ದೇವರಾಯನದುರ್ಗ ಅರಣ್ಯ ಒತ್ತುವರಿ: ಸರ್ಕಾರಕ್ಕೆ ನೋಟಿಸ್‌

By Kannadaprabha News  |  First Published Nov 3, 2023, 8:25 AM IST

ತುಮಕೂರು ತಾಲೂಕಿನ ಊರ್ಡಿಗೇರಿ ಹೋಬಳಿಯ ದೇವರಾಯನದುರ್ಗ ಮೀಸಲು ಅರಣ್ಯ ಪ್ರದೇಶದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವ ಜಮೀನನ್ನು ತೆರವುಗೊಳಿಸಿ ಸುಪರ್ದಿಗೆ ತೆಗೆದುಕೊಳ್ಳಲು ನಿರ್ದೇಶಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿ ಸಂಬಂಧ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ನೀಡಿದೆ.


 ಬೆಂಗಳೂರು :  ತುಮಕೂರು ತಾಲೂಕಿನ ಊರ್ಡಿಗೇರಿ ಹೋಬಳಿಯ ದೇವರಾಯನದುರ್ಗ ಮೀಸಲು ಅರಣ್ಯ ಪ್ರದೇಶದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವ ಜಮೀನನ್ನು ತೆರವುಗೊಳಿಸಿ ಸುಪರ್ದಿಗೆ ತೆಗೆದುಕೊಳ್ಳಲು ನಿರ್ದೇಶಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿ ಸಂಬಂಧ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ನೀಡಿದೆ.

ಈ ಕುರಿತಂತೆ ವಕ್ಕೋಡಿ ಗ್ರಾಮದ ಮಾರಣ್ಣ ಪಾಳೆಗಾರ ಎಂಬುವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಆದೇಶ ಮಾಡಿದೆ.

Tap to resize

Latest Videos

undefined

ಅರ್ಜಿಯಲ್ಲಿನ ಪ್ರತಿವಾದಿಗಳಾದ ಅರಣ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ, ತುಮಕೂರು ಜಿಲ್ಲಾಧಿಕಾರಿ, ತುಮಕೂರು ತಹಶೀಲ್ದಾರ್‌, ತುಮಕೂರು ವಲಯದ ಉಪ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಜಮೀನು ಒತ್ತುವರಿ ಮಾಡಿಕೊಂಡಿದ್ದಾರೆ ಎನ್ನಲಾದ ಖಾಸಗಿ ವ್ಯಕ್ತಿ ವಡ್ಡರಹಳ್ಳಿ ನಿವಾಸಿ ಜೆ. ಶ್ವೇತಾಕುಮಾರಿ ಅವರಿಗೆ ನ್ಯಾಯಪೀಠ ನೋಟಿಸ್ ಜಾರಿಗೊಳಿಸಿದೆ.

ಜತೆಗೆ, ಅರ್ಜಿ ಕುರಿತು ಎಲ್ಲಾ ಪ್ರತಿವಾದಿಗಳು ನಾಲ್ಕು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸಬೇಕು ಎಂದು ನಿರ್ದೇಶಿಸಿ ವಿಚಾರಣೆಯನ್ನು ಡಿ.6ಕ್ಕೆ ಮುಂದೂಡಿದೆ.

ದೇವರಾಯನದುರ್ಗ ಮೀಸಲು ಅರಣ್ಯ ಪ್ರದೇಶದಲ್ಲಿ 3 ಎಕರೆ 20 ಗುಂಟೆ ಜಮೀನನ್ನು ಖಾಸಗಿ ವ್ಯಕ್ತಿ ಜೆ. ಶ್ವೇತಕುಮಾರಿ ಒತ್ತುವರಿ ಮಾಡಿಕೊಂಡು, ಕಟ್ಟಡ ನಿರ್ಮಾಣ ಮಾಡಿದ್ದಾರೆ. ಜತೆಗೆ ಮುತ್ತಸಂದ್ರ ಗ್ರಾಮದ ಸರ್ವೆ ನಂಬರ್ 17 ಹಾಗೂ ವಡ್ಡರಹಳ್ಳಿ ಗ್ರಾಮದ ಸರ್ವೆ ನಂಬರ್ 26ರ ಗೋಮಾಳ ಜಾಗದಲ್ಲಿ ಕಾಂಕ್ರಿಟ್ ರಸ್ತೆ ನಿರ್ಮಿಸಿದ್ದಾರೆ. ಹಾಗಾಗಿ, ಒತ್ತುವರಿ ತೆರವುಗೊಳಿಸಿ ಜಾಗವನ್ನು ಅರಣ್ಯ ಇಲಾಖೆಗೆ ಸುಪರ್ದಿಗೆ ಪಡೆಯುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ಗ್ರಾಮ ನಕಾಶೆ ಡೌನ್ಲೋಡ್ ಮಾಡಿ

ಬೆಂಗಳೂರು (ಅ.21): ರೈತರು ವ್ಯವಸಾಯದ ಉದ್ದೇಶಗಳಿಗಾಗಿ ತಿರುಗಾಡಲು ಬಳಸುವ ಖಾಸಗಿ ಜಮೀನುಗಳಲ್ಲಿ ಕಾಲುದಾರಿ, ಬಂಡಿದಾರಿ ಅಥವಾ ಸೌಲಭ್ಯ ಒದಗಿಸುವ ಸಲುವಾಗಿ ಕ್ರಮವಹಿಸುವ ಕುರಿತು ಸರ್ಕಾರದಿಂದ ಮಹತ್ವದ ಆದೇಶವನ್ನು ಹೊರಡಿಸಲಾಗಿದೆ. ಕಾಲುದಾರಿ ತೆರವುಗೊಳಿಸಲು ತಹಶೀಲ್ದಾರರಿಗೆ ಸಂಪೂರ್ಣ ಅಧಿಕಾರ ಕೊಡಲಾಗಿದೆ.

ರಾಜ್ಯದಲ್ಲಿ ರೈತರು ವ್ಯವಸಾಯದ ಉದ್ದೇಶಗಳಿಗಾಗಿ ಬಳಸುವ ಕೃಷಿ ಸಲಕರಣೆಗಳನ್ನು ಸಾಗಿಸಲು ಅನ್ನ ಭೂಮಾಲೀಕರ ಖಾಸಗಿ ಜಮೀನುಗಳಲ್ಲಿ ತಿರುಗಾಡಲು 'ದಾರಿ' ಸಮಸ್ಯೆ ಇದ್ದು, ಬಳಕೆದಾರ ರೈತರುಗಳಿಗೆ ತೊಂದರೆಗಳಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. 'ದಾರಿ' ಸಮಸ್ಯೆ ಬಹುಕಾಲದಿಂದಲೂ ಇದ್ದು, ಅಕ್ಕಪಕ್ಕದ ಜಮೀನುಗಳ ರೈತರು ಕೆಲವು ಖಾಸಗಿ ಜಮೀನುಗಳನ್ನು ದಾಟಿಕೊಂಡು ಕೃಷಿ ಪೂರಕ ಚಟುವಟಿಕೆಗಳನ್ನು ಜರುಗಿಸಲು ಹಾಗೂ ಬೆಳೆದ ಫಸಲನ್ನು ಹೊರತರಲಾಗದ ನಷ್ಟ ಹೊಂದುತ್ತಿರುವುದು ಕೆಲವು ಮಾಧ್ಯಮಗಳಿಂದ ತಿಳಿದು ಬಂದಿರುತ್ತದೆ. ಈ ಬಗ್ಗೆ ಸಾರ್ವಜನಿಕರಿಂದ ಮನವಿ/ದೂರುಗಳು ಸ್ವೀಕೃತವಾಗಿರುತ್ತವೆ.

ಪ್ರಾಚಾರ್ಯರ ಕಿರುಕುಳಕ್ಕೆ ತರಗತಿ ಕೋಣೆಯಲ್ಲಿಯೇ ಕುಸಿದು ಬಿದ್ದ ಕಾಲೇಜು ಪ್ರಾಧ್ಯಾಪಕಿ

ಗ್ರಾಮ ನಕಾಶೆ ಕಂಡ ದಾರಿಗಳಲ್ಲಿ ಬಳಕೆದಾರ ರೈತರು ತಿರುಗಾಡಲು ಅವಕಾಶವಿದ್ಯಾಗ್ಯೂ ಕೆಲವು ಭೂಮಾಲೀಕರು ಬಳಕೆದಾರ ರೈತರುಗಳಿಗೆ ತಿರುಗಾಡಲು ಅಡ್ಡಿಪಡಿಸುತ್ತಿರುವುದು ಅಥವಾ ಅಂತಹ ಜಾಗಗಳನ್ನು ಮುಚ್ಚಿರುವುದು ಕಂಡುಬಂದಿದೆ. ಜೊತಗೆ, ರೈತರು ಬಹುಕಾಲದಿಂದಲೂ ಬಳಸುವ ದಾರಿಗಳಲ್ಲಿ ತಿರುಗಾಡಲು ಕೆಲವು ರೈತರ ಮಧ್ಯದ ವೈಯಕ್ತಿಕ ದ್ವೇಷ/ಅಸೂಯೆಗಳು ಮತ್ತು ಹೊಂದಾಣಿಕೆಯ ಕೊರತೆಯಿಂದಾಗಿ ಬಳಕೆದಾರ ರೈತರ ತೊಂದರೆಗಳಿಗೆ ಬಹುತೇಕ ಕಾರಣಗಳಾಗಿರುವುದು ಕಂಡುಬರುತ್ತದೆ.

ಕರ್ನಾಟಕ ಭೂ ಕಂದಾಯ ನಿಯಮಗಳು, 1966ರ ನಿಯಮ 59 ರಲ್ಲಿ 'ದಾರಿಯ ಹಕ್ಕುಗಳು ಮತ್ತು ಇತರೆ ಅನುಭೋಗದ ಹಕ್ಕುಗಳ ಬಗ್ಗೆ ತಿಳಿಸಲಾಗಿದ್ದು ಸಂಬಂಧಪಟ್ಟ ಜಮೀನುಗಳ ಭಾಗಿದಾರರು ಒಪ್ಪಿರುವಂತಹ ಸಂದರ್ಭದಲ್ಲಿ ಹಕ್ಕುಗಳ ದಾಖಲೆ ರಿಜಿಸ್ಟರ್‌ನಲ್ಲಿ ನಮೂದು ಮಾಡಲು ಅವಕಾಶವಿದೆ.The Indian Easement Act, 1882 ರಂತೆ ಪ್ರತಿ ಜಮೀನಿನ ಮಾಲೀಕರು ಅಥವಾ ಜಮೀನಿನ ಅನುಭವದಲ್ಲಿರುವವರು ಅವರ ಭೂಮಿಯನ್ನು ಪ್ರವೇಶಿಸುವ ಹಕ್ಕು ಮತ್ತು ವಹಿವಾಟಿನ (Easement)ಹಕ್ಕನ್ನು ಹೊಂದಿದ್ದಾರೆ. ಇದಕ್ಕೆ ಬಾಜುದಾರರಿಂದ ಯಾವುದೇ ಹಸ್ತಕ್ಷೇಪಕ್ಕೆ ಅಥವಾ ಈ ಬಗ್ಗೆ ಸದರಿ ಹಕ್ಕನ್ನು ಕ್ಷೀಣಿಸುವುದಕ್ಕೆ ಸಾಧ್ಯವಿರುವುದಿಲ್ಲ ಎಂಬುದಾಗಿ ತಿಳಿಸಲಾಗಿದ್ದು, ಈ ನಿಟ್ಟಿನಲ್ಲಿ ಕ್ರಮವಹಿಸಲು ಅವಕಾಶವಿದೆ.

click me!