ದೇವೇಗೌಡ, ಎಚ್ಡಿಕೆ ವಿರುದ್ಧ ಘೋಷಣೆ: ಚುನಾವಣಾ ಆಯೋಗಕ್ಕೆ ದೂರು

By Kannadaprabha News  |  First Published Apr 17, 2024, 11:33 AM IST

ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಸಭೆಗೆ ನುಗ್ಗಿ ಮಹಿಳೆ ಕಾಂಗ್ರೆಸ್ ಕಾರ್ಯಕರ್ತೆಯರ ಗಲಾಟೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಜೆಡಿಎಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.


 ತುಮಕೂರು :  ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಸಭೆಗೆ ನುಗ್ಗಿ ಮಹಿಳೆ ಕಾಂಗ್ರೆಸ್ ಕಾರ್ಯಕರ್ತೆಯರ ಗಲಾಟೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಜೆಡಿಎಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಮಾಜಿ ಪ್ರಧಾನಿ ದೇವೇಗೌಡರಿಗೆ ಭದ್ರತಾ ವೈಫಲ್ಯವಾಗಿದೆ. ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಪ್ರಚೋದನೆಯಿಂದ ಗಲಾಟೆ ಮಾಡಲಾಗಿದೆ. ಪ್ರಚಾರ ಸಭೆಗೆ ನುಗ್ಗಿ ಗಲಾಟೆ ಮಾಡಿದವರಿಗೆ ಶಿಕ್ಷೆಯಾಗಬೇಕು. ಸ್ಥಳದಲ್ಲಿ ಭದ್ರತೆವಹಿಸಿದ್ದ ಪೊಲೀಸರನ್ನು ಸಸ್ಪೆಂಡ್ ಮಾಡಬೇಕು ಎಂದು ಜೆಡಿಎಸ್ ಪಕ್ಷದ ಕಾನೂನು ವಿಭಾಗದ ಅಧ್ಯಕ್ಷ ಎ.ಪಿ. ರಂಗನಾಥ್ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

Latest Videos

undefined

ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಪತನ

ಬೇಲೂರು(ಏ.17):  ಈ ಬಾರಿ ಲೋಕಸಭಾ ಚುನಾವಣೆ ಕಳೆದ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನಗೊಳ್ಳಲಿದೆ ಎಂದು ಮಾಜಿ ಪ್ರಧಾನ ಮಂತ್ರಿ ಎಚ್.ಡಿ. ದೇವೇಗೌಡ ಭವಿಷ್ಯ ನುಡಿದರು.

ಬೇಲೂರು ತಾಲೂಕಿನ ಇಬ್ಬೀಡು ಗ್ರಾಮದಲ್ಲಿ ಜೆಡಿಎಸ್ ಬಿಜೆಪಿ ಕಾರ್ಯಕರ್ತರ ಸಭೆ ಉದ್ದೇಶಿಸಿ ಮಾತನಾಡಿದರು. ದೇಶದ ಪ್ರಧಾನಮಂತ್ರಿಯಾಗುವ ಯೋಗ್ಯತೆ ಐಎನ್‌ಡಿಐಎ ನಲ್ಲಿ ಯಾರಿಗೂ ಇಲ್ಲ ಎಂಬುದು ನನಗೆ ಗೊತ್ತಿರೋ ವಿಚಾರ. ಅದಕ್ಕಾಗಿ ಎಲ್ಲರ ಬಳಿಯೂ ಹೋಗಿ ಬರಿಗೈಲಿ ವಾಪಸ್ಸು ಬರುತ್ತಿದ್ದೆ. ಇಡೀ ದೇಶದಲ್ಲಿ ಸತ್ಯ ಹೇಳೋದಾದ್ರೆ ಕರ್ನಾಟಕ ಸೇರಿದಂತೆ 3 ರಾಜ್ಯದಲ್ಲಿ ಮಾತ್ರ ಕಾಂಗ್ರೆಸ್ ಅಧಿಕಾರದಲ್ಲಿದ್ದು ಉಳಿದೆಲ್ಲ ಕಡೆ ಚೆಲ್ಲಾಪಿಲ್ಲಿಯಾಗಿ ದಿನೇ ದಿನೇ ಕಾಂಗ್ರೆಸ್ ಕುಸಿಯುತ್ತಿದೆ. ಇದನ್ನ ಮೇಲೆತ್ತಲು ಯಾರಿಂದಲೂ ಸಾಧ್ಯವಿಲ್ಲ. ಈ ಲೋಕಸಭಾ ಚುನಾವಣೆ ಕಳೆದ ನಂತರ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಪತನಗೊಳ್ಳಲಿದೆ ಎಂದು ಭವಿಷ್ಯ ನುಡಿದರು.

ಕುಮಾರಸ್ವಾಮಿ V/S ಡಿಕೆಶಿ ಮಧ್ಯೆ ನಿಲ್ಲದ ಮಾತಿನ ಸಮರ! ನನ್ನ ಜಮೀನಿನ ಬಂಡೆ ಒಡೆದು ಬದುಕಿದ್ದೇನೆಂದ ಡಿಸಿಎಂ!

ಪ್ರಜ್ವಲ್‌ ಗೆಲ್ಲಿಸಿಕೊಡಿ:

ಹೆಣ್ಣು ಮಕ್ಕಳ ಬಗ್ಗೆ ಕುಮಾರಸ್ವಾಮಿ ಹೇಳಿಕೆಯನ್ನ ಕಾಂಗ್ರೆಸ್‌ನವರು ತಿರುಚಿ ಗೊಂದಲ ಸೃಷ್ಟಿಸಿದ್ದಾರೆ. ಈ ಬಗ್ಗೆ ಕುಮಾರಸ್ವಾಮಿ ಬೇಸತ್ತು ಕ್ಷಮೆ ಯಾಚಿಸಿದ್ದಾರೆ. ಅವರು ಹೇಳಿರುವ ಅರ್ಥ ಬೇರೇನೇ ಇದ್ದು ಈ ಸಂದರ್ಭ ಕಾಂಗ್ರೆಸ್ ಕೀಳುಮಟ್ಟದ ರಾಜಕಾರಣ ಮಾಡುತ್ತಿದೆ. ನಾನು ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಅಧಿಕಾರದಲ್ಲಿ ಇದ್ದಂತ ಸಂದರ್ಭ ರಾಜ್ಯದ ಎಲ್ಲಾ ಕಡೆ ಅಭಿವೃದ್ಧಿ ಪರ ಕೆಲಸ ಮಾಡಿದ್ದೇನೆ. ಈ ಬಾರಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಮಂತ್ರಿಯಾಗಬೇಕು ಅಂದರೆ ಅವರ ಕೈ ಬಲಪಡಿಸಬೇಕು. ಆದ್ದರಿಂದ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣನನ್ನು ಗೆಲ್ಲಿಸಿ ಕಳುಹಿಸಿಕೊಡಿ ಎಂದು ಮನವಿ ಮಾಡಿದರು.

ನಾನು ಇಲ್ಲಿಗೆ ಮತ್ತೆ ಬರುತ್ತೇನೆ:

ಈ ಬಾರಿ ೨೮ ಕ್ಷೇತ್ರಗಳನ್ನು ಗೆಲ್ಲುವುದರಲ್ಲಿ ಯಾವುದೇ ಸಂಶಯ ಬೇಡ. ನನಗೆ 92 ವರ್ಷ ಆಗಿದೆ, ಇನ್ನು ಬದುಕುವುದಿಲ್ಲ ಎಂದು ಕೆಲವರು ಹೇಳುತ್ತಿದ್ದಾರೆ. ಆದರೆ ನಾನು ನಿಮ್ಮೆಲ್ಲರ ಆರ್ಶಿರ್ವಾದದಿಂದ ಮತ್ತೊಮ್ಮೆ ಇಲ್ಲಿಗೆ ಬಂದೇ ಬರುತ್ತೇನೆ. ಇಲ್ಲಿ ಯಾರೂ ಸಹ ನಮ್ಮನ್ನು ದೂರ ಮಾಡಲು ಸಾಧ್ಯವಿಲ್ಲ. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಯಾವ ಒಳ ಪಿತೂರಿಗೂ ಸಹ ನೀವುಗಳು ಬಲಿಯಾಗದಿರಿ. ನಿಮ್ಮೆಲ್ಲರ ಆರ್ಶಿರ್ವಾದ ಪ್ರಜ್ವಲ್‌ ರೇವಣ್ಣ ಮೇಲಿರಲಿ ಎಂದರು.

ಕಾಂಗ್ರೆಸ್‌ ಐಸಿಯುನಲ್ಲಿದೆ:

ವಿಧಾನ ಪರಿಷತ್ ಸದಸ್ಯ ಹಾಗೂ ಛಲವಾದಿ ಮುಖಂಡ ನಾರಾಯಣಸ್ವಾಮಿ ಮಾತನಾಡಿ, ದೇಶದಲ್ಲಿ ಕಾಂಗ್ರೆಸ್ ನಲ್ಲಿ ನಾಯಕತ್ವದ ಕೊರತೆ ಇದ್ದು ಈಗಾಗಲೇ ಕಾಂಗ್ರೆಸ್ ಪಕ್ಷ ಕತ್ತಿನ ತನಕ ಮುಳುಗಿಹೋಗಿದೆ ತಲೆ ಮುಳುಗುವುದು ಒಂದು ಬಾಕಿ ಇದೆ ಎಂದ ಅವರು ಕರ್ನಾಟಕದಲ್ಲಿ ಕಾಂಗ್ರೆಸ್ ಐಸಿಯು ನಲ್ಲಿದೆ ಸ್ವಲ್ಪ ಎದೆ ಡವ ಡವ ಅಂತ ಬಡಿತ ಇದೇ ಈ ಲೋಕಸಭಾ ಚುನಾವಣೆ ಕಳೆದ ಮೇಲೆ ಅದು ಸಹ ನಿಂತು ಹೋಗುತ್ತದೆ.

click me!