ಯುವ JDS ಅಧ್ಯಕ್ಷನಿಗೆ ಜೀವ ಬೆದರಿಕೆ

Kannadaprabha News   | Asianet News
Published : Mar 13, 2020, 12:18 PM IST
ಯುವ JDS ಅಧ್ಯಕ್ಷನಿಗೆ ಜೀವ ಬೆದರಿಕೆ

ಸಾರಾಂಶ

ದ.ಕ. ಜಿಲ್ಲಾ ಜಾತ್ಯತೀತ ಜನತಾದಳದ ಯುವ ಘಟಕದ ಅಧ್ಯಕ್ಷ ಅಕ್ಷಿತ್‌ ಸುವರ್ಣ ಅವರಿಗೆ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಜೀವಬೆದರಿಕೆ ಹಾಕಿದ್ದು ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ನಗರ ಪೊಲೀಸ್‌ ಆಯುಕ್ತರಿಗೆ ದೂರು ನೀಡಿದ್ದಾರೆ.

ಮಂಗಳೂರು(ಮಾ.13): ದ.ಕ. ಜಿಲ್ಲಾ ಜಾತ್ಯತೀತ ಜನತಾದಳದ ಯುವ ಘಟಕದ ಅಧ್ಯಕ್ಷ ಅಕ್ಷಿತ್‌ ಸುವರ್ಣ ಅವರಿಗೆ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಜೀವಬೆದರಿಕೆ ಹಾಕಿದ್ದು ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ನಗರ ಪೊಲೀಸ್‌ ಆಯುಕ್ತರಿಗೆ ದೂರು ನೀಡಿದ್ದಾರೆ.

ಜಿಲ್ಲಾ ಯುವ ಜೆಡಿಎಸ್‌ ಅಧ್ಯಕ್ಷನಾದ ನನಗೆ ಸಾಮಾಜಿಕ ಜಾಲತಾಣ ಆಗಿರುವ ಫೇಸ್‌ಬಕ್‌ನಲ್ಲಿ ರಾಮ್‌ ಪ್ರಸಾದ್‌ ಎನ್ನುವ ವ್ಯಕ್ತಿ ಜೀವಬೆದರಿಕೆ ಹಾಕಿದ್ದಾರೆ. ಆತನ ವಿರುದ್ಧ ಕಠಿಣವಾದ ಕ್ರಮ ಕೈಗೊಳ್ಳಬೇಕು ಎಂದು ಆಯಕ್ತರಿಗೆ ನೀಡಿರುವ ದೂರಿನಲ್ಲಿ ಅವರು ಆಗ್ರಹಿಸಿದ್ದಾರೆ.

ಉಡುಪಿಯಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಕೊರೋನಾ ಶಂಕೆ

ಈ ಸಂದರ್ಭದಲ್ಲಿ ಜಿಲ್ಲಾ ಮಹಾಪ್ರಧಾನ ಕಾರ್ಯದರ್ಶಿ ಮಧುಸೂದನ ಗೌಡ, ಜಿಲ್ಲಾ ಉಪಾಧ್ಯಕ್ಷರು ಮೊಹಮ್ಮದ್‌ ಆಸಿಫ್‌, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮೊಹಮ್ಮದ್‌ ಫೈಝಲ್, ಮಂಗಳೂರು ಉತ್ತರ ಕ್ಷೇತ್ರ ಅಧ್ಯಕ್ಷ ರತೀಶ್‌ ಕರ್ಕೇರ, ಉಪಾಧ್ಯಕ್ಷ ಹಿತೇಶ್‌ ರೈ ಇದ್ದರು.

PREV
click me!

Recommended Stories

ಪ್ರಿ ವೆಡ್ಡಿಂಗ್ ಫೋಟೋ ಶೂಟ್ ಮುಗಿಸಿ ಬೈಕ್‌ನಲ್ಲಿ ತೆರಳುತ್ತಿದ್ದ ಜೋಡಿಗೆ ಲಾರಿ ಡಿಕ್ಕಿ, ಸ್ಥಳದಲ್ಲೇ ಸಾವು
ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ