ಸುಳ್ಳು ಆಪಾದನೆ ಮಾಡುವ ಮೂಲಕ ಸಮಾಜದಲ್ಲಿ ತಮಗೆ ಗೆ ವೈಯಕ್ತಿಕ ಮಾನನಷ್ಟವನ್ನು ಉಂಟು ಮಾಡಲು ಪ್ರಯತ್ನಿಸಿರುವ ಕೆಪಿಸಿಸಿ ವಕ್ತಾರರಾದ ಎಂ.ಲಕ್ಷ್ಮಣ್ ಮತ್ತು ರಮೇಶ್ ಬಾಬು ವಿರುದ್ಧ ಬೆಂಗಳೂರು, ಮೈಸೂರು, ಮಂಗಳೂರು ಮತ್ತು ಹುಬ್ಬಳ್ಳಿಯ ನ್ಯಾಯಾಲಯಗಳಲ್ಲಿ ಸಿವಿಲ್ ಮತ್ತು ಕ್ರಿಮಿನಲ್ ಮಾನನಷ್ಟಮೊಕದ್ದಮೆಗಳನ್ನು ಹೂಡುವುದಾಗಿ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ತಿಳಿಸಿದ್ದಾರೆ.
ಬೆಂಗಳೂರು : ಸುಳ್ಳು ಆಪಾದನೆ ಮಾಡುವ ಮೂಲಕ ಸಮಾಜದಲ್ಲಿ ತಮಗೆ ಗೆ ವೈಯಕ್ತಿಕ ಮಾನನಷ್ಟವನ್ನು ಉಂಟು ಮಾಡಲು ಪ್ರಯತ್ನಿಸಿರುವ ಕೆಪಿಸಿಸಿ ವಕ್ತಾರರಾದ ಎಂ.ಲಕ್ಷ್ಮಣ್ ಮತ್ತು ರಮೇಶ್ ಬಾಬು ವಿರುದ್ಧ ಬೆಂಗಳೂರು, ಮೈಸೂರು, ಮಂಗಳೂರು ಮತ್ತು ಹುಬ್ಬಳ್ಳಿಯ ನ್ಯಾಯಾಲಯಗಳಲ್ಲಿ ಸಿವಿಲ್ ಮತ್ತು ಕ್ರಿಮಿನಲ್ ಮಾನನಷ್ಟಮೊಕದ್ದಮೆಗಳನ್ನು ಹೂಡುವುದಾಗಿ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ತಿಳಿಸಿದ್ದಾರೆ.
ತಮ್ಮ ವಿರುದ್ಧ ಲಕ್ಷ್ಮಣ್ ಮತ್ತು ರಮೇಶ್ ಬಾಬು ಕಳೆದ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾಡಿರುವಸಂಬಂಧ ಪತ್ರಿಕಾ ಪ್ರಕಟಣೆಯಲ್ಲಿ ಪ್ರತಿಕ್ರಿಯಿಸಿರುವ ಅವರು, ಯಡಿಯೂರು ವಾರ್ಡಿನ ಪಾಲಿಕೆ ಸದಸ್ಯನಾಗಿದ್ದ ತಾವು ಹಾಗೂ ತಮ್ಮ ಪತ್ನಿ ಪೂರ್ಣಿಮಾ ಅವರು ಕಾರ್ಯ ನಿರ್ವಹಿಸಿದ್ದ ಅವಧಿಯಲ್ಲಿ ವಾರ್ಡಿಗೆ .250 ಕೋಟಿ ಅನುದಾನ ಮಂಜೂರು ಮಾಡಿಸಿಕೊಂಡಿದ್ದಾರೆ ಎಂದು ಸತ್ಯಕ್ಕೆ ದೂರವಾದ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
undefined
ತಾವು ಹಾಗೂ ತಮ್ಮ ಪತ್ನಿ ಸದಸ್ಯರಾಗಿದ್ದ 2010-11ರಿಂದ 2022-23ರ ವರೆಗಿನ ಅವಧಿಯಲ್ಲಿ .87.42 ಕೋಟಿ ನೀಡಲಾಗಿದೆ. ಕಳೆದ 14 ವರ್ಷದಲ್ಲಿ ಯಡಿಯೂರು ವಾರ್ಡ್‌ನ 18 ಬಡಾವಣೆಗಳ ವ್ಯಾಪ್ತಿಯ ರಸ್ತೆಗಳಲ್ಲಿ ಕೇವಲ ಮೂರು ಬಾರಿ ಡಾಂಬರೀಕರಣ ಮಾಡಲಾಗಿದೆ. ನಗರದ ಬೇರೆ ವಾರ್ಡ್‌ನಂತೆ ಒಂದೆರಡು ಬಾರಿ ಡಾಂಬರೀಕರಣ ಮಾಡುವ ಪದ್ಧತಿ ಯಡಿಯೂರು ವಾರ್ಡ್‌ನಲ್ಲಿ ಇಲ್ಲ. ಸಾರ್ವಜನಿಕರಿಗೆ 6 ತಿಂಗಳ ಮುಂಚಿತವಾಗಿಯೇ ಆಯಾ ರಸ್ತೆಗಳ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಹಿತಿ ನೀಡುವುದರಿಂದ ಯಡಿಯೂರು ವಾರ್ಡ್‌ನಲ್ಲಿ ರಸ್ತೆ ಅಗೆತದ ಕಾರ್ಯಗಳು ಕೇವಲ ಶೇ.0.1ರಷ್ಟುಮಾತ್ರ ಇರುತ್ತದೆ ಎಂದು ಹೇಳಿದ್ದಾರೆ.
ಯಡಿಯೂರು ಕೆರೆ ಅಭಿವೃದ್ಧಿಗೆ .16 ಕೋಟಿ ಬಿಡುಗಡೆಯಾಗಿದೆ ಎಂಬ ಸುಳ್ಳು ಮಾಹಿತಿ ನೀಡಿದ್ದಾರೆ. ಆದರೆ, ಯಡಿಯೂರು ಕೆರೆ ಅಭಿವೃದ್ಧಿಗೆ ಕಳೆದ 14 ವರ್ಷದಲ್ಲಿ ಸ್ವಾಮಿ ವಿವೇಕಾನಂದ ಪ್ರತಿಮೆ ನಿರ್ಮಾಣವೂ ಸೇರಿದಂತೆ ಕೇವಲ .4.15 ಕೋಟಿ ಬಿಡುಗಡೆಯಾಗಿದೆ ಎಂದು ತಿಳಿಸಿದ್ದಾರೆ.
ಯಡಿಯೂರು ವಾರ್ಡ್ ವ್ಯಾಪ್ತಿಯ ಕಾಮಗಾರಿಗಳನ್ನು ಕೇವಲ ಮೂರು ಮಂದಿ ಗುತ್ತಿಗೆದಾರರು ಮಾತ್ರವೇ ನಿರ್ವಹಿಸುತ್ತಾರೆ ಎಂಬ ಸುಳ್ಳಿನ ಕಂತೆಯನ್ನು ಮಾಧ್ಯಮಗಳ ಮುಂದೆ ಹೇಳಿದ್ದಾರೆ. ಆದರೆ ಕಳೆದ 14 ವರ್ಷಗಳ ಅವಧಿಯಲ್ಲಿ 143 ಗುತ್ತಿಗೆದಾರರು ಕಾಮಗಾರಿಗಳನ್ನು ಮಾಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಕಳೆದ 14 ವರ್ಷದಲ್ಲಿ ಕಾಂಗ್ರೆಸ್ ಪಕ್ಷದ ಆಡಳಿತಾವಧಿಯಲ್ಲಿ ನಡೆದಿರುವ 122ಕ್ಕೂ ಹೆಚ್ಚು ಬೃಹತ್ ಹಗರಣಗಳನ್ನು ದಾಖಲೆ ಸಹಿತ ಬಹಿರಂಗಪಡಿಸಿ 28 ಪ್ರಕರಣಗಳನ್ನು ಕಾನೂನು ಹೋರಾಟದಲ್ಲಿ ಗೆಲ್ಲುವ ಮೂಲಕ ಸುಮಾರು .8,600 ಕೋಟಿಗೂ ಹೆಚ್ಚು ಮೌಲ್ಯದ ಸರ್ಕಾರಿ ಆಸ್ತಿ ಪಾಲಿಕೆಗೆ ಮತ್ತು ಸರ್ಕಾರದ ವಶಕ್ಕೆ ವಾಪಸ್ ಬರುವಂತೆ ಮಾಡಲಾಗಿದೆ. ಇದರಿಂದ ಕಂಗೆಟ್ಟಿರುವ ಕಾಂಗ್ರೆಸ್ಸಿಗರು ತಮ್ಮ ವಿರುದ್ಧವೇ ಆರೋಪ ಮಾಡುತ್ತಿದ್ದಾರೆ. ದಾಖಲೆಗಳನ್ನು ನೀಡದೇ ಅಸತ್ಯವಾದ ವಿಷಯಗಳನ್ನು ಮಾಧ್ಯಮಗಳ ಮುಂದೆ ಪ್ರಚಾರ ಮಾಡುತ್ತಿದ್ದಾರೆ ಎಂದು ಎನ್.ಆರ್.ರಮೇಶ್ ತಿರುಗೇಟು ನೀಡಿದ್ದಾರೆ.