ಬಜೆಟ್‌ನಲ್ಲಿ ನೀರಾವರಿ, ಕೃಷಿಗೆ ಹೆಚ್ಚಿನ ಆದ್ಯತೆ, ಕೃಷಿ ಸಚಿವನಾಗಿ ಮೋದಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದ ಲಕ್ಷ್ಮಣ ಸವದಿ| ದೇಶದ ರೈತರ ಆದಾಯ ದ್ವಿಗುಣ ಮಾಡಲು ಅನೇಕ ಯೋಜನೆಗಳನ್ನು ರೂಪಿಸಿದ್ದಾರೆ| ಜಿಡಿಪಿ ಹೆಚ್ಚಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ|
ಬೆಳಗಾವಿ(ಫೆ.01): ಪ್ರಧಾನಮಂತ್ರಿ ನರೇಂದ್ರ ಮೋದಿಗೆ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಬಜೆಟ್‌ನಲ್ಲಿ ನೀರಾವರಿ, ಕೃಷಿಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಕೃಷಿ ಸಚಿವನಾಗಿ ದೇಶದ ಪ್ರಧಾನಿ ಮೋದಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.
ಅನ್ನದಾತನೊಂದಿಗೆ ಆರಂಭವಾದ ನಿರ್ಮಲಾ ಬಜೆಟ್: ರೈತನಿಗಾಗಿ 16 ಸೂತ್ರ!
undefined
ಕೇಂದ್ರ ಬಜೆಟ್ ಮಂಡನೆ ವಿಚಾರದ ಸಂಬಂಧ ಶನಿವಾರ ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಸವದಿ, ರೈತರಿಗೆ ಅನಕೂಲ ಆಗುವ ಹಾಗೆ ಬಜೆಟ್ ಮಂಡಿಸಲಾಗಿದೆ. ನಬಾರ್ಡ್, ರೈತರಿಗೆ ಸಾಲ, ನೀರಾವರಿಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ದೇಶದ ರೈತರ ಆದಾಯ ದ್ವಿಗುಣ ಮಾಡಲು ಅನೇಕ ಯೋಜನೆಗಳನ್ನು ರೂಪಿಸಿದ್ದಾರೆ. ಜಿಡಿಪಿ ಹೆಚ್ಚಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಹೇಳಿದ್ದಾರೆ.
ನಿರ್ಮಲಾ ಬಜೆಟ್‌ಗೆ ಪ್ರಹ್ಲಾದ್ ಜೋಷಿ ಮೆಚ್ಚುಗೆ:
ಮಲ್ಲಿಕಾರ್ಜುನ ಖರ್ಗೆ ಟೀಕೆ:
ಡಿವಿಎಸ್ ಶ್ಲಾಘನೆ:
ಶಾಸಕ ಮಹೇಶ ಕುಮಟಹಳ್ಳಿಗೆ ಸಚಿವ ಸ್ಥಾನ ಕೈತಪ್ಪುವ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಇದೆಲ್ಲ ಊಹಾಪೋಹವಷ್ಟೇ, ಎರಡು, ಮೂರು ದಿನದಲ್ಲಿ ಈ ಬಗ್ಗೆ ಸ್ಪಷ್ಟತೆ ಸಿಗಲಿದೆ ಎಂದು ತಿಳಿಸಿದ್ದಾರೆ.
ಕಾಶ್ಮೀರಿ ಭಾಷೆಯಲ್ಲಿ ಬಜೆಟ್ ಆರಂಭಿಸಿದ ನಿರ್ಮಲಾ: ದಂಗಾದ ಲೋಕಸಭೆ!
ಎಂಎಲ್‌ಸಿ ಸ್ಥಾನಕ್ಕೆ ಲಕ್ಷ್ಮಣ ಸವದಿ ನಾಮಪತ್ರ ಸಲ್ಲಿಕೆ ವಿಚಾರದ ಬಗ್ಗೆ ಮಾತನಾಡಿದ ಅವರು, ಇನ್ನೂ ಯಾರು ನನ್ನನ್ನು ಸಂಪರ್ಕಿಸಿಲ್ಲ. ಫೆ. 3 ರಂದು ಬೆಂಗಳೂರಿಗೆ ಹೋಗುತ್ತೇನೆ. ಸಿಎಂ, ಪಕ್ಷದ ಅಧ್ಯಕ್ಷರನ್ನ ಭೇಟಿಯಾಗಿ ತೀರ್ಮಾನ ಮಾಡುತ್ತೇನೆ ಎಂದು ಹೇಳಿದ್ದಾರೆ.
ಮಾಜಿ ಶಾಸಕ ಎಚ್ ವಿಶ್ವನಾಥ್ ಸಚಿವ ಸ್ಥಾನಕ್ಕೆ ಬೇಡಿಕೆ ವಿಚಾರದ ಬಗ್ಗೆ ಮಾತನಾಡಿದ ಅವರು, ವಿಶ್ವನಾಥ ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪೇನು ಇಲ್ಲ ಎಂದಿದ್ದಾರೆ.