ಡಿ.5 ರಂದು ಖಾಸಗಿ, ಸರ್ಕಾರಿ ಸಂಸ್ಥೆಗಳಿಗೆ ವೇತನ ಸಹಿತ ರಜೆ

By Kannadaprabha NewsFirst Published Dec 3, 2019, 11:59 AM IST
Highlights

ಡಿಸೆಂಬರ್ 5 ರಂದು ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳ ನೌಕರರಿಗೆ ವೇತನ ಸಹಿತ ರಜೆ ಘೋಷಣೆ ಮಾಡಲಾಗಿದೆ. 

ಕಾರವಾರ [ಡಿ.03]: ಯಲ್ಲಾಪುರ ವಿಧಾನಸಭಾ ಕ್ಷೇತ್ರಕ್ಕೆ ಡಿ. 5ರಂದು ಉಪ ಚುನಾವಣೆ ಹಿನ್ನೆಲೆಯಲ್ಲಿ ಆಯೋಗವು ಈ  ಕ್ಷೇತ್ರದ ಎಲ್ಲ ಮತದಾರರಿಗೆ ಅಂದು ವೇತನ ಸಹಿತ ರಜೆ ಘೋಷಿಸಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ. ಹರೀಶಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಈ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೊಳಪಟ್ಟ ಕ್ಷೇತ್ರದಲ್ಲಿ ಹಾಗೂ ಇತರೆಡೆ ಖಾಸಗಿ/ಸರ್ಕಾರಿ/ಅರೆ ಸರ್ಕಾರಿ ಸಂಸ್ಥೆಗಳು, ವ್ಯಾಪಾರ, ವ್ಯವಹಾರ ಇತ್ಯಾದಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮತದಾರ ಕಾರ್ಮಿಕರಿಗೆ, ನೌಕರರಿಗೆ ಪಾವತಿಸಿದ ರಜೆಯನ್ನು ನೀಡಬೇಕು. 

ಮತದಾರರು ರಜೆಯ ಸೌಲಭ್ಯವನ್ನು ಪಡೆದು ಡಿ. 5 ರಂದು ಕಡ್ಡಾಯವಾಗಿ ಮತ ಚಲಾಯಿಸಬೇಕು ಎಂದು ವಿನಂತಿಸಿದ್ದಾರೆ. ಮತದಾನ ಚಲಾಯಿಸಲು ಬಯಸುವ ಕಾರ್ಮಿಕರಿಗೆ/ನೌಕರರಿಗೆ ಪಾವತಿಸಿದ ರಜೆಯ ಸೌಲಭ್ಯ ನೀಡಲು ನಿರಾಕರಿಸುವ ಉದ್ಯೋಗದಾತ/
ಮಾಲೀಕರು/ಮುಖ್ಯಸ್ಥರ ವಿರುದ್ಧ ಜನಪ್ರತಿನಿಧಿ ಕಾಯ್ದೆ 1951 ಕಲಂ 135 ಬ ರನ್ವಯ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದೆಂದು ಎಚ್ಚರಿಸಿದ್ದಾರೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಡಿಸೆಂಬರ್ 5 ರಂದು ರಾಜ್ಯದಲ್ಲಿ ಉಪ ಚುನಾವಣೆ ನಡೆಯಲಿದ್ದು ಡಿಸೆಂಬರ್ 9 ರಂದು ಫಲಿತಾಂಶ ಪ್ರಕಟವಾಗಲಿದೆ.

click me!