ಬೆಂಗ್ಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಅಪಘಾತದಿಂದ ಸಾವು ಇಳಿಮುಖ

By Kannadaprabha News  |  First Published Sep 5, 2024, 4:35 AM IST

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ 2023ರ ಜನವರಿಂದ ಆಗಸ್ಟ್‌ ವರೆಗೆ ಸಂಭವಿಸಿದ ರಸ್ತೆ ಅಪಘಾತಗಳಲ್ಲಿ 147 ಮಂದಿ ಮೃತಪಟ್ಟಿದ್ದರು. ಈ ವರ್ಷದ ಜನವರಿಂದ ಆಗಸ್ಟ್‌ ವರೆಗೆ ಸಂಭವಿಸಿದ ಅಪಘಾತಗಳಲ್ಲಿ 50 ಮಂದಿ ಮೃತಪಟ್ಟಿದ್ದಾರೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ, ಮೃತರ ಸಂಖ್ಯೆ ಇಳಿಮುಖವಾಗಿದೆ: ಎಡಿಜಿಪಿ ಅಲೋಕ್‌ ಕುಮಾರ್‌ 
 


ಬೆಂಗಳೂರು(ಸೆ.05):  ಅಪಘಾತಗಳ ಹಾಟ್‌ಸ್ಪಾಟ್‌ ಆಗಿದ್ದ ಬೆಂಗಳೂರು-ಮೈಸೂರು ನಡುವಿನ ಆರು ಪಥಗಳ ಎಕ್ಸ್‌ಪ್ರೆಸ್‌ ವೇನಲ್ಲಿ ಈ ವರ್ಷ ಸಂಭವಿಸಿದ ರಸ್ತೆ ಅಪಘಾತಗಳಲ್ಲಿ ಮೃತಪಟ್ಟವರ ಸಂಖ್ಯೆ ಗಣನೀಯವಾಗಿ ಇಳಿಮುಖವಾಗಿದೆ.

ರಾಜ್ಯ ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್‌ ಕುಮಾರ್‌ ತಮ್ಮ ‘ಎಕ್ಸ್‌’ ಖಾತೆಯಲ್ಲಿ ನೀಡಿದ ಮಾಹಿತಿ ಪ್ರಕಾರ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ 2023ರ ಜನವರಿಂದ ಆಗಸ್ಟ್‌ ವರೆಗೆ ಸಂಭವಿಸಿದ ರಸ್ತೆ ಅಪಘಾತಗಳಲ್ಲಿ 147 ಮಂದಿ ಮೃತಪಟ್ಟಿದ್ದರು. ಈ ವರ್ಷದ ಜನವರಿಂದ ಆಗಸ್ಟ್‌ ವರೆಗೆ ಸಂಭವಿಸಿದ ಅಪಘಾತಗಳಲ್ಲಿ 50 ಮಂದಿ ಮೃತಪಟ್ಟಿದ್ದಾರೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ, ಮೃತರ ಸಂಖ್ಯೆ ಇಳಿಮುಖವಾಗಿದೆ.

Latest Videos

undefined

ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ನಿಯಮ ಪಾಲಿಸದ ಕೆಎಸ್ಸಾರ್ಟಿಸಿ ಚಾಲಕರಿಗೆ ದಂಡ - ನಿಗಮ ಎಚ್ಚರಿಕೆ

ಈ ಎಕ್ಸ್‌ಪ್ರೆಸ್‌ ವೇನಲ್ಲಿ ಅಪಘಾತಗಳ ನಿಯಂತ್ರಣಕ್ಕೆ ರಾಜ್ಯ ಪೊಲೀಸರು ಹಲವು ಕ್ರಮಗಳನ್ನು ಕೈಗೊಂಡಿದ್ದರು. ವಾಹನಗಳ ವೇಗಕ್ಕೆ ಮಿತಿ ನಿಗದಿ, ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆ, ದ್ವಿಚಕ್ರ ವಾಹನಗಳ ಸಂಚಾರ ನಿಷೇಧ, ಸಂಚಾರ ನಿಯಮ ಉಲ್ಲಂಘನೆ ವಿರುದ್ಧ ಪೊಲೀಸರ ವಿಶೇಷ ಕಾರ್ಯಾಚರಣೆ ಸೇರಿದಂತೆ ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದರ ಪರಿಣಾಮವಾಗಿ ಎಕ್ಸ್‌ಪ್ರೆಸ್‌ ವೇನಲ್ಲಿ ಅಪಘಾತಗಳ ಸಂಖ್ಯೆ ಹಾಗೂ ಮೃತರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ.

ಅಪಘಾತಗಳಲ್ಲಿ ಮೃತಪಟ್ಟವರ ವಿವರ:

ತಿಂಗಳು 2023 2024
ಜನವರಿ 14 12
ಫೆಬ್ರವರಿ 17 06
ಮಾರ್ಚ್‌ 20 09
ಏಪ್ರಿಲ್‌ 20 03
ಮೇ 29 03
ಜೂನ್‌ 27 09
ಜುಲೈ 10 06
ಆಗಸ್ಟ್‌ 10 02
ಒಟ್ಟು 147 50

click me!