ಕಾಂಗ್ರೆಸ್ ಸೇರಿದವರಿಗೆ ಡಿಸಿಎಂ ಡಿಕೆ ಶಿವಕುಮಾರ್ ಔತಣಕೂಟ

By Sujatha NR  |  First Published Jul 20, 2024, 12:15 PM IST

ಲೋಕಸಭಾ ಚುನಾವಣೆ ಸಮಯದಲ್ಲಿ ಹಾಗೂ ಇತ್ತೀಚೆಗೆ ಕಾಂಗ್ರೆಸ್‌ಗೆ ಸೇರ್ಪಡೆಗೊಂಡ ಬಿಜೆಪಿ- ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರಿನಲ್ಲಿ ಅದ್ಧೂರಿ ಔತಣ ನೀಡಿದ್ದಾರೆ.  


ಚನ್ನಪಟ್ಟಣ: ಲೋಕಸಭಾ ಚುನಾವಣೆ ಸಮಯದಲ್ಲಿ ಹಾಗೂ ಇತ್ತೀಚೆಗೆ ಕಾಂಗ್ರೆಸ್‌ಗೆ ಸೇರ್ಪಡೆಗೊಂಡ ಬಿಜೆಪಿ- ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರಿನಲ್ಲಿ ಅದ್ಧೂರಿ ಔತಣ ನೀಡಿದ್ದಾರೆ.  

ಬೆಂಗಳೂರಿನ ನೈಸ್‌ ರಸ್ತೆ ಜಂಕ್ಷನ್‌ನಲ್ಲಿರುವ ಪಾರ್ಟಿ ಹಾಲ್‌ನಲ್ಲಿ ನಡೆದ ಸಭೆಯಲ್ಲಿ ಲೋಕ ಚುನಾವಣೆಯಂತೆ ಮುಂಬರುವ ಉಪಚುನಾವಣೆಯಲ್ಲೂ ಸಹ ಒಟ್ಟಾಗಿ ಕೆಲಸ ಮಾಡುವಂತೆ ಸಲಹೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. 

Tap to resize

Latest Videos

ಸಭೆಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಸೇರ್ಪಡೆಗೊಂಡ ಎಲ್ಲರಿಗೂ ಮತ್ತೊಮ್ಮೆ ಸ್ವಾಗತ. ಮುಂದಿನ ದಿನಗಳಲ್ಲಿ ಎಲ್ಲರೂ ಒಗ್ಗೂಡಿ ಕೆಲಸ ಮಾಡೋಣವೆಂದು ತಿಳಿಸಿದ್ದಾರೆಂದು ತಿಳಿದು ಬಂದಿದೆ. ಸಭೆಯಲ್ಲಿ ಇತ್ತೀಚೆಗೆ ಕಾಂಗ್ರೆಸ್‌ಗೆ ಸೇರ್ಪಡೆಗೊಂಡ ಚನ್ನಪಟ್ಟಣದ ನೂರಾರು ಕಾರ್ಯಕರ್ತರು, ಮುಖಂಡರು ಭಾಗಿಯಾಗಿದ್ದರು. ಡಿಸಿಎಂ ಡಿಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ, ಶಾಸಕ ಎಚ್.ಸಿ. ಬಾಲಕೃಷ್ಣ, ಎಂಎಲ್‌ಸಿ ರವಿ ಸೇರಿ ಅನೇಕ ಮುಖಂಡರು ಉಪಸ್ಥಿತರಿದ್ದರು.

ಬೆಂಗಳೂರು ದಕ್ಷಿಣ ಮಾಡೇ ಮಾಡ್ತಿನಿ

ಚನ್ನಪಟ್ಟಣ (ಜು.20): ನಾವೆಲ್ಲ ಮೂಲ ಬೆಂಗಳೂರು ಜಿಲ್ಲೆಯವರು, ನಮ್ಮ ಊರಿನ ಹೆಸರನ್ನು ನಾವು ಕಳೆದುಕೊಳ್ಳಬಾರದು. ದೇವೇಗೌಡರನ್ನು ಹೊಳೆನರಸೀಪುರ ಅಥವಾ ಹಾಸನದ ದೇವೇಗೌಡರು ಎನ್ನುತ್ತಾರೆ. ಅಂತೆಯೇ ನಮ್ಮನ್ನು ನಮ್ಮ ಊರಿನಿಂದ ಗುರುತಿಸುತ್ತಾರೆ. ಅದನ್ನು ಕಳೆದುಕೊಳ್ಳಬಾರದು. ರಾಮನಗರದ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮಾಡಲು ಸಿಎಂಗೆ ಮನವಿ ಸಲ್ಲಿಸಿದ್ದು, ಇದನ್ನು ಮಾಡೇ ಮಾಡುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಿಸಿದರು.

ನಗರದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಸರ್ಕಾರಿ ನೌಕರರ ಸಮ್ಮೇಳನ, ಸರ್ಕಾರಿ ನೌಕರರಿಗೆ ಸೇವಾರತ್ನ ಪ್ರಶಸ್ತಿ ಪ್ರದಾನ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ, ೭ನೇ ವೇತನ ಜಾರಿ ಹಿನ್ನೆಲೆಯಲ್ಲಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಕ್ಕೆ ಅಭಿನಂದನೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಬಿಜೆಪಿ ಕಾಲದ 21 ಹಗರಣಗಳ ತನಿಖೆ: ಮುಖ್ಯಮಂತ್ರಿ ಸಿದ್ದರಾಮಯ್ಯ ತೀಕ್ಷ್ಣ ತಿರುಗೇಟು

ನಾನು ನಮ್ಮ ಜಿಲ್ಲೆಯ ಗೌರವ ಕಾಪಾಡಲು ಪ್ರಯತ್ನಿಸುತ್ತಿದೇನೆ. ನಾನು ಜಿಲ್ಲಾ ಪರಿಷತ್ ಮೆಂಬರ್ ಆಗಿದ್ದು, ಬೆಂಗಳೂರು ನಗರ, ಗ್ರಾಮಾಂತರ ಎಲ್ಲ ಬೆಂಗಳೂರು ಜಿಲ್ಲೆಗೆ ಸೇರಿದ್ದು, ಈ ಕಡೆ ನಂದಿಬೆಟ್ಟದವರೆಗೆ, ಹೊಸಕೋಟೆ ಮಾಗಡಿವರೆಗೆ ನಾವೆಲ್ಲ ಬೆಂಗಳೂರು ಜಿಲ್ಲೆಗೆ ಸೇರಿದವರು. ನಮ್ಮನ್ನು ಗುರುತಿಸುವುದೇ ನಮ್ಮ ಊರಿನಿಂದ ಅದನ್ನು ಕಳೆದುಕೊಳ್ಳಲು ಆಗುವುದೇ ಎಂದು ಪ್ರಶ್ನಿಸಿದರು.

click me!