ಬೀದರ್: ಟ್ರಕ್- ಆಟೋ ಮಧ್ಯೆ ಭೀಕರ ಅಪಘಾತ, ಮೃತರ ಸಂಖ್ಯೆ 7ಕ್ಕೇರಿಕೆ

Published : Nov 05, 2022, 09:11 AM IST
ಬೀದರ್: ಟ್ರಕ್- ಆಟೋ ಮಧ್ಯೆ ಭೀಕರ ಅಪಘಾತ, ಮೃತರ ಸಂಖ್ಯೆ 7ಕ್ಕೇರಿಕೆ

ಸಾರಾಂಶ

ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಬೆಮ್ಮಳಖೇಡ ಗ್ರಾಮದ ಬಳಿ ಐಷರ್ ಟ್ರಕ್ ಹಾಗೂ ಆಟೋ ನಡುವೆ ನಡೆದ ಭೀಕರ ಅಪಘಾತ

ಬೀದರ್(ನ.05):  ಐಷರ್ ಟ್ರಕ್ ಹಾಗೂ ಆಟೋ ನಡುವೆ ನಡೆದ ಭೀಕರ ಅಪಘಾತದಲ್ಲಿ ಸಾವಿನ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಅಪಘಾತದಲ್ಲಿ ನಿನ್ನೆ(ಶುಕ್ರವಾರ) ಐವರು ಮೃತಪಟ್ಟಿದರು. ಆದರೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಇಂದು(ಶನಿವಾರ) ಇಬ್ಬರು ಸಾವನ್ನಪ್ಪಿದ್ದಾರೆ.  ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಬೆಮ್ಮಳಖೇಡ ಗ್ರಾಮದ ಬಳಿ ನಿನ್ನೆ ಐಷರ್ ಟ್ರಕ್ ಹಾಗೂ ಆಟೋ ನಡುವೆ ನಡೆದ ಭೀಕರ ಅಪಘಾತ ಸಂಭವಿಸಿತ್ತು. 

ಅಫಘಾತದಲ್ಲಿ ನಿನ್ನೆ ಪ್ರಭಾವತಿ (36), ಯಾದಮ್ಮ (40), ಗುಂಡಮ್ಮ (52), ಜಕ್ಕಮ್ಮ (32), ರುಕ್ಮಿಣಿ (60) ಈಶ್ವರಮ್ಮಾ(45) ಸಾವೀಗೀಡಾಗಿದ್ದರು. ಇಂದು ಈಶ್ವರಪ್ಪ ಬಕ್ಕಪ್ಪ(55) ಹಾಗೂ ಪಾರ್ವತಿ ಮಾರುತಿ(42) ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. 

ಕಾರು ಡಿಕ್ಕಿ ಹೊಡೆದ ರಭಸಕ್ಕೆ ದೂರ ಚಿಮ್ಮಿದ ಮಹಿಳೆ: ಅಪಘಾತದ ದೃಶ್ಯ ವೈರಲ್

ದುರ್ಘಟನೆಯಲ್ಲಿ ಗಾಯಗೊಂಡವನ್ನ ಬೀದರ್ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೃತಪಟ್ಟ 7 ಮಹಿಳೆಯರು 6 ಜನ‌ ಗಾಯಾಳುಗಳು ಉಡಮನಳ್ಳಿ ಗ್ರಾಮದವರಾಗಿದ್ದಾರೆ. ಬೆಮಳಖೇಡಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.  
 

PREV
Read more Articles on
click me!

Recommended Stories

ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ
ವಿಶ್ವದ ಟಾಪ್ 10 ಬೊಟಾನಿಕಲ್ ಗಾರ್ಡನ್ ಲಿಸ್ಟ್‌ನಲ್ಲಿ ನಂ.1 ನಮ್ಮ ಲಾಲ್‌ಬಾಗ್