Latest Videos

ಸಂತೋಷ ಆತ್ಮಹತ್ಯೆ: ರಾಜ್ಯಪಾಲರ ಮೊರೆ ಹೋದ ಕುಟುಂಬ

By Kannadaprabha NewsFirst Published Jul 15, 2022, 12:33 PM IST
Highlights

ಈಶ್ವರಪ್ಪ ಮಾಜಿ ಉಪಮುಖ್ಯಮಂತ್ರಿ, ಮಾಜಿ ಸಚಿವ, ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ, ಪ್ರಭಾವಿ ಶಾಸಕರಾಗಿದ್ದಾರೆ. ತಮ್ಮ ಹಣಬಲ, ರಾಜಕೀಯ ಬಲ ಬಳಸಿ ಆತ್ಮಹತ್ಯೆ ಪ್ರಕರಣದ ತನಿಖೆ ದಿಕ್ಕು ತಪ್ಪಿಸಿರುವ ಅನುಮಾನ ವ್ಯಕ್ತವಾಗುತ್ತಿದೆ. 

ಬೆಳಗಾವಿ(ಜು.15):  ಬೆಳಗಾವಿ ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣದ ಕುರಿತು ಪಾರದರ್ಶಕ ತನಿಖೆ ನಡೆಸುವಂತೆ ಕೋರಿ ಮೃತ ಸಂತೋಷ ಪತ್ನಿ ರೇಣುಕಾ ಪಾಟೀಲ ಅವರು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.

ಆತ್ಮಹತ್ಯೆ ಪ್ರಕರಣದ ತನಿಖೆ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಅವರು, ಪ್ರಮುಖ ಆರೋಪಿ ಕೆ.ಎಸ್‌.ಈಶ್ವರಪ್ಪ ನಿರ್ದೇಶನದಂತೆ ತನಿಖೆ ನಡೆಯುತ್ತಿದೆ ಎಂದು ಈಶ್ವರಪ್ಪ ಹೇಳಿಕೆಯನ್ನು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಕೇವಲ 15 ದಿನದಲ್ಲಿ ಕೇಸ್‌ನಲ್ಲಿ ಆರೋಪ ಮುಕ್ತನಾಗಿ ಬರುತ್ತೇನೆ ಎಂದು ಈಶ್ವರಪ್ಪ ಹೇಳಿಕೆ ನೀಡಿರುವುದನ್ನು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಈಶ್ವರಪ್ಪ ಮಾಜಿ ಉಪಮುಖ್ಯಮಂತ್ರಿ, ಮಾಜಿ ಸಚಿವ, ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ, ಪ್ರಭಾವಿ ಶಾಸಕರಾಗಿದ್ದಾರೆ. ತಮ್ಮ ಹಣಬಲ, ರಾಜಕೀಯ ಬಲ ಬಳಸಿ ಆತ್ಮಹತ್ಯೆ ಪ್ರಕರಣದ ತನಿಖೆ ದಿಕ್ಕು ತಪ್ಪಿಸಿರುವ ಅನುಮಾನ ವ್ಯಕ್ತವಾಗುತ್ತಿದೆ. ಪೊಲೀಸ್‌ ಅಧಿಕಾರಿಗಳು ಈ ಕೇಸ್‌ನ ಪ್ರತಿ ಹಂತದ ತನಿಖೆ ಸೋರಿಕೆ ಮಾಡುತ್ತಿದ್ದಾರೆ. ಈ ಮೂಲಕ ಈಶ್ವರಪ್ಪಗೆ ಅನುಕೂಲ ಮಾಡಿ ಕೇಸ್‌ ಮುಚ್ಚಿ ಹಾಕುವ ಹುನ್ನಾರ ಮಾಡಲಾಗುತ್ತಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ದೆಹಲಿಗೆ ತೆರಳಲು ಉಡುಪಿ ಪೊಲೀಸರ ಟೀಂ ರೆಡಿ

ಈ ಪ್ರಕರಣದ ಕುರಿತು ಬಹಿರಂಗವಾಗಿ ಮಾಜಿ ಸಚಿವರು ನೀಡಿರುವ ಹೇಳಿಕೆ ಗಮನಿಸಿದರೆ, ಅವರ ನಿರ್ದೇಶನದಂತೆ ತನಿಖೆ ನಡೆಯುತ್ತಿದೆ ಅನಿಸುತ್ತದೆ. ಕಾನೂನಿನ ಮುಂದೆ ಎಷ್ಟೇ ಪ್ರಭಾವಿಯಾಗಿದ್ದರೂ ಒಂದೇ ಸಾಬೀತುಪಡಿಸಬೇಕಿದೆ. ಈ ಪ್ರಕರಣದ ಕುರಿತು ಪಾರದರ್ಶಕ ತನಿಖೆ ನಡೆಸುವಂತೆ ತನಿಖಾಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ರಾಜ್ಯಪಾಲರಿಗೆ ರೇಣುಕಾ ಪಾಟೀಲ ಮನವಿ ಮಾಡಿದ್ದಾರೆ.

click me!