ದಾವಣಗೆರೆ ಜಿಲ್ಲೆಯ ತಾವರೆಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕೇಂದ್ರ ಸರ್ಕಾರದ ‘ಸ್ವಚ್ಛ ಮಹೋತ್ಸವ ಪ್ರಶಸ್ತಿ’ ಸ್ಪರ್ಧೆಯಲ್ಲಿ ಮೂರನೇ ಸ್ಥಾನ ಲಭಿಸಿದೆ.
ದಾವಣಗೆರೆ [ಸೆ.06] : ದಾವಣಗೆರೆ ಜಿಲ್ಲೆಯ ತಾವರೆಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕೇಂದ್ರ ಸರ್ಕಾರದ ‘ಸ್ವಚ್ಛ ಮಹೋತ್ಸವ ಪ್ರಶಸ್ತಿ’ ಸ್ಪರ್ಧೆಯಲ್ಲಿ ಮೂರನೇ ಸ್ಥಾನ ಲಭಿಸಿದೆ. ಕೇಂದ್ರ ಸರ್ಕಾರದ ಜಲಶಕ್ತಿ ಸಚಿವಾಲಯವು 2019 ರ ಜೂನ್ 24 ರಂದು ಸ್ವಚ್ಛ ಮಹೋತ್ಸವಕ್ಕೆ ಚಾಲನೆ ನೀಡಿತ್ತು.
ಈ ಅವಧಿಯಲ್ಲಿ ಸ್ವಚ್ಛತೆ ಕಾಯ್ದುಕೊಳ್ಳುವ ಸಂಸ್ಥೆಗಳನ್ನು ಸ್ವಚ್ಛ ಮಹೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡುವುದಾಗಿ ಘೋಷಿಸಿತ್ತು. ಸೆಪ್ಟೆಂಬರ್ 6 ರಂದು ದೆಹಲಿಯಲ್ಲಿ ಸ್ವಚ್ಛತಾ ಸಹಯೋಗ ದಿನಾಚರಣೆ ಆಚರಿಸಲಾಗುತ್ತಿದ್ದು, ಕೇಂದ್ರ ಆರೋಗ್ಯ ಇಲಾಖೆ ಕಳುಹಿಸಿರುವ ಪ್ರಸ್ತಾವನೆ ಆಧಾರದ ಮೇಲೆ ದಾವಣಗೆರೆಯ ತಾವರೆಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರವು ಸ್ವಚ್ಛ ಆರೋಗ್ಯ ಕೇಂದ್ರಗಳಲ್ಲಿ ಮೂರನೇ ಸ್ಥಾನ ಪಡೆದಿದೆ.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಕ್ಲಿಕ್ಕಿಸಿ
ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ವೆಲ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರ ಮೊದಲ ಸ್ಥಾನ ಗಳಿಸಿದ್ದು, ಎರಡನೇ ಸ್ಥಾನ ಗುಜರಾತ್‌ನ ಜಾಮ್‌ನಗರ್ ಜಿಲ್ಲೆಯ ಜಮ್ವಂತಾಲಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಂದಿದೆ.