ಪ್ರಸಿದ್ಧ ಪಾವಗಡ ಶನಿಮಹಾತ್ಮ ದೇಗುಲಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ

By Suvarna News  |  First Published Aug 14, 2021, 12:38 PM IST
  • ಆಂಧ್ರ ಪ್ರದೇಶದಲ್ಲಿ ಸದ್ಯ ಕೊರೋನಾ ಸೋಂಕು ಹೆಚ್ಚಳ 
  • ಪಾವಗಡದ ಶನಿಮಹಾತ್ಮ ದೇವಸ್ಥಾನಕ್ಕೆ ಭಕ್ತರಿಗೆ ನಿರ್ಬಂಧ 

ತುಮಕೂರು(ಆ.14): ಆಂಧ್ರ ಪ್ರದೇಶದಲ್ಲಿ ಸದ್ಯ ಕೊರೋನಾ ಸೋಂಕು ಹೆಚ್ಚಳ ಹಿನ್ನೆಲೆ ಪಾವಗಡದ ಶನಿಮಹಾತ್ಮ ದೇವಸ್ಥಾನಕ್ಕೆ ಭಕ್ತರಿಗೆ ನಿರ್ಬಂಧ ವಿಧಿಸಲಾಗಿದೆ. 

ತುಮಕೂರಿನ ಪಾವಗಡದ ಶನಿಮಹಾತ್ಮ ದೇವಾಲಯದಲ್ಲಿ ವಿಶೇಷ ಪೂಜೆ, ಅಭಿಷೇಕಕ್ಕೆ ನಿರ್ಬಂಧ ವಿಧಿಸಲಾಗಿದೆ.  ಅರ್ಚಕರು ಮಾತ್ರ ಪೂಜೆ ಸಲ್ಲಿಸಲು ಅವಕಾಶ ನೀಡಲಾಗಿದೆ.

Tap to resize

Latest Videos

ಶ್ರಾವಣ ಮಾಸದ ಮೊದಲ ಶನಿವಾರ ಪ್ರಯುಕ್ತ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ದೇವಾಲಯಕ್ಕೆ ಭೇಟಿ ನೀಡುವ ಹಿನ್ನೆಲೆಯಲ್ಲಿ ನಿರ್ಬಂಧ ವಿಧಿಸಲಾಗಿದೆ. 

ಕರ್ನಾಟಕಕ್ಕೆ ಎದುರಾಯ್ತಾ 3ನೇ ಅಲೆ : ಮಕ್ಕಳಲ್ಲಿ ಹೆಚ್ಚಾದ ಸೋಂಕು

ಕೊರೋನಾ ಸೋಂಕು ಹರಡುವ ಭೀತಿಯಿಂದ ಶ್ರಾವಣ ಮಾಸದ ಶನಿವಾರ, ಭಾನುವಾರ, ಸೋಮವಾರ, ಸಾರ್ವತ್ರಿಕ ರಜಾ ದಿನ ಎಂದು ಘೋಷಿಸಿ ಭಕ್ತರ ಪ್ರವೇಶಕ್ಕೆ ಸಂಪೂರ್ಣ ನಿಷೇಧ ವಿಧಿಸಲಾಗಿದೆ. 

ಉಳಿದ ದಿನ ದೇವರ ದರ್ಶನಕ್ಕೆ ಅವಕಾಶ‌ವಿದ್ದು, ಹೂವು, ಹಣ್ಣು, ಪೂಜಾ ಸಾಮಾಗ್ರಿಗೆ ಕಡ್ಡಾಯ ನಿಷೇಧ ವಿಧಿಸಿ ಜಿಲ್ಲಾಧಿಕಾರಿ ಸೂಚನೆ ಮೇರೆಗೆ ದೇವಸ್ಥಾನ ಆಡಳಿತ ಮಂಡಳಿ ಆದೇಶ ಹೊರಡಿಸಿದೆ. 

click me!