ಬಾಬರಿ ಮಸೀದಿ ಧ್ವಂಸ: ದಕ್ಷಿಣ ಕನ್ನಡದಲ್ಲಿ ನಿಷೇಧಾಜ್ಞೆ

By Kannadaprabha News  |  First Published Dec 6, 2019, 11:22 AM IST

ಡಿ.6ರಂದು ಬಾಬರಿ ಮಸೀದಿ ಕೆಡವಿದ ದಿನದ ಪ್ರಯುಕ್ತ ದಕ್ಷಿಣ ಕನ್ನಡದಲ್ಲಿ ಶುಕ್ರವಾರ ಬೆಳಗ್ಗೆ 6ರಿಂದ ಮಧ್ಯರಾತ್ರಿ 12ರವರೆಗೆ ಕಮಿಷನರೇಟ್‌ ವ್ಯಾಪ್ತಿಯಲ್ಲಿ ನಿರ್ಬಂಧಕಾಜ್ಞೆ ಘೋಷಿಸಲಾಗಿದೆ.


ಮಂಗಳೂರು(ಡಿ.06): ಡಿ.6ರಂದು ಬಾಬರಿ ಮಸೀದಿ ಕೆಡವಿದ ದಿನದ ಪ್ರಯುಕ್ತ ದಕ್ಷಿಣ ಕನ್ನಡದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಆದೇಶ ಹೊರಡಿಸಲಾಗಿದೆ.

ಮಂಗಳೂರು ನಗರ ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯಲ್ಲಿ ವಿವಿಧ ಮುಸ್ಲಿಂ ಸಂಘಟನೆಗಳು ಕರಾಳ ದಿನ ಆಚರಿಸುವ ಹಾಗೂ ಹಿಂದೂ ಸಂಘಟನೆಗಳು ವಿಜಯೋತ್ಸವ ಆಚರಿಸುವ ಸಾಧ್ಯತೆಗಳಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಶುಕ್ರವಾರ ಬೆಳಗ್ಗೆ 6ರಿಂದ ಮಧ್ಯರಾತ್ರಿ 12ರವರೆಗೆ ಕಮಿಷನರೇಟ್‌ ವ್ಯಾಪ್ತಿಯಲ್ಲಿ ನಿರ್ಬಂಧಕಾಜ್ಞೆ ಘೋಷಿಸಲಾಗಿದೆ.

Tap to resize

Latest Videos

ಈ ಬಾರಿ ಬಾಬ್ರಿ ಮಸೀದಿ ಧ್ವಂಸ ‘ಸಂಭ್ರಮ’ ಇಲ್ಲ?

ಜಿಲ್ಲಾ ಪೊಲೀಸ್‌ ವ್ಯಾಪ್ತಿಯಲ್ಲಿ ಬೆಳಿಗ್ಗೆ 6 ರಿಂದ ಡಿ. 7 ರ ಬೆಳಿಗ್ಗೆ 6 ಗಂಟೆ ವರೆಗೆ ಸೆ. 144 ರ ಪ್ರಕಾರ ನಿಷೇಧಾಜ್ಞೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಮಂಗಳೂರು ನಗರ ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯು ಅತಿ ಸೂಕ್ಷ್ಮ ಪ್ರದೇಶವಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ಪೊಲೀಸ್‌ ಕಾಯ್ದೆ 1963ರ ಕಲಂ 35ರ ಅನ್ವಯ ಈ ಆದೇಶವನ್ನು ನಗರ ಪೊಲೀಸ್‌ ಕಮಿಷನರ್‌ ಡಾ.ಹರ್ಷ ಹೊರಡಿಸಿದ್ದಾರೆ.

ವೈದ್ಯೆ ರೇಪ್, ಕೊಲೆ ಪ್ರಕರಣ: ನಾಲ್ವರೂ ಆರೋಪಿಗಳು ಪೊಲೀಸ್ ಎನ್‌ಕೌಂಟರ್‌ಗೆ ಬಲಿ!

click me!