ಎ.ನಾರಾಯಣಸ್ವಾಮಿಗೆ ಚಿತ್ರದುರ್ಗ ಲೋಕಸಭಾ ಟಿಕೆಟ್‌ ನೀಡುವಂತೆ ಆಗ್ರಹ

By Kannadaprabha News  |  First Published Mar 14, 2024, 10:35 AM IST

ಕೇತ್ರದ ಪ್ರಗತಿ ಹಾಗೂ ಜನಸಾಮಾನ್ಯರ ದ್ವನಿಯಾಗಿರುವ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಅವರಿಗೆ ಚಿತ್ರದುರ್ಗ ಲೋಕಸಭಾ ಟಿಕೆಟ್‌ ನೀಡುವಂತೆ ರಾಜ್ಯ ಮಾದಿಗ ಮಹಾಸಭಾ ಹೋರಾಟ ಸಮಿತಿಯ ಹಿರಿಯ ಮುಖಂಡ ಅನೇಕಲ್‌ ಕೆ.ನಾರಾಯಣಸ್ವಾಮಿ ಒತ್ತಾಯಿಸಿದ್ದಾರೆ.


 ಪಾವಗಡ :  ಕೇತ್ರದ ಪ್ರಗತಿ ಹಾಗೂ ಜನಸಾಮಾನ್ಯರ ದ್ವನಿಯಾಗಿರುವ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಅವರಿಗೆ ಚಿತ್ರದುರ್ಗ ಲೋಕಸಭಾ ಟಿಕೆಟ್‌ ನೀಡುವಂತೆ ರಾಜ್ಯ ಮಾದಿಗ ಮಹಾಸಭಾ ಹೋರಾಟ ಸಮಿತಿಯ ಹಿರಿಯ ಮುಖಂಡ ಅನೇಕಲ್‌ ಕೆ.ನಾರಾಯಣಸ್ವಾಮಿ ಒತ್ತಾಯಿಸಿದ್ದಾರೆ.

ಈ ಕುರಿತು ಬುಧವಾರ ಸುದ್ದಿಗಾರರ ಜೊತೆ ಮಾತನಾಡಿ, ಈ ದೇಶದ ಪ್ರಗತಿ ಮತ್ತು ಸುಭದ್ರತೆಗೆ ಮೋದಿಜಿ ಪ್ರಧಾನಿಯಾಗಬೇಕು. ಈ ಹಿನ್ನಲೆಯಲ್ಲಿ ಪಾವಗಡ ಸೇರಿದಂತೆ ಚಿತ್ರದುರ್ಗ ಕ್ಷೇತ್ರ ಎಸ್‌ಸಿಗೆ ಮೀಸಲಿಗಿದೆ. ಇದೇ ಕ್ಷೇತ್ರದಲ್ಲಿ ಕಳೆದ ಬಾರಿಯಲ್ಲಿ ಸ್ವರ್ಧಿಸಿದ್ದ ಎ.ನಾರಾಯಣಸ್ವಾಮಿ ಜಯಭೇರಿ ಸಾಧಿಸಿದ್ದರು. ಕ್ಷೇತ್ರದ ಪ್ರಗತಿಗೆ ವಿಶೇಷ ಒತ್ತು ನೀಡಿದ್ದು, ಪಕ್ಷ ಸಂಘಟನೆ ಸಾಮಾಜಿಕ ನ್ಯಾಯದ ಪರ ಹೋರಾಟದಲ್ಲಿ ಭಾಗಿಯಾಗಿದ್ದಾರೆ. ಹಾಗಾಗಿ ಬಿಜೆಪಿ ಟಿಕೆಟ್‌ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಅವರಿಗೆ ನೀಡುವಂತೆ ಕೇಂದ್ರ ಮತ್ತು ರಾಜ್ಯ ಬಿಜೆಪಿ ವರಿಷ್ಠರಲ್ಲಿ ಮನವಿ ಮಾಡಿದ್ದಾರೆ.

Latest Videos

undefined

ಬಿಜೆಪಿಯ ಮಧುಗಿರಿ ಸಂಘಟನಾತ್ಮಕ ಜಿಲ್ಲೆ ಹಾಗೂ ಪಾವಗಡ ತಾಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು.

ಅನಂತ ಹೆಗಡೆ ವಜಾ ಮಾಡಲಿ

ಬೆಂಗಳೂರು (ಮಾ.11): ಸಂವಿಧಾನ ಬದಲಾವಣೆಗಾಗಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ಗೆಲ್ಲಿಸಿಕೊಡಬೇಕು ಎಂದಿರುವ ಸಂಸದ ಅನಂತ್‌ಕುಮಾರ್ ಹೆಗಡೆ ಕರೆ ಭಾರತೀಯ ಜನತಾ ಪಕ್ಷದ ಗುಪ್ತ ಅಜೆಂಡಾದ ಭಾಗ. ಹೆಗಡೆ ಅವರ ಅಭಿಪ್ರಾಯಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಒಪ್ಪಿಗೆ ಇಲ್ಲದಿದ್ದರೆ ಕೂಡಲೇ ಪಕ್ಷದಿಂದ ವಜಾ ಮಾಡಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಅಲ್ಲದೆ, ಸಂವಿಧಾನ ಬದಲಾವಣೆಯ ಮಾತನಾಡಿರುವ ಅನಂತಕುಮಾರ್‌ ಹೆಗಡೆ ಅವರನ್ನು ಚುನಾವಣಾ ಸ್ಪರ್ಧೆಯಿಂದ ಶಾಶ್ವತವಾಗಿ ಅನರ್ಹಗೊಳಿಸಬೇಕು ಎಂದು ಲೋಕಸಭೆ ಸ್ಪೀಕರ್‌ ಅವರಿಗೆ ಮನವಿ ಮಾಡಿದ್ದಾರೆ. ಈ ಬಗ್ಗೆ ಅವರು ಪತ್ರಿಕಾ ಹೇಳಿಕೆ ನೀಡಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ನಮ್ಮ ಸಂವಿಧಾನ ಸರ್ವಧರ್ಮಗಳನ್ನೂ ಸಮಭಾವದಿಂದ ನೋಡುತ್ತದೆ. ಪ್ರತಿಯೊಬ್ಬ ಪ್ರಜೆಗೂ ತನ್ನ ನಂಬಿಕೆಯ ಧರ್ಮವನ್ನು ಪಾಲಿಸಿಕೊಂಡು ಬರುವ ಸ್ವಾತಂತ್ರ್ಯವನ್ನು ಸಂವಿಧಾನ ನೀಡಿದೆ. ಹೀಗಿರುವಾಗ ಸಂವಿಧಾನವನ್ನೇ ಬದಲಾಯಿಸಿ ಅನಂತ್ ಕುಮಾರ್ ಹೆಗಡೆ ಅವರು ಯಾವ ಹಿಂದೂಧರ್ಮವನ್ನು ರಕ್ಷಿಸಲು ಹೊರಟಿದ್ದಾರೆ? ಹೆಗಡೆಯವರ ಹೇಳಿಕೆಯನ್ನು ಗಮನಿಸಿದರೆ ಬಾಬಾಸಾಹೇಬ್ ಅಂಬೇಡ್ಕರ್ ರಚಿಸಿ ಕೊಟ್ಟ ಸಂವಿಧಾನಕ್ಕಿಂತ ಮೊದಲು ಇದ್ದ ಮನು ಪ್ರಣೀತ ಸಂವಿಧಾನವನ್ನು ಜಾರಿಗೊಳಿಸುವ ದುಷ್ಠ ಆಲೋಚನೆ ಹೆಗಡೆ ಮತ್ತು ಅವರ ಪಕ್ಷಕ್ಕೆ ಇದೆ ಎನ್ನುವುದು ಸ್ಪಷ್ಟ ಎಂದು ಹೇಳಿದ್ದಾರೆ.

ಸರ್ಕಾರ ಬೀಳಿಸೋಕೆ ಶಾಸಕರಿಗೆ ಬಿಜೆಪಿಯವರಿಂದ ತಲಾ 50 ಕೋಟಿ ಆಮಿಷ: ಡಿಕೆಶಿ ಆರೋಪ

ಅನರ್ಹಗೊಳಿಸಲಿ: ಪಕ್ಷದ ವರಿಷ್ಠರ ಬೆಂಬಲ ಇಲ್ಲದೆ ಅನಂತಕುಮಾರ ಹೆಗಡೆಯಂತಹ ಸಂಸದನೊಬ್ಬ ಈ ರೀತಿ ನಿರ್ಭೀತಿಯಿಂದ ಸಂವಿಧಾನ ವಿರೋಧಿ ಹೇಳಿಕೆಗಳನ್ನು ನೀಡಲು ಸಾಧ್ಯ ಇಲ್ಲ. ಸಂವಿಧಾನಕ್ಕೆ ಬದ್ಧನಾಗಿ ಕಾರ್ಯನಿರ್ವಹಿಸುತ್ತೇನೆ ಎಂದು ಪ್ರಮಾಣ ವಚನ ಸ್ವೀಕರಿಸಿರುವ ಅನಂತ್ ಕುಮಾರ್ ಹೆಗಡೆ, ಅದೇ ಸಂವಿಧಾನದ ವಿರುದ್ಧ ಹೇಳಿಕೆ ನೀಡಿರುವುದು ಖಂಡಿತ ಶಿಕ್ಷಾರ್ಹ ಅಪರಾಧ. ಇದನ್ನು ಲೋಕಸಭಾಧ್ಯಕ್ಷರು ಗಮನಕ್ಕೆ ತೆಗೆದುಕೊಂಡು ಹೆಗಡೆ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು. ಅವರನ್ನು ಚುನಾವಣಾ ಸ್ಪರ್ಧೆಯಿಂದ ಶಾಶ್ವತವಾಗಿ ಅನರ್ಹಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

click me!