ತಿರುಪತಿ ರೀತಿ ಯಲ್ಲಮ್ಮನ ಗುಡ್ಡ ಅಭಿವೃದ್ಧಿ: ಸಚಿವ ಎಚ್‌.ಕೆ. ಪಾಟೀಲ್

Published : Feb 06, 2025, 08:48 AM IST
ತಿರುಪತಿ ರೀತಿ ಯಲ್ಲಮ್ಮನ ಗುಡ್ಡ ಅಭಿವೃದ್ಧಿ: ಸಚಿವ ಎಚ್‌.ಕೆ. ಪಾಟೀಲ್

ಸಾರಾಂಶ

ಫೆ.12ರಂದು ಭಾರತ ಹುಣ್ಣಿಮೆಗಾಗಿ ಸಕಲ ವ್ಯವಸ್ಥೆ ಮಾಡಲಾಗಿದೆ. ಕೇಂದ್ರದಿಂದ 100 ಕೋಟಿ ಮಂಜೂರಾಗಿದೆ. ಇದು ಮಾತ್ರವಲ್ಲದೇ ₹20 ಕೋಟಿ ಪ್ರಸಾದ ಯೋಜನೆಯಡಿ ಮಂಜೂರಾಗಿದೆ. ಇದಲ್ಲದೇ ರಾಜ್ಯ ಸರ್ಕಾರದಿಂದ ಕೂಡ ಸಾಕಷ್ಟು ಅನುದಾನ ನೀಡಲಾಗುತ್ತಿದೆ. ವಸತಿ ಗೃಹ, ದಾಸೋಹ ಭವನ, ಮೂಲಸೌಕರ್ಯ ಒಳಗೊಂಡ ಮಾಸ್ಟರ್‌ಪ್ಲಾನ್ ಬಹುತೇಕ ಸಿದ್ದಗೊಂಡಿದೆ: ಪ್ರವಾಸೋದ್ಯಮ ಇಲಾಖೆ ಸಚಿವ ಎಚ್‌. ಕೆ.ಪಾಟೀಲ್ 

ಬೆಳಗಾವಿ(ಫೆ.06): ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮ ದೇವಿ ಪವಿತ್ರ ಗುಡ್ಡದ ಅಭಿವೃದ್ಧಿಗೆ ತಿರುಪತಿ ತಿರುಮಲ ದೇವಸ್ಥಾನ (ಟಿಟಿಡಿ) ಅಭಿವೃದ್ಧಿಯನ್ನು ಮಾದರಿಯಾಗಿ ಇಟ್ಟುಕೊಂಡು ಯೋಜನೆ ರೂಪಿಸಲಾಗುವುದು ಎಂದು ಪ್ರವಾಸೋದ್ಯಮ ಇಲಾಖೆ ಸಚಿವ ಎಚ್‌.ಕೆ. ಪಾಟೀಲ್ ತಿಳಿಸಿದರು.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ಭಾರತಹುಣ್ಣಿಮೆ ವೇಳೆ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ಜಿಲ್ಲಾಡಳಿತ ವತಿಯಿಂದ ಜನಸಂದಣಿ ನಿರ್ವಹಣೆ, ಪಾರ್ಕಿಂಗ್, ಶೌಚಾಲಯ, ಎಲ್‌ಇಡಿ ಸ್ಟೀನ್ ಅಳವಡಿಕೆ ಸೇರಿ ಕಾಮಗಾರಿ ಆರಂಭಿಸಲಾಗಿದೆ. ದಾಸೋಹ ಭವನ ಮತ್ತು ಮೇವು ದಾಸೋಹ ಭವನ ನಿರ್ಮಾಣಕ್ಕೆ 1 ತಿಂಗಳಿನಲ್ಲಿ ಶಂಕುಸ್ಥಾಪನೆ ಮಾಡಲು ಪ್ರಯತ್ನಿಸಲಾಗುತ್ತಿದೆ ಎಂದು ಹೇಳಿದರು.

ವಿಜಯ್ ದೇವರಕೊಂಡಗೆ ಯಲ್ಲಮ್ಮನ ಗುಡ್ಡಕ್ಕೆ ಒಮ್ಮೆ ಬನ್ನಿ ಎಂದಿದ್ಯಾಕೆ ನೆಟ್ಟಿಗ?

ಸವದತ್ತಿ ಅಭಿವೃದ್ಧಿ ಮಂಡಳಿ ಪ್ರಗತಿ ಪರಿಶೀಲನೆ ಮಾಡಲಾಗಿದ್ದು, ಸಣ್ಣ ಪುಟ್ಟ ಕಾನೂನಾತ್ಮಕ ಸಮಸ್ಯೆಗಳನ್ನು ಜಿಲ್ಲಾಡಳಿತ ಬಗೆಹರಿಸಿದೆ. ಫೆ.12ರಂದು ಭಾರತ ಹುಣ್ಣಿಮೆಗಾಗಿ ಸಕಲ ವ್ಯವಸ್ಥೆ ಮಾಡಲಾಗಿದೆ. ಕೇಂದ್ರದಿಂದ 100 ಕೋಟಿ ಮಂಜೂರಾಗಿದೆ. ಇದು ಮಾತ್ರವಲ್ಲದೇ ₹20 ಕೋಟಿ ಪ್ರಸಾದ ಯೋಜನೆಯಡಿ ಮಂಜೂರಾಗಿದೆ. ಇದಲ್ಲದೇ ರಾಜ್ಯ ಸರ್ಕಾರದಿಂದ ಕೂಡ ಸಾಕಷ್ಟು ಅನುದಾನ ನೀಡಲಾಗುತ್ತಿದೆ. ವಸತಿ ಗೃಹ, ದಾಸೋಹ ಭವನ, ಮೂಲಸೌಕರ್ಯ ಒಳಗೊಂಡ ಮಾಸ್ಟರ್‌ಪ್ಲಾನ್ ಬಹುತೇಕ ಸಿದ್ದಗೊಂಡಿದೆ. ವೆಬ್‌ಸೈಟ್‌ನಲ್ಲೂ ಪ್ಲಾನ್ ಪ್ರಕಟಿಸಿ ಸಾರ್ವಜನಿಕರಿಂದ ಸಲಹೆಗಳನ್ನು ಸ್ವೀಕರಿಸಲಾಗುವುದು ಎಂದು ಹೇಳಿದರು.

ಬೆಳಗಾವಿ: ರೇಣುಕಾ ಯಲ್ಲಮ್ಮದೇವಿ ದೇವಸ್ಥಾನಕ್ಕೆ ಬಂತು ಶುಕ್ರದೆಸೆ, ತಿರುಪತಿ ಮಾದರಿ ಅಭಿವೃದ್ಧಿಗೆ ಸಂಕಲ್ಪ!

ಬೆಳಗಾವಿ: ರಾಜ್ಯದ ಪ್ರಮುಖ ಶಕ್ತಿ ದೇವತೆಯ ಕ್ಷೇತ್ರಗಳಲ್ಲೊಂದಾದ ಸುಕ್ಷೇತ್ರ ಸವದತ್ತಿಯ ರೇಣುಕಾ ಯಲ್ಲಮ್ಮ ದೇವಸ್ಥಾನಕ್ಕೆ ಕೊನೆಗೂ ಶುಕ್ರದೆಸೆ ಕೂಡಿಬಂದಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸವದತ್ತಿ ಶ್ರೀ ಯಲ್ಲಮ್ಮ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ನೀಡಿವೆ. ಈಗ ಕೇಂದ್ರ ಪ್ರವಾಸೋದ್ಯಮ ಸಚಿವಾಲಯ ₹100 ಕೋಟಿ ಅನುದಾನ ಮಂಜೂರು ಮಾಡಿತ್ತು. 

ಕಳೆದ ವರ್ಷ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ರಾಜ್ಯ ಸರ್ಕಾರವು ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಮಸೂದೆ ಅಂಗೀಕರಿಸುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಚಾಲನೆ ಕೊಟ್ಟಿತ್ತು. ಅಲ್ಲದೆ, ಇತ್ತೀಚೆಗಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇವಸ್ಥಾನದ ಆವರಣದಲ್ಲಿ ₹21 ಕೋಟಿ ವೆಚ್ಚದ ವಿವಿಧ ಅಭಿವೃ ದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಕ್ಷೇತ್ರವನ್ನು ಪ್ರವಾಸೋದ್ಯಮ ಕೇಂದ್ರವಾಗಿಸಲು, ಪ್ರವಾಸಿಗರನ್ನು ಆಕರ್ಷಿಸಲು ರಾಜ್ಯ ಸಚಿವ ಸಂಪುಟ ದೇವಾಲಯದ ಆವರಣದಲ್ಲಿ ರೋಪ್ ವೇ ನಿರ್ಮಾಣಕ್ಕೆ ಮಂಜೂರಾತಿ ನೀಡಿದೆ. 

ಲಕ್ಷಾಂತರ ಭಕ್ತರಿಗೆ ಅನುಕೂಲ ಕಲ್ಪಿಸಲು ಜಿಲ್ಲಾಡಳಿತ ಮಾಸ್ಟರ್ ಪ್ಲಾನ್ ಸಿದ್ಧಪಡಿಸುತ್ತಿದೆ. ದೇವಸ್ಥಾನ ಪ್ರವಾಸೋದ್ಯಮ ಅಭಿವೃದ್ಧಿಗೆ ಸುಮಾರು 1000 ಎಕರೆ ಭೂಮಿ ಹೊಂದಿದೆ. ಅಲ್ಲದೆ, ಮುಜರಾಯಿ ಇಲಾಖೆಗೆ ಒಳಪಟ್ಟಿರುವ ದೇವಾಲಯದ ಸುತ್ತಮುತ್ತಲು 87 ಎಕರೆ ಪ್ರದೇಶ, ಪ್ರವಾಸೋದ್ಯಮ ಇಲಾಖೆಗೆ ಸೇರಿದ 1000 ಎಕರೆ ಜಮೀನು ಲಭ್ಯವಿದೆ. 

ಮುಡಾ ಸಂಕಷ್ಟ ಬೆನ್ನಲ್ಲೇ ಸವದತ್ತಿ ಯಲ್ಲಮ್ಮ ದೇವಿ ಮೊರೆ ಹೋದ ಸಿಎಂ; ಪತ್ನಿ ಹೆಸರಲ್ಲಿ ಶಕ್ತಿ ದೇವತೆಗೆ ವಿಶೇಷ ಪೂಜೆ!

ಆಂಧ್ರಪ್ರದೇಶದ ತಿರುಪತಿ ಮಾದರಿಯಲ್ಲಿ ಶ್ರೀ ರೇಣುಕಾ ಯಲ್ಲಮ್ಮದೇವಿಯ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ವಸತಿ ಗೃಹಗಳು, ಯಾತ್ರಿ ನಿವಾಸ, ಶೌಚಾಲಯ, ಸ್ನಾನಗೃಹ, ಕುಡಿಯುವ ನೀರು ಮತ್ತಿತರ ಸೌಕರ್ಯ ಒದಗಿಸಲು ಉದ್ದೇಶಿಸಲಾಗಿದೆ. 

ಮೊದಲ ಹಂತದಲ್ಲಿ 2000 ಅತಿಥಿ ಕೊಠಡಿ ನಿರ್ಮಿಸಲು ಉದ್ದೇಶಿಸಲಾಗಿದೆ. ಈ ಕ್ಷೇತ್ರಕ್ಕೆ ಕರ್ನಾಟಕ ಮಹಾರಾಷ್ಟ್ರ, ತಮಿಳುನಾಡು, ಗೋವಾ ಸೇರಿದಂತೆ ರಾಜ್ಯ ಸೇರಿ ಹೊರರಾಜ್ಯಗಳಿಂದಲೂ ಭಕ್ತರು ಆಗಮಿಸುತ್ತಾರೆ. 2022ರ ಏಪ್ರಿಲ್‌ನಿಂದ 2023ರ ಮಾರ್ಚ್ ವರೆಗೆ ಅಂದಾಜು 1.23 ಕೋಟಿ ಜನ ಯಲಮ್ಮನ ಗುಡ್ಡಕ್ಕೆ ಭೇಟಿ ನೀಡಿದ್ದರು. ಈ ಅವಧಿಯಲ್ಲಿ 87 ಲಕ್ಷ ಭಕ್ತರು ದೇವಿ ದರ್ಶನ ಪಡೆದಿದ್ದಾರೆ ಎಂದು ಪ್ರವಾಸೋದ್ಯಮ ಇಲಾಖೆ ತಿಳಿಸಿತ್ತು. 

PREV
Read more Articles on
click me!

Recommended Stories

ನಮ್ಮ ಹಣ ನಮಗೆ ಬೇಕಾದವರಿಗೆ ನೀಡುತ್ತೇವೆ: ನ್ಯಾಷನಲ್ ಹೆರಾಲ್ಡ್ ಕೇಸಲ್ಲಿ ಸಮನ್ಸ್‌ಗೆ ಡಿಕೆಶಿ ಆಕ್ರೋಶ
ಬೆಂಗಳೂರು ಕಬ್ಬನ್‌ಪಾರ್ಕ್‌ ಪುಷ್ಪ ಪ್ರದರ್ಶನಕ್ಕೆ ಇಂದು ತೆರೆ