ಎಸ್‌ಸಿ,ಎಸ್‌ಟಿ ಮೀಸಲಾತಿ ಹೆಚ್ಚಳ ನಿರ್ಧಾರ ಸ್ವಾಗತಾರ್ಹ: ಎಚ್‌.ಸಿ. ಮಹದೇವಪ್ಪ

By Kannadaprabha News  |  First Published Oct 8, 2022, 3:40 AM IST

ಜಾತಿ ಗಣತಿ ಜಾರಿಗೊಳಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ ಮಾಜಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ 


ಮೈಸೂರು(ಅ.08):  ಎಸ್ಸಿ ವರ್ಗದ ಮೀಸಲಾತಿಯನ್ನು ಹಾಲಿ ಅಸ್ತಿತ್ವದಲ್ಲಿರುವ ಶೇ. 15 ರಿಂದ ಶೇ. 17ಕ್ಕೆ ಹಾಗೂ ಎಸ್ಟಿವರ್ಗದ ಮೀಸಲಾತಿಯನ್ನು ಹಾಲಿ ಅಸ್ತಿತ್ವದಲ್ಲಿರುವ ಶೇ 3 ರಿಂದ ಶೇ. 7ಕ್ಕೆ ಹೆಚ್ಚಳ ಮಾಡಲು ನಿರ್ಧರಿಸಿರುವ ಸರ್ವಪಕ್ಷ ಸಭೆಯ ತೀರ್ಮಾನವನ್ನು ನಾನು ಸ್ವಾಗತಿಸುತ್ತೇನೆ ಎಂದು ಮಾಜಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ತಿಳಿಸಿದ್ದಾರೆ.

ಈ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಹಿಂದೆ ಮೈಸೂರಿನಲ್ಲಿ ಸಿದ್ದರಾಮಯ್ಯ ಅವರು ಮತ್ತು ನಾನು ಬಹಳಷ್ಟು ಹೊತ್ತು ಚರ್ಚೆ ಮಾಡಿದ್ದೆವು. ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್‌ ಸರ್ಕಾರವು ಅಧಿಕಾರದಲ್ಲಿದ್ದಾಗ ಪ.ಜಾತಿ, ಪ.ಪಂಗಡ ಸಮುದಾಯದ ಜನ ಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣ ಹೆಚ್ಚಿಸಬೇಕು ಎಂಬ ಕಾರಣಕ್ಕಾಗಿ ನ್ಯಾ. ನಾಗಮೋಹನ್‌ ದಾಸ್‌ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ ಮೇಲೆ ಅವರು ಇಡೀ ರಾಜ್ಯವನ್ನು ಪ್ರವಾಸ ಮಾಡಿ, ವಸ್ತು ನಿಷ್ಠವಾದ ವರದಿಯನ್ನು ಸಿದ್ದಪಡಿಸಿ ಸರ್ಕಾರಕ್ಕೆ ಸಲ್ಲಿಸಿದರು.

Tap to resize

Latest Videos

SC-ST Reservation: ಮೀಸಲಾತಿ ಘೋಷಣೆ ಮಾಡಿದ ಸಿಎಂ ಬೊಮ್ಮಾಯಿ

ನಂತರ ಈ ವರದಿಯನ್ನು ಮತ್ತೊಮ್ಮೆ ಕೂಲಂಕುಷವಾಗಿ ವಿಶ್ಲೇಷಣೆ ಮಾಡಿ ಅದನ್ನು ಜಾರಿಗೊಳಿಸುವ ಹೊತ್ತಿಗೆ ಸರ್ಕಾರ ಬದಲಾಯಿತು. ಆದರೆ ಈಗ ನಮ್ಮ ಸರ್ಕಾರದ ಅವಧಿಯಲ್ಲಿ ಬಹಳಷ್ಟುಕಾಳಜಿ ವಹಿಸಿ ಸಿದ್ದಪಡಿಸಲಾದ ನಾಗಮೋಹನ್‌ ದಾಸ್‌ ಅವರ ವರದಿಯನ್ನು ಆಧರಿಸಿ ಪ.ಜಾತಿ/ ಪ.ಪಂಗಡ ಮೀಸಲಾತಿ ಹೆಚ್ಚಿಸಿರುವುದಕ್ಕೆ ಸರ್ವಪಕ್ಷಗಳ ಸಭೆಯಲ್ಲಿ ಸಮ್ಮತಿ ದೊರೆತಿರುವುದು ನಿಜಕ್ಕೂ ಸಾಮಾಜಿಕ ನ್ಯಾಯ ದೊರಕಿಸಲು ಶ್ರಮಿಸಿದ ನಮ್ಮ ಕಾಂಗ್ರೆಸ್‌ ಸರ್ಕಾರದ ಬದ್ಧತೆಗೆ ಸಲ್ಲುವ ಶ್ರೇಯವಾಗಿದೆ.

ಜೊತೆಗೆ ಜಾತಿಗಣತಿ ವರದಿಯನ್ನೂ ಕೂಡಾ ಜಾರಿಗೊಳಿಸಿದರೆ ಯಾವ ಯಾವ ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ರಾಜಕೀಯ ಪರಿಸ್ಥಿತಿ ಏನಾಗಿದೆ ಎಂಬ ಚಿತ್ರಣವೂ ಕೂಡ ನಮಗೆ ಸ್ಪಷ್ಟವಾಗಿ ದೊರೆಯಲಿದ್ದು ಈ ಹಿನ್ನಲೆಯಲ್ಲಿ ಜಾತಿ ಗಣತಿ ಜಾರಿಗೊಳಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಅವರು ತಿಳಿಸಿದ್ದಾರೆ.
 

click me!