ಮಾಜಿ ಶಾಸಕ ಎಚ್.ಪಿ. ಮಂಜುನಾಥ್ ಗೆ ವಿಧಾನ ಪರಿಷತ್ ಸ್ಥಾನ ಕಲ್ಪಿಸಲು ಒತ್ತಾಯ

Published : Jan 31, 2024, 12:54 PM IST
ಮಾಜಿ ಶಾಸಕ ಎಚ್.ಪಿ. ಮಂಜುನಾಥ್  ಗೆ ವಿಧಾನ ಪರಿಷತ್ ಸ್ಥಾನ ಕಲ್ಪಿಸಲು ಒತ್ತಾಯ

ಸಾರಾಂಶ

ಮಾಜಿ ಶಾಸಕ ಎಚ್.ಪಿ. ಮಂಜುನಾಥ್ಅವರನ್ನು ವಿಧಾನ ಪರಿಷತ್ ಸದಸ್ಯರಾಗಿ ಜನಸೇವೆ ಮಾಡಲು ಅವಕಾಶ ಕಲ್ಪಿಸಬೇಕೆಂದು ಕಾಂಗ್ರೆಸ್ ತಾಲೂಕು ಘಟಕದ ನಾಯಕ ಸಮಾಜದ ಮುಖಂಡರು ಒತ್ತಾಯಿಸಿದ್ದಾರೆ.

  ಹುಣಸೂರು :  ಮಾಜಿ ಶಾಸಕ ಎಚ್.ಪಿ. ಮಂಜುನಾಥ್ಅವರನ್ನು ವಿಧಾನ ಪರಿಷತ್ ಸದಸ್ಯರಾಗಿ ಜನಸೇವೆ ಮಾಡಲು ಅವಕಾಶ ಕಲ್ಪಿಸಬೇಕೆಂದು ಕಾಂಗ್ರೆಸ್ ತಾಲೂಕು ಘಟಕದ ನಾಯಕ ಸಮಾಜದ ಮುಖಂಡರು ಒತ್ತಾಯಿಸಿದ್ದಾರೆ.

ಕಳೆದ 15 ವರ್ಷಗಳಿಂದ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗೆ ದುಡಿದಿರುವ ಮಾಜಿ ಶಾಸಕ ಎಚ್.ಪಿ. ಮಂಜುನಾಥ್ ಪಕ್ಷದ ಚತುರ ಸಂಘಟನಾಕಾರರಾಗಿಯೂ ಗುರುತಿಸಿಕೊಂಡಿದ್ದಾರೆ. ಅವರ ಅಧಿಕಾರಾವಧಿಯಲ್ಲಿ ತಾಲೂಕು ಸಾಕಷ್ಟು ಅಭಿವೃದ್ಧಿ ಕಂಡಿದೆ. ಈ ನಿಟ್ಟಿನಲ್ಲಿ ಅವರ ಸೇವೆಯನ್ನು ಪಕ್ಷ ಮತ್ತು ಜನತೆ ಪಡೆಯಲು ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತೊಮ್ಮೆ ಸೂಕ್ತ ಅವಕಾಶ ನೀಡಬೇಕೆಂದು ಅವರು ಮಂಗಳವಾರ ಆಯೋಜಿಸಿದ್ದ ಸುದ್ದಿಗೋಷ್ಟಿಯಲ್ಲಿ ಒತ್ತಾಯಿಸಿದರು. ಪಕ್ಷದ ನಾಯಕ ಸಮಾಜದ ಮುಖಂಡರಾದ ತಾಲೂಕು ನಾಯಕ ಸಂಘದ ಉಪಾಧ್ಯಕ್ಷ ಚೌಡನಾಯಕ, ವೆಂಕಟೇಶನಾಂಕ, ಶಿವಣ್ಣ, ಮಯೂರ, ಮಹೇಶ್ ಇದ್ದರು.

ಬಿಜೆಪಿಗೆ 400 ಕ್ಕೂ ಹೆಚ್ಚು ಸ್ಥಾನ

ಶಿವಮೊಗ್ಗ (ಜ.31): 2024ರ ಲೋಕಸಭಾ ಚುನಾವಣೆಯಲ್ಲಿ 400ಕ್ಕೂ ಹೆಚ್ಚು ಸ್ಥಾನಗಳಿಂದ ಬಿಜೆಪಿ ಗೆಲ್ಲಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಭವಿಷ್ಯ ನುಡಿದರು. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ 2024ರ ಲೋಕಸಭಾ ಚುನಾವಣೆ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಲಿದ್ದಾರೆ ಎಂದರು. ಕಳೆದ ಬಾರಿಗಿಂತ ಹೆಚ್ಚು ಸ್ಥಾನವನ್ನು ನಾವು ಈ ಬಾರಿ ಗೆಲ್ಲುತ್ತೇವೆ. ಶಿವಮೊಗ್ಗದಲ್ಲಿಯೂ ಕೂಡ ಒಳ್ಳೆಯ ವಾತಾವರಣವಿದೆ. ಅಭಿವೃದ್ಧಿಯ ಹಿನ್ನಲೆಯಿದೆ. ನಾವು ಮಾಡಿದ ಅಭಿವೃದ್ಧಿ ಕೆಲಸಗಳೇ ನಮ್ಮನ್ನು ಬಾರಿ ಅತ್ಯಧಿಕ ದಾಖಲೆ ರೀತಿಯ ಗೆಲ್ಲಿಸುತ್ತದೆ. ಬಿಜೆಪಿ ಸೀಟುಗಳನ್ನು ಪಡೆದು ಕೇಂದ್ರದಲ್ಲಿ ಕಾರ್ಯಕರ್ತರನ್ನು ಒಳಗೊಂಡತೆ ನಾಯಕರುಗಳೆಲ್ಲ ಸೇರಿಕೊಂಡು ಈ ಬಿಜೆಪಿ ಸರ್ಕಾರ ರಚನೆಯಾಗುತ್ತದೆ ಎಂದರು.

ಲೋಕಸಭಾ ಕ್ಷೇತ್ರದ ಸಂಚಾಲಕ ಹಾಗೂ ಮಾಜಿ ಶಾಸಕ ರಘುಪತಿ ಮಾತನಾಡಿ, ಶ್ರೀರಾಮಮಂದಿರ ಪ್ರತಿಷ್ಠಾಪನೆ ಆದ ಮೇಲೆ ಜನರು ಚುನಾವಣೆಗಾಗಿಯೇ ಕಾಯುತ್ತಿದ್ದಾರೆ. ಬಿಜೆಪಿಯನ್ನು ಯಾವಾಗ ಗೆಲ್ಲಿಸುತ್ತೇವೆ ಎಂಬ ಉತ್ಸಾಹದಲ್ಲಿ ಇದ್ದಾರೆ. ಬಿಜೆಪಿ ಗೆಲ್ಲುವಿಗೆ ಸಂಕಲ್ಪ ತೊಟ್ಟಿದ್ದಾರೆ. ಇಡೀ ಜಿಲ್ಲೆಯಲ್ಲೂ ಕೂಡ ಅಭಿವೃದ್ಧಿ ಕೆಲಸ ಆಗಿದೆ ಎಂದು ಹೇಳಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ.ಮೇಘರಾಜ್ ಮಾತನಾಡಿ, ಬಿಜೆಪಿ ಕಚೇರಿಯಲ್ಲಿ ಲೋಕಸಭಾ ಚುನಾವಣಾ ಕಾರ್ಯಾಲಯ ಆರಂಭಗೊಂಡಿದೆ. ಜಿಲ್ಲೆಯಲ್ಲಿ ಬಿಜೆಪಿಯ ಪರವಾದ ಅಲೆ ಎದ್ದಿದೆ ಎಂದರು. ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ, ವಿಪ ಸದಸ್ಯರಾದ ಡಿ.ಎಸ್.ಅರುಣ್, ಎಸ್. ರುದ್ರೇಗೌಡ, ಚುನಾವಣಾ ನಿರ್ವಹಣಾ ಸಮಿತಿ ಅಧ್ಯಕ್ಷ ಆರ್.ಕೆ.ಸಿದ್ರಾಮಣ್ಣ, ಜಿಲ್ಲಾ ಪ್ರಭಾರ ಗಿರೀಶ್ ಪಟೇಲ್, ಪ್ರಮುಖರಾದ ಎಸ್.ದತ್ತಾತ್ರಿ, ಶಿವರಾಜ್, ಮಾಲತೇಶ್ ಮತ್ತಿತರರು ಇದ್ದರು.

ಬಿಜೆಪಿ ವಿರುದ್ಧ ಕುತಂತ್ರ ಬಗ್ಗೆ ಎಚ್ಚರವಿರಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವ ಮುಖ ಇಟ್ಟುಕೊಂಡು ಶೋಷಿತ ವರ್ಗಗಳ ಸಮಾವೇಶ ಮಾಡಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ಪ್ರಶ್ನಿಸಿದರು. ನಗರದ ಶುಭ ಮಂಗಳ ಸಮುದಾಯ ಭವನದಲ್ಲಿ ಬಿಜೆಪಿ ಗ್ರಾಮ ಚಲೋ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಅನೇಕ ಪಕ್ಷಗಳು ಬಿಜೆಪಿ ವಿರುದ್ಧ ಕೆಲಸ ಮಾಡುತ್ತಿವೆ. ಹಾಗಾಗಿ ಎಚ್ಚರಿಕೆಯಿಂದ ಕೆಲಸ ಮಾಡಬೇಕಿದೆ. ಹಿಂದುಳಿದ ಹಾಗೂ ಶೋಷಿತ ವರ್ಗಕ್ಕೆ ಕಾಂಗ್ರೆಸ್ ಏನೂ ಮಾಡಲಿಲ್ಲ. ಆದಾಗ್ಯೂ ಚಿತ್ರದುರ್ಗದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪರ ಮಾತನಾಡಿದ್ದಾರೆ. 

PREV
Read more Articles on
click me!

Recommended Stories

KSRTC ಬಸ್ ಡ್ರೈವರ್ ಹಾರ್ನ್ ಮಾಡಿದ್ದೇ ತಪ್ಪಾಯ್ತಂತೆ; ಊರಿನ ಜನರೆಲ್ಲಾ ಸೇರಿಕೊಂಡು ಧರ್ಮದೇಟು ಕೊಟ್ಟರು!
ಮೈಸೂರು ಅರಮನೆ ವರಹ ದ್ವಾರದ ಮೇಲ್ಛಾವಣಿ ಕುಸಿತ; ಪ್ರವಾಸಿಗರ ಗೈರಿನಿಂದ ತಪ್ಪಿದ ಭಾರೀ ಅನಾಹುತ