ದೇಶದ ಪ್ರತಿಷ್ಠಿತ ಆಸ್ಪತ್ರೆ ಏಮ್ಸ್ ರಾಯಚೂರಿಗೆ ತರಲು ಸಕಲ ಹೋರಾಟಕ್ಕೂ ಸಿದ್ಧ ಎಂದು ಲಕ್ಷ್ಮಣ್ ಸವದಿ ಹೇಳಿದ್ದಾರೆ.
ರಾಯಚೂರು (ಸೆ.18): ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಮಂಜೂರಾಗಲಿರುವ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಏಮ್ಸ್)ಯನ್ನು ರಾಯಚೂರಿಗೆ ತರಲು ಪ್ರಮಾಣಿಕ ಪ್ರಯತ್ನ ಮಾಡಲಾಗುವುದು.
ಅಗತ್ಯ ಬಿದ್ದಲ್ಲಿ ಅದಕ್ಕಾಗಿ ಹೋರಾಟ ನಡೆಸಲು ಸಿದ್ಧವಿರುವುದಾಗಿ ಡಿಸಿಎಂ, ಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ನಗರದಲ್ಲಿ ಗುರುವಾರ ಕರ್ನಾಟಕ ಉತ್ಸವ ದಿನಾಚರಣೆಯ ಧ್ವಜಾರೋಹಣದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜ್ಯಕ್ಕೆ ಏಮ್ಸ್ ನೀಡುವುದಾಗಿ ಕೇಂದ್ರ ಸರ್ಕಾರವು ಈಗಾಗಲೇ ಘೋಷಿಸಿದೆ.
'ಶಾಂತಿ ಸೌಹಾರ್ದತೆ ಕಾಪಾಡಿಕೊಳ್ಳುವಲ್ಲಿ ಅಧಿಕಾರಿಗಳು ಮುತುವರ್ಜಿ ವಹಿಸಿ'; ಡಿಸಿಎಂ ...
ಅದನ್ನು ರಾಯಚೂರಿನಲ್ಲಿ ಸ್ಥಾಪಿಸುವ ನಿಟ್ಟಿನಲ್ಲಿ ಸ್ಥಳೀಯ ಶಾಸಕರು, ಸಂಸದರೊಂದಿಗೆ ಸೇರಿ ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು ಎಂದರು. ಅದೇರೀತಿಯಲ್ಲಿ ರಾಯಚೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಕುರಿತು ಸಚಿವ ಸಂಪುಟದಲ್ಲಿ ತೀರ್ಮಾನಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು