'ಪೂರ್ಣಾವಧಿಗೆ ಯಡಿಯೂರಪ್ಪನವರೇ ಸಿಎಂ'

By Kannadaprabha NewsFirst Published Dec 5, 2020, 2:26 PM IST
Highlights

ಸಿದ್ದರಾಮಯ್ಯ ಅವರಿಗೆ ಮಾಡಲು ಕೆಲಸವಿಲ್ಲ| ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ಕಾಂಗ್ರೆಸನವರು ಸೋತು ಸುಣ್ಣವಾಗಿದ್ದಾರೆ| ಇಲ್ಲ ಸಲ್ಲದ ಸುಳ್ಳು ಆರೋಪ ಮಾಡುತ್ತಿದ್ದಾರೆ: ಡಿಸಿಎಂ ಕಾರಜೋಳ|

ಬೆಳಗಾವಿ(ಡಿ.05): ನಮ್ಮದೂ ರಾಷ್ಟ್ರೀಯ ಪಕ್ಷ. ಸಂಪುಟ ವಿಸ್ತರಣೆ ಬಗ್ಗೆ ರಾಷ್ಟ್ರೀಯ ನಾಯಕರು, ರಾಜ್ಯ ನಾಯಕರು ತೀರ್ಮಾನ ಕೈಗೊಳ್ಳುತ್ತಾರೆ ಎಂದು ಡಿಸಿಎಂ ಗೋವಿಂದ ಕಾರಜೋಳ ತಿಳಿಸಿದ್ದಾರೆ. 

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಂಪುಟ ವಿಸ್ತರಣೆ ಅಥವಾ ಪುನರ್‌ ರಚನೆ ಯಾವುದಾದರೂ ಆಗಬಹುದು. ಸಂಪುಟ ವಿಸ್ತರಣೆ ಕುರಿತಂತೆ ಯಾವುದೇ ಗೊಂದಲ ಇಲ್ಲ. ಈ ಕುರಿತಂತೆ ಹೈಕಮಾಂಡ್‌ ನಿರ್ಧಾರ ಕೈಗೊಳ್ಳುತ್ತಾರೆ. ನಮ್ಮಲ್ಲಿ ವಲಸಿಗರು, ಮೂಲ ಎಂಬ ಪೈಪೋಟಿ ಇಲ್ಲ. ನಮ್ಮ ಪಕ್ಷದಲ್ಲಿ ಇದ್ದವರು ಎಲ್ಲಾ ಒಂದೇ. ಪೂರ್ಣಾವಧಿಗೆ ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

'ತಲೆಹರಟೆ ಮಾತನಾಡಿಯೇ ಸಿದ್ದರಾಮಯ್ಯ ಸಿಎಂ ಸ್ಥಾನ ಕಳೆದುಕೊಂಡಿದ್ದು'

ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಪ್ರತ್ರಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಅವರಿಗೆ ಮಾಡಲು ಕೆಲಸವಿಲ್ಲ. ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ಕಾಂಗ್ರೆಸನವರು ಸೋತು ಸುಣ್ಣವಾಗಿದ್ದಾರೆ. ಇಲ್ಲ ಸಲ್ಲದ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸುವರ್ಣಸೌಧ ಕಟ್ಟಿದವರು ನಾವೇ, ಅಧಿವೇಶನ ಮಾಡುವವರು ನಾವೇ. ಕೊರೋನಾದಿಂದ ಅಧಿವೇಶನ ನಡೆಸಿಲ್ಲ ಎಂದರು.

ಸಿದ್ದು ಸವದಿ ಹಿರಿಯ ರಾಜಕಾರಣಿ, 3 ಬಾರಿ ಶಾಸಕರಾಗಿದ್ದಾರೆ. ಅವರು ಯಾವುದೇ ತಪ್ಪು ಮಾಡಿಲ್ಲ. ಕಾಂಗ್ರೆಸ್‌ನವರು ಆ ಮಹಿಳೆಯನ್ನು ಕಿಡ್ನ್ಯಾಪ್‌ ಮಾಡಿದ್ದರು. ಇದರ ಬಗ್ಗೆ ಕಂಪ್ಲೆಂಚ್‌ ಆಗಿತ್ತು. ಸಿದ್ದು ಸವದಿ ಅವರನ್ನು ರಕ್ಷಿಸಲು ಹೋಗಿದ್ದರು ಎಂದು ಸಮರ್ಥಿಸಿಕೊಂಡರು.
 

click me!