ಮನೆ ಮುಂದೆ ನಿಲ್ಲಿಸಿದ್ದ ಟ್ರ್ಯಾಕ್ಟರ್‌ನಿಂದ ಬಿದ್ದು 6 ವರ್ಷದ ಮಗು ಸಾವು

By Sathish Kumar KH  |  First Published Oct 3, 2024, 12:26 PM IST

ದಾವಣಗೆರೆ ಜಿಲ್ಲೆಯ ಹರಪ್ಪನಹಳ್ಳಿ ತಾಲ್ಲೂಕಿನಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ ಟ್ರ್ಯಾಕ್ಟರ್‌ನಲ್ಲಿ ಆಟವಾಡುತ್ತಿದ್ದಾಗ ಆಯತಪ್ಪಿ ಬಿದ್ದ ಪುಟ್ಟ ಬಾಲಕಿ ಸಾವನ್ನಪ್ಪಿದ್ದಾಳೆ. 6 ವರ್ಷದ ದಿಶಾಗೌಡ ಮೃತಪಟ್ಟ ಬಾಲಕಿ.


ದಾವಣಗೆರೆ (ಅ.03): ಮನೆಯ ಮುಂದೆ ನಿಲ್ಲಿಸಲಾಗಿದ್ದ ಟ್ರ್ಯಾಕ್ಟರ್‌ನಲ್ಲಿ ಆಟವಾಡುತ್ತಿದ್ದ ಪುಟ್ಟ ಕಂದಮ್ಮ, ಟ್ರ್ಯಾಕ್ಟರ್‌ನಿಂದ ಬಿದ್ದು ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.

ಈ ಘಟನೆ ದಾವಣಗೆರೆ ಜಿಲ್ಲೆಯ ಹರಪ್ಪನಹಳ್ಳಿ ತಾಲ್ಲೂಕು ಜಿಟ್ಟಿನಕಟ್ಟೆ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕಿ ದಿಶಾಗೌಡ (06) ಮೃತಪಟ್ಟಿದ್ದಾಳೆ. ಮನೆ ಮುಂದೆ ನಿಂತಿದ್ದ ಟ್ರ್ಯಾಕ್ಟರ್ ಮೇಲೆ ಆಟ ಆಡುತ್ತಿದ್ದ ಮಗು ಆಯತಪ್ಪಿ ಬಿದ್ದು ಸಾವಿಗೀಡಾಗಿದೆ. ವಕೀಲ ಸಿದ್ದನ ಗೌಡ ಹಾಗೂ ಸವಿತಾ ಗೌಡ ಅವರ ಪುತ್ರಿ ದಿಶಾಗೌಡ. ದಾವಣಗೆರೆಯಲ್ಲಿ ನೆಲೆಸಿದ್ದ ಅವರು ಅಮವಾಸ್ಯೆ ಹಿನ್ನಲೆಯಲ್ಲಿ ಸ್ವಗ್ರಾಮಕ್ಕೆ ಆಗಮಿಸಿದ್ದರು. ಮನೆ ಮುಂಭಾಗ ನಿಲ್ಲಿಸಿದ್ದ ಟ್ರ್ಯಾಕ್ಟರ್ ಮೇಲೆ ಆಡುತ್ತಿದ್ದಾಗ ಆಕಸ್ಮಿಕ ಕಾಲು ಜಾರಿ ಬಿದ್ದು ಈ ಅವಘಡ ಸಂಭವಿಸಿದೆ.

Tap to resize

Latest Videos

undefined

ಎದೆ ಝುಲ್‌ ಎನ್ನುವ ಅಪಘಾತ: ಚಾಲಕನ ಎದೆಗೆ ಚುಚ್ಚಿದ ಸರ್ವಿಸ್‌ ರಸ್ತೆಯ ಕಬ್ಬಿಣದ ಪೈಪ್‌

ಇನ್ನು ಮಗು ಟ್ರ್ಯಾಕ್ಟರ್‌ನಿಂದ ಬಿದ್ದು ಗಾಯಗೊಂಡ ಬೆನ್ನಲ್ಲಿಯೇ ಮಗುವನ್ನು ಹರಪನಹಳ್ಳಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಗಿದೆ. ಆದರೆ, ಹರಪನಹಳ್ಳಿಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಕೂಡಲೇ ದಾವಣಗೆರೆ ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಲಾಗಿದೆ. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಗುವನ್ನು ದಾವಣಗೆರೆಯ ದೊಡ್ಡ ಆಸ್ಪತ್ರೆಗೆ ಕರೆತಂದಿದ್ದರು. ಆದರೆ, ಪೋಷಕರ ಈ ಪ್ರಯತ್ನ ಫಲಿಸಲಿಲ್ಲ. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ. ಈ ಘಟನೆ ಸಂಬಂಧಿಸಿದಂತೆ ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.

click me!