ಕಾಂಗ್ರೆಸ್‌ನಿಂದ ಮಾತ್ರ ರಾಜ್ಯದ ಅಭಿವೃದ್ಧಿ: ಪರಮೇಶ್ವರ್‌

By Kannadaprabha News  |  First Published Apr 3, 2023, 5:56 AM IST

ಬಡವರ ಕಷ್ಟತಿಳಿದಿರುವ ಕಾಂಗ್ರೆಸ್‌ ಆಡಳಿತದಲ್ಲಿ ಮಾತ್ರ ರಾಜ್ಯ ಅಭಿವೃದ್ಧಿಯಾಗಲು ಸಾಧ್ಯವಾಗಿದ್ದು, ದಿನ ನಿತ್ಯ ವಸ್ತುಗಳ ಬೆಲೆ ಹೆಚ್ಚಿಸುತ್ತಿರುವ ಬಿಜೆಪಿ ಪಕ್ಷಕ್ಕೆ ಮತ ನೀಡದೆ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸುವಂತೆ ಶಾಸಕ ಡಾ.ಜಿ.ಪರಮೇಶ್ವರ್‌ ತಿಳಿಸಿದರು.


 ಕೊರಟಗೆರೆ :  ಬಡವರ ಕಷ್ಟತಿಳಿದಿರುವ ಕಾಂಗ್ರೆಸ್‌ ಆಡಳಿತದಲ್ಲಿ ಮಾತ್ರ ರಾಜ್ಯ ಅಭಿವೃದ್ಧಿಯಾಗಲು ಸಾಧ್ಯವಾಗಿದ್ದು, ದಿನ ನಿತ್ಯ ವಸ್ತುಗಳ ಬೆಲೆ ಹೆಚ್ಚಿಸುತ್ತಿರುವ ಬಿಜೆಪಿ ಪಕ್ಷಕ್ಕೆ ಮತ ನೀಡದೆ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸುವಂತೆ ಶಾಸಕ ಡಾ.ಜಿ.ಪರಮೇಶ್ವರ್‌ ತಿಳಿಸಿದರು.

ಪಟ್ಟಣದ ಮಾರುತಿ ಕಲ್ಯಾಣ ಮಂಟಪದಲ್ಲಿ ಪರಿಶಿಷ್ಠ ಪಂಗಡ ಸಮುದಾಯ ಮುಖಂಡರ ಚಿಂತನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

Tap to resize

Latest Videos

ಮೇ ತಿಂಗಳಲ್ಲಿ ನಡೆಯುವ ಚುನಾವಣೆಯಲ್ಲಿ ತಮ್ಮ ಬೆಂಬಲದಿಂದ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರುವುದು ಶೇ.100ರಷ್ಟುಖಚಿತವಾಗಿದ್ದು ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದ ತಕ್ಷಣ ಜನತೆಗೆ ಅನುಕೂಲವಾಗುವ ಯೋಜನೆಗಳಾದ ಪ್ರತಿ ಕುಟುಂಬದ ಮಹಿಳೆಗೆ ತಿಂಗಳಿಗೆ 2 ಸಾವಿರ ರು.ಗಳಂತೆ ಪ್ರತಿ ತಿಂಗಳು ಅವರ ಬ್ಯಾಂಕ್‌ ಖಾತೆಗೆ ಜಮಾ ಮಾಡಲಾಗುವುದು. ಅದರೊಂದಿಗೆ ಪ್ರತಿ ಮನೆಗೆ 200 ಯೂನಿಟ್‌ ವಿದ್ಯುತ್‌ ಉಚಿತ, ಕುಟುಂಬದ ಸದಸ್ಯರಿಗೆ ತಲಾ 10 ಕೆ.ಜಿ ಅಕ್ಕಿ ಹಾಗೂ ನಿರುದ್ಯೋಗಿ ಪದವೀಧರರಿಗೆ ಪ್ರತಿ ತಿಂಗಳು 3 ಸಾವಿರ, ಡಿಪ್ಲೊಮೋ, ಪದವಿ ನಿರುದ್ಯೋಗಿ ಯುವಕ ಯುವತಿಯರಿಗೆ 1500 ರು. ನಿರುದ್ಯೋಗಿ ಭತ್ಯ ನೀಡಲಾಗುವುದು. ಚುನಾವಣೆಯಲ್ಲಿ ಬಡವರ ಅಭಿವೃದ್ಧಿಯ ಪಕ್ಷವಾದ ಕಾಂಗ್ರೆಸ್‌ ಪಕ್ಷಕ್ಕೆ ಮತ ನೀಡಿ ಬಿಜೆಪಿ ಮತ್ತು ಜೆಡಿಎಸ್‌ ಪಕ್ಷವನ್ನು ಮನೆಗೆ ಕಳುಹಿಸಿ ಎಂದು ಮನವಿ ಮಾಡಿದರು.

ಜಿ.ಪಂ. ಮಾಜಿ ಅಧ್ಯಕ್ಷೆ ಶಾಂತಲ ರಾಜಣ್ಣ ಮಾತನಾಡಿ, ರಾಜ್ಯ ಬಿಜೆಪಿ ಸರ್ಕಾರದಲ್ಲಿ ಯಾವುದೇ ಅಭಿವೃದ್ಧಿ ಕೆಲಸವಾಗಿಲ್ಲ. ದಿನನಿತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. 400 ರು.ಗಳಿದ್ದ ಗ್ಯಾಸ್‌ ಸಿಲಿಂಡರ್‌ ಬೆಲೆ ಇಂದು 1200 ರು.ಗೆÜ ಏರಿಕೆಯಾಗಿದೆ. ರಾಜ್ಯದಲ್ಲಿ ಪರಿಶಿಷ್ಠ ಪಂಗಡದವರಿಗೆ ಮೀಸಲಾತಿಯಲ್ಲಿ ಅನ್ಯಾಯ ಮಾಡಲಾಗಿದ್ದು, ಸಮುದಾಯದ ಎಲ್ಲಾ ಬಾಂಧವರು ಮುಂದಿನ ದಿನಗಳಲ್ಲಿ ನುಡಿದಂತೆ ನಡೆಯುವ ಹಾಗೂ ಬಡಜನತೆಯ ಬಗ್ಗೆ ಕಾಳಜಿ ಉಳ್ಳ ಪಕ್ಷವಾದ ಕಾಂಗ್ರೆಸ್‌ನ್ನು ರಾಜ್ಯದಲ್ಲಿ ಹಾಗೂ ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಡಾ.ಜಿ.ಪರಮೇಶ್ವರ್‌ರವರನ್ನು ಬೆಂಬಲಿಸಬೇಕಾಗಿದೆ ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಚಪ್ಪಾಳೆ ತಟ್ಟುವ ಹಾಗೂ ಜೈಕಾರ ಹಾಕುವ ಮೂಲಕ ಮುಂದಿನ ಚುನಾವಣೆಯಲ್ಲಿ ಡಾ.ಜಿ.ಪರಮೇಶ್ವರ್‌ರವರನ್ನು ಬೆಂಬಲಿಸುವುದಾಗಿ ತಿಳಿಸಿದರು.

ವೇದಿಕೆಯಲ್ಲಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಚಂದ್ರಶೇಖರಗೌಡ, ಮಾಜಿ ಅಧ್ಯಕ್ಷ ರಾಮಕೃಷ್ಣ, ಕೆ.ಪಿ.ಸಿ.ಸಿ ಸದಸ್ಯ ಎ.ಡಿ.ಬಲರಾಮಯ್ಯ, ಕೇಶವಮೂರ್ತಿ, ದಿನೇಶ್‌, ಜಿ.ಪಂ ಮಾಜಿ ಸದಸ್ಯ ಪ್ರಸನ್ನಕುಮಾರ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾದ ಕೊಡ್ಲಹಳ್ಳಿ ಅಶ್ವತ್ಥನಾರಾಯಣ್‌, ಅರಕೆರೆ ಶಂಕರ್‌, ಮಾಜಿ ಅಧ್ಯಕ್ಷ ಮೈಲಾರಪ್ಪ, ಪ.ಪಂ.ಸದಸ್ಯರಾದ ತಾಲೂಕು ಯುವಕಾಂಗ್ರೆಸ್‌ ಅಧ್ಯಕ್ಷ ವಿನಯ್‌ಕುಮಾರ್‌, ಕೆ.ಆರ್‌.ಓಬಳರಾಜು, ಸಮುದಾಯದ ಮುಖಂಡರಾದ ಲಾರಿ ಸಿದ್ದಪ್ಪ, ನರಸಿಂಹಯ್ಯ, ಗಟ್ಲಹಳ್ಳಿ ಕುಮಾರ್‌, ಮಂಜುನಾಥ್‌, ವೆಂಕಟೇಶ್‌ಮೂರ್ತಿ, ವಾಸುದೇವ್‌, ರಂಗರಾಜು, ಸಿದ್ದಲಿಂಗಪ್ಪ, ಕಸ್ತೂರಮ್ಮ, ಬುಕ್ಕಾಪಟ್ಟಣ ಗ್ರಾ.ಪಂ. ಮಾಜಿ ಅಧ್ಯಕ್ಷೆ ಲಕ್ಷ್ಮೇ, ಸವಿತಾ, ಕವಿತಾ ಸರಿದಂತೆ ಇನ್ನಿತರ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

click me!