'ಕೊರೋನಾ ಸೋಂಕಿತ ವಿದ್ಯಾರ್ಥಿಗಳಿಗೆ SSLC ಪರೀಕ್ಷೆ ಬರೆಯಲು ಅವಕಾಶವಿಲ್ಲ'

By Kannadaprabha NewsFirst Published Jun 24, 2020, 8:15 AM IST
Highlights

ಬಳ್ಳಾರಿ ಜಿಲ್ಲೆಯ ಸಂಡೂರು ಹಾಗೂ ಕೂಡ್ಲಿಗಿ ತಾಲೂಕಿನಲ್ಲಿ ತಲಾ ಓರ್ವ ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು| ಈ ಇಬ್ಬರಿಗೆ ಪರೀಕ್ಷೆ ಬರೆಯಲು ಅವಕಾಶ ನೀಡದಿರಲು ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ಧಾರ| ಕಂಟೈನ್ಮೆಂಟ್‌ ಪ್ರದೇಶದಿಂದ ಬರುವ ವಿದ್ಯಾರ್ಥಿಗಳಿಗೆ ಮಾತ್ರ ಪ್ರತ್ಯೇಕ ಕೋಣೆಯಲ್ಲಿ ಪರೀಕ್ಷೆ ಬರೆಸಲಾಗುವುದು| ಕೊರೋನಾ ವೈರಸ್‌ ಸೋಂಕಿತ ವಿದ್ಯಾರ್ಥಿಗಳಿಗೆ ಬರುವ ಜುಲೈನಲ್ಲಿ ಫ್ರೆಷರ್‌ ಎಂದು ಪರಿಗಣಿಸಿ ಪರೀಕ್ಷೆ ಬರೆಸಲಾಗುವುದು|

ಬಳ್ಳಾರಿ(ಜೂ.24): ಜೂನ್‌ 25 ರಂದು ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಕೊರೋನಾ ಸೋಂಕಿತ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳು ದೂರ ಉಳಿಯಲಿದ್ದಾರೆ!

ಸಂಡೂರು ಹಾಗೂ ಕೂಡ್ಲಿಗಿ ತಾಲೂಕಿನಲ್ಲಿ ತಲಾ ಓರ್ವ ವಿದ್ಯಾರ್ಥಿಗಳು ಸೋಂಕಿತರಾಗಿದ್ದು, ಈ ಇಬ್ಬರಿಗೆ ಪರೀಕ್ಷೆ ಬರೆಯಲು ಅವಕಾಶ ನೀಡದಿರಲು ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಕಂಟೈನ್ಮೆಂಟ್‌ ಪ್ರದೇಶದಿಂದ ಬರುವ ವಿದ್ಯಾರ್ಥಿಗಳಿಗೆ ಮಾತ್ರ ಪ್ರತ್ಯೇಕ ಕೋಣೆಯಲ್ಲಿ ಪರೀಕ್ಷೆ ಬರೆಸಲಾಗುವುದು. ಕೊರೋನಾ ವೈರಸ್‌ ಸೋಂಕಿತ ವಿದ್ಯಾರ್ಥಿಗಳಿಗೆ ಬರುವ ಜುಲೈನಲ್ಲಿ ಫ್ರೆಷರ್‌ ಎಂದು ಪರಿಗಣಿಸಿ ಪರೀಕ್ಷೆ ಬರೆಸಲಾಗುವುದು ಎಂದು ಡಿಡಿಪಿಐ ರಾಮಪ್ಪ ಕನ್ನಡಪ್ರಭಕ್ಕೆ ತಿಳಿಸಿದ್ದಾರೆ.

ಕೊರೊನಾ ಸೋಂಕಿತೆ ಶವಸಂಸ್ಕಾರಕ್ಕೆ ಬಳ್ಳಾರಿನ ಜನ ಅಡ್ಡಿ; ವಾಗ್ವಾದಕ್ಕಿಳಿದ ಸೋಮಶೇಖರ್ ರೆಡ್ಡಿ

ಸೋಂಕಿತ ವಿದ್ಯಾರ್ಥಿಗಳ ಆರೋಗ್ಯ ರಕ್ಷಣೆ ದೃಷ್ಟಿಯಿಂದ ಈ ನಿರ್ಧಾರಕ್ಕೆ ಬರಲಾಗಿದೆ. ಸೋಂಕಿತ ವಿದ್ಯಾರ್ಥಿಗಳು ಅಧ್ಯಯನ ಮಾಡಲು ಸಮಸ್ಯೆಯಾಗಿರುತ್ತದೆ. ಅವರು ಚಿಕಿತ್ಸೆಯಲ್ಲಿರುವುದರಿಂದ ಜುಲೈನಲ್ಲಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.

 

click me!