ಕೊರೋನಾ ಕಂಟ್ರೋಲ್‌ಗೆ ದಕ್ಷಿಣ ಕನ್ನಡದಲ್ಲಿ ಡೀಸಿ ಸ್ಟ್ರಿಕ್ಟ್ ಆದೇಶ : ಯಾವುದಕ್ಕೆಲ್ಲಾ ನಿರ್ಬಂಧ

By Kannadaprabha NewsFirst Published Mar 30, 2021, 1:09 PM IST
Highlights

ಕೊರೋನಾ ಮಹಾಮಾರಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು ಕೊರೋನಾ ನಿಯಂತ್ರಣ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ   ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ವಿವಿಧ ಧಾರ್ಮಿಕ ಕಾರ್ಯಗಳಿಗೆ ನಿಷೇಧ ವಿಧಿಸಲಾಗಿದೆ. 

ಮಂಗಳೂರು (ಮಾ.30):  ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜಾತ್ರೆ, ಸಭೆ, ಸಮಾರಂಭ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. 

ದೇಶದಲ್ಲಿ ಕೊರೋನಾ ಮಹಾಮಾರಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು ಕೊರೋನಾ ನಿಯಂತ್ರಣ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ   ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.

ಎಲ್ಲಾ ಧಾರ್ಮಿಕ ಸ್ಥಳ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಜಾತ್ರೆ, ಸಭೆ, ಸಮಾರಂಭ ಹಾಗೂ ಆಚರಣೆಗೆ ನಿಷೇಧ ವಿಧಿಸಲಾಗಿದೆ. ಧಾರ್ಮಿಕ ಉತ್ಸವಗಳೊಂದಿಗೆ ಜಾತ್ರೆ, ಮೇಳಗಳನ್ನು ನಡೆಸದಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಬಾವಲಿಗಳಿಂದ ಜನರಿಗೆ ಕೊರೋನಾ ವೈರಸ್..! WHO-ಚೀನಾ ಜಂಟಿ ಅಧ್ಯಯನ ವರದಿ ...

ಯುಗಾದಿ, ಹೋಳಿ ಹಬ್ಬ, ಷಬ್-ಎ-ಬರಾತ್, ಗುಡ್‌ಫ್ರೈಡೆ ಇತ್ಯಾದಿ ಸಂದರ್ಭಗಳಲ್ಲಿ ಸಾರ್ವಜನಿಕ ಕಾರ್ಯಕ್ರಮ ನಡೆಸದಿರಲು ಸೂಚನೆ ನೀಡಿದ್ದಾರೆ. 

ಎಲ್ಲಾ ರೀತಿಯ ಧಾರ್ಮಿಕ ಕಾರ್ಯಕ್ರಮಗಳನ್ನು ಸಾಂಕೇತಿಕವಾಗಿ ಆಚರಿಸಲು ಅವಕಾಶವಿದ್ದು, ತಪ್ಪಿದ್ದಲ್ಲಿ ಸಂಬಂಧಿತ ಅಧಿಕಾರಿಗಳಿಂದ ಸರ್ಕಾರದ ಆದೇಶದಂತೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. 

ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ನಿಷೇಧ ವಿಧಿಸಲಾಗಿದೆ. 

click me!