಡ್‌ನಿಂದ ತಾಯಿ ಮೃತಪಟ್ಟಿದ್ದರಿಂದ ಆಘಾತಗೊಂಡ ಮಗಳು ಹೃದಯಾಘಾತದಿಂದ ನಿಧನವಾಗಿರುವ ಘಟನೆ ನಡೆದಿದೆ.

ತುಮಕೂರಿನ 45 ವರ್ಷದ ಮಹಿಳೆಯೊಬ್ಬರು ನಾಲ್ಕು ದಿವಸಗಳ ಹಿಂದೆ ಕೊರೋನಾ ಸೋಂಕು ತಗುಲಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. 

Tap to resize

Latest Videos

ತುಮಕೂರು: ಕೋವಿಡ್‌ ಶವಗಳ ಸಂಸ್ಕಾರ ನಡೆಸುವ ಅಸಮಾನ್ಯ ಕನ್ನಡತಿ

ತಾಯಿಯ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ತೀವ್ರ ಆಘಾತಕ್ಕೆ ಒಳಗಾದ 19 ವರ್ಷದ ಮಗಳಿಗೆ ಎದೆ ನೋವು ಕಾಣಿಸಿಕೊಂಡಿತು. ಕೂಡಲೇ ಆಕೆಯನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಳು.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ನ್ಯೂಸ್‌ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
 

click me!