ಬಡವರು ರೈತರ ಕಷ್ಟ ಅರಿತಿದ್ದು ದೇವರಾಜು ಅರಸು ಮಾತ್ರ: ಸಚಿವೆ ಶೋಭಾ ಕರಂದ್ಲಾಜೆ

By Sathish Kumar KH  |  First Published Aug 20, 2023, 5:54 PM IST

ರಾಜ್ಯದ ಹಿಂದುಳಿದ ವರ್ಗಗಳ ಸಮಸ್ಯೆಗಳನ್ನು ಅರಿತಿದ್ದ ದಿ.ಶ್ರೀ. ಡಿ ದೇವರಾಜ ಅರಸು ಬಡವರು, ರೈತರ ಸಮಸ್ಯೆಗಳಿಗೆ ದನಿಯಾಗಿದ್ದರು.


ಉಡುಪಿ (ಆ.20): ರಾಜ್ಯದ ಹಿಂದುಳಿದ ವರ್ಗಗಳ ಸಮಸ್ಯೆಗಳನ್ನು ಅರಿತಿದ್ದ ದಿ.ಶ್ರೀ. ಡಿ ದೇವರಾಜ ಅರಸು ಬಡವರು, ರೈತರ ಸಮಸ್ಯೆಗಳಿಗೆ ದನಿಯಾಗಿ, ವಿವಿಧ ಕಾರ್ಯಕ್ರಮಗಳ ಮೂಲಕ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕವಾಗಿ ಶಕ್ತಿ ತುಂಬಿದ ಮಹಾನ್ ವ್ಯಕ್ತಿ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಜಿಲ್ಲಾಡಳಿತ , ಜಿಲ್ಲಾ ಪಂಚಾಯತ್ ಉಡುಪಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ವತಿಯಿಂದ , ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಆಯೋಜಿಸಿದ್ದ, ಹಿಂದುಳಿದ ವರ್ಗಗಳ ಧೀಮಂತ ನಾಯಕ, ಪರಿವರ್ತನೆಯ ಹರಿಕಾರ, ರಾಜ್ಯದ ಮಾಜಿ ಮುಖ್ಯಮಂತ್ರಿ ದಿ.ಶ್ರೀ.ಡಿ ದೇವರಾಜ ಅವರಸು ಅವರ 108 ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

Tap to resize

Latest Videos

undefined

ಅರಸು ಅವರು , ಉಳುವವನೇ ಹೊಲದೊಡೆಯ ಕಾರ್ಯಕ್ರಮದ ಮೂಲಕ ರೈತರ ಅಭಿವೃಧ್ದಿಗೆ ಶ್ರಮಿಸಿದ್ದು, ಗ್ರಾಮೀಣ ಭಾಗದಿಂದ ನಗರ ಪ್ರದೇಶಕ್ಕೆ ಅಗಮಿಸುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಹಾಸ್ಟೆಲ್ ಗಳ ನಿರ್ಮಾಣ, ಮೀಸಲಾತಿ ನಿಯಮಗಳ ಮೂಲಕ ಹಿಂದುಳಿದ ವರ್ಗಗಳ ಬೆಳವಣಿಗೆಗೆ ಅಪಾರ ಕೊಡುಗೆ ನೀಡಿದ್ದು, ಶತಮಾನಗಳ ಕಾಲ ನೆನಪಿನಲ್ಲಿಕೊಟ್ಟಳುವಂತಹ ಕಾರ್ಯಕ್ರಮಗಳನ್ನು ಜಾರಿಗೆ ತರುವ ಮೂಲಕ ಸದಾ ಸ್ಮರಣೀಯರಾಗಿದ್ದಾರೆ ಎಂದರು.

ಕೃಷಿ ಸಚಿವರ ಲಂಚ ಬೇಡಿಕೆ ಪ್ರಕರಣಕ್ಕೆ ಟ್ವಿಸ್ಟ್‌ ಕೊಟ್ಟ ಸಿಐಡಿ: ಮಂಡ್ಯ ಮಾತ್ರವಲ್ಲ, ಮೈಸೂರಿನವರ ಕೈವಾಡವೂ ಇದೆ

 ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಯಶ್ಪಾಲ್ ಎ ಸುವರ್ಣ ಮಾತನಾಡಿ, ರಾಜ್ಯ ಕಂಡ ಧೀಮಂತ ನಾಯಕ ಡಿ.ದೇವರಾಜ ಅರಸು ಅವರು ರಾಜ್ಯದ ಜನಸಂಖ್ಯೆಯಲ್ಲಿ ಬಹುಸಂಖ್ಯಾತವಾಗಿರುವ ಹಿಂದುಳಿದ ವರ್ಗಗಳ ಅಭಿವೃಧ್ದಿಗೆ ಶ್ರಮಿಸಿದ್ದಾರೆ. ಕರಾವಳಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಹಿಂದುಳಿದ ವರ್ಗಗಳ ಬಹುತೇಕ ಮಂದಿ ಆರ್ಥಿಕವಾಗಿ ಹಿಂದುಳಿದಿದ್ದು, ಅವರೆಲ್ಲರನ್ನೂ ಒಗ್ಗೂಡಿಸಿ ಶಕ್ತಿ ತುಂಬಬೇಕಿದೆ. ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗಾಗಿ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಿಸಿಎಂ ಹಾಸ್ಟೆಲ್‌ಗಳ ನಿರ್ಮಾಣ ನಡೆಯಬೇಕು ಮತ್ತು ಕೋಟಿ ಚೆನ್ನಯ್ಯ ಸೇನಾ ಆಯ್ಕೆ ಪೂರ್ವ ತರಬೇತಿಯ ಶಾಲೆಯ ಪುನಾರಾರಂಭ ಆಗಬೇಕಿದೆ ಎಂದರು. ದೇವರಾಜ ಅರಸು ಅವರ ವ್ಯಕ್ತಿತ್ವ ಮತ್ತು ಸಾಧನೆ ಕುರಿತು ರಾಷ್ಟ್ರ ಪ್ರಶಸ್ತಿ ವಿಜೇತ ಮಾಜಿ ಶಿಕ್ಷಕ ಹಾಗೂ ಡಿ.ದೇವರಾಜ ಅರಸು ಜಿಲ್ಲಾ ಮಟ್ಟದ ಪ್ರಶಸ್ತಿ ಪುರಸ್ಕೃತರಾದ ಮಲ್ಪೆ ರಾಘವೇಂದ್ರ ಉಪನ್ಯಾಸ ನೀಡಿದರು.

ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿ.ಪಂ. ಸಿಇಓ ಪ್ರಸನ್ನ ಹೆಚ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ ಹಾಕೆ, ಅಪರ ಜಿಲ್ಲಾಧಿಕಾರಿ ಮಮತಾ ದೇವಿ, ನಗರಸಭೆ ಪೌರಾಯುಕ್ತ ರಾಯಪ್ಪ, ಭಾರತ ಸೇವಾ ದಳದ ಕೇಂದ್ರ ಸಮಿತಿ ಸದಸ್ಯ ಆರೂರು ತಿಮ್ಮಪ್ಪ ಶೆಟ್ಟಿ ಉಪಸ್ಥಿತರಿದ್ದರು.

ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಅತೀ ಹೆಚ್ಚು ಅಂಕ ಪಡೆದ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ವಿದ್ಯಾರ್ಥಿಗಳಿಗೆ ಅಭಿನಂದನೆ, ದೇವರಾಜ ಅರಸು ಜಯಂತಿ ಪ್ರಯುಕ್ತ ಆಯೋಜಿಸಿದ್ದ ವಿವಿಧ ಸ್ಪರ್ದೇಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಣೆ ಹಾಗೂ ಹಿಂದುಳಿದ ವರ್ಗದ ವಿವಿಧ ಯೋಜನೆಯ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲಾಯಿತು. ವಿದ್ಯಾರ್ಥಿ ನಿಲಯಗಳ ವಿದ್ಯಾರ್ಥಿಗಳಿದ ಮನೋರಂಜನಾ ಕಾರ್ಯಕ್ರಮ ನಡೆಯಿತು.

click me!